ಹಿಂದು ಧರ್ಮವೇ ನೋಂದಣಿಯಾಗಿಲ್ಲ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಪ್ರತಿಕ್ರಿಯೆ

Date:

ಭಾರತದಲ್ಲಿ ಅನೇಕ ಸಂಸ್ಥೆಗಳು ನೋಂದಣಿ ಇಲ್ಲದೆಯೇ ಕಾರ್ಯನಿರ್ವಹಿಸುತ್ತಿವೆ. ಸ್ವತಃ ‘ಹಿಂದು ಧರ್ಮ’ವೇ ಎಲ್ಲೂ ನೋಂದಣಿಯಾಗಿಲ್ಲ ಎಂದು‌ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ತಮ್ಮ ಸಂಘ ನೋಂದಣಿ ಆಗದೇ ಇರುವುದನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -

ಹಿಂದುತ್ವ ಕೋಮುವಾದಿ ಸಂಘಟನೆಯಾದ ಆರ್‌ಎಸ್‌ಎಸ್, ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಇದೇ ಸಮಯದಲ್ಲಿ, ಅದರ ನೋಂದಣಿ, ಹಣಕಾಸು ಮೂಲ ಹಾಗೂ ಕಾನೂನಾತ್ಮಕ ಸ್ಥಾನಮಾನವನ್ನು ಪ್ರಶ್ನಿಸಿ ಮೋಹನ್ ಭಾಗವತ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಕೇರಳದ ಕಾರ್ಯಕ್ರಮವೊಂದರಲ್ಲಿ ಭಾಗವತ್ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

“ಸಂಘವು ಬ್ರಿಟಿಷರ ಕಾಲದಲ್ಲೇ ಆರಂಭವಾಗಿ ಈಗ 100 ವರ್ಷಗಳನ್ನು ಪೂರೈಸುತ್ತಿದೆ. ಕಳೆದ ಒಂದು ಶತಮಾನದಿಂದ ಕಾರ್ಯನಿರ್ವಹಿಸುತ್ತಿದ್ದರೂ, ಈವರೆಗೆ ಯಾವುದೇ ಸರ್ಕಾರ ಅಥವಾ ಪ್ರಾಧಿಕಾರ ನಮಗೆ ನೋಂದಣಿ ಮಾಡಿಕೊಳ್ಳುವಂತೆ ಕಡ್ಡಾಯ ಮಾಡಿಲ್ಲ. ಯಾವುದೇ ಸರ್ಕಾರವು ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿಲ್ಲ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ‘ನಿಮ್ಮ ಲೀಗಲ್ ಸ್ಟೇಟಸ್ ಏನು’; ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಖಡಕ್ ಪತ್ರ

“ಆರ್‌ಎಸ್‌ಎಸ್ ರಹಸ್ಯವಾಗಿ ಕೆಲಸ ಮಾಡುತ್ತಿಲ್ಲ. 1960ರ ದಶಕದಲ್ಲೇ ಸಂಘವು ತನ್ನ ಲಿಖಿತ ಸಂವಿಧಾನವನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಸರ್ಕಾರವೂ ಅದನ್ನು ನೋಂದಣಿಯ ಒತ್ತಾಯವಿಲ್ಲದೆ ಸ್ವೀಕರಿಸಿದೆ. ನಮ್ಮ ಎಲ್ಲ ಚಟುವಟಿಕೆಗಳು ಸಾರ್ವಜನಿಕವಾಗಿ ಮುಕ್ತವಾಗಿಯೇ ನಡೆಯುತ್ತವೆ” ಎಂದು ಹೇಳಿಕೊಂಡಿದ್ದಾರೆ.

“ಸರ್ಕಾರಿ ಹಣ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯ. ಯಾರು ಸರ್ಕಾರದ ಹಣ ಅಥವಾ ಅನುದಾನವನ್ನು ಪಡೆಯುತ್ತಾರೋ ಅವರಿಗೆ ಮಾತ್ರ ನೋಂದಣಿಯ ಅಗತ್ಯವಿರುತ್ತದೆ. ಆರ್‌ಎಸ್‌ಎಸ್ ಯಾವುದೇ ಸರ್ಕಾರಿ ಹಣವನ್ನು ಪಡೆಯುವುದಿಲ್ಲ” ಎಂದು ಭಾಗವತ್ ಸಮರ್ಥಿಸಿಕೊಂಡಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಶಂಕಿತ ವಸ್ತು ಪತ್ತೆ; ತನಿಖೆ ಬೆನ್ನಲ್ಲೇ ಅದು ಖಾಲಿ ಟ್ಯೂಬ್ ಎಂದ ಅಧಿಕಾರಿಗಳು!

ಬೆಂಗಳೂರು ನಗರದ ಸೋನೆಹಳ್ಳಿಕೆರೆ ವೃತ್ತದ ಸಮೀಪದ ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತಿರುವ ಖಾಲಿ...

ಕಮಲನಗರ | ಗುಳೆ ಹೋಗಬೇಡಿ, ಊರಲ್ಲಿಯೇ ವಿಬಿ-ಜಿ ರಾಮ್‌ ಜಿ ಕೆಲಸ ಮಾಡಿ

ಕೂಲಿ ಕಾರ್ಮಿಕರು ಗುಳೆ ಹೋಗದೆ ತಮ್ಮ ಗ್ರಾಮದಲ್ಲಿಯೇ ವಿಬಿ-ಜಿ ರಾಮ್‌ ಜಿ...

ಶಿವಮೊಗ್ಗ | ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ; ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ...

ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ನ ‘ಕಾಯಿಸುವ ಧೋರಣೆ’ಗೆ ಆಕಾಶ್ ಚೋಪ್ರಾ ಕಿಡಿ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು...