ದೆಹಲಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಆರ್‌ಎಸ್‌ಎಸ್‌ ಕಚೇರಿ ಪುನರ್‌ ನಿರ್ಮಾಣ

Date:

Advertisements

ನವದೆಹಲಿಯ ಝಂಡೇವಾಲನ್ ಪ್ರದೇಶದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಆರ್‌ಎಸ್‌ಎಸ್‌ನ ನೂತನ ಕಟ್ಟಡ ‘ಕೇಶವ್ ಕುಂಜ್’ ಪುನರ್ ನಿರ್ಮಾಣ ನೂತನ ಕಚೇರಿಯನ್ನು ನಿರ್ಮಾಣ ಮಾಡಲಾಗಿದೆ. ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

3.75 ಎಕರೆ ವಿಸ್ತೀರ್ಣದ ವಿಶಾಲ ಪ್ರದೇಶದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದ್ದು, 2018ರಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಪ್ರಾಚೀನ ಮತ್ತು ಆಧುನಿಕ ತಂತ್ರಗಳನ್ನು ಬಳಸಿಕೊಂಡು ಕಚೇರಿಯನ್ನು ನಿರ್ಮಿಸಲಾಗಿದೆ. 12 ಅಂತಸ್ತಿನ ಕಟ್ಟಡದಲ್ಲಿ 300 ಕೊಠಡಿಗಳಿವೆ. ಮೂರು ದೊಡ್ಡ ಸಭಾಂಗಣಗಳನ್ನು ಹೊಂದಿದ್ದು,1,300ಕ್ಕೂ ಹೆಚ್ಚು ಆಸನದ ಸಾಮರ್ಥ್ಯವನ್ನು ಹೊಂದಿದೆ.

ಗುಜರಾತ್ ಮೂಲದ ವಾಸ್ತುಶಿಲ್ಪಿ ಅನುಪ್ ಡೇವ್ ಕೇಶವ್ ಕುಂಜ್ ಅವರು ಕಟ್ಟಡದ ವಿನ್ಯಾಸ ಕಾರ್ಯವನ್ನು ಮಾಡಿದ್ದಾರೆ. ಕಚೇರಿ ಮತ್ತು ವಸತಿಗಳನ್ನು ಹೊಂದಿರುವ ಮೂರು ಕಟ್ಟಡಗಳಿಗೆ ಸಾಧನ, ಪ್ರೇರಣಾ ಮತ್ತು ಅರ್ಚನಾ ಎಂದು ಹೆಸರಿಸಲಾಗಿದೆ. ಕಟ್ಟಡದಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಸುಮಾರು 8,500 ಪುಸ್ತಕಗಳನ್ನು ಹೊಂದಿರುವ ಬೃಹತ್ ಗ್ರಂಥಾಲಯ, ಹೊರರೋಗಿ ಚಿಕಿತ್ಸಾಲಯ, ಐದು ಹಾಸಿಗೆಗಳ ಸಣ್ಣ ಒಳರೋಗಿ ಸೌಲಭ್ಯವಿರುವ ಚಿಕಿತ್ಸಾಲಯವನ್ನು ಹೊಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಟ್ರೋ ದರ ಏರಿಕೆ- ‘ಸತ್ತಂತೆಯೂ ಅತ್ತಂತೆಯೂ’ ಆಡುತ್ತಿರುವ ಈ ನಾಟಕ ನಿಲ್ಲಲಿ

ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ಆಯೋಜಿಸಲು, ಆರ್‌ಎಸ್‌ಎಸ್‌ ಮುಖಂಡರು ಮತ್ತು ಕಾರ್ಯಕರ್ತರಿಗೆ ವಸತಿ ಒದಗಿಸಲು ಹೊಸ ಕಚೇರಿಯನ್ನು ಬಳಸಲಾಗುತ್ತದೆ.

ಹಳೆಯ ಸಂಘದ ಕಚೇರಿಯನ್ನು ಪುನರ್ ನಿರ್ಮಿಸಲು ಕನಿಷ್ಠ 75,000 ಆರ್‌ಎಸ್‌ಎಸ್‌ ಕಾರ್ಯಕರ್ತರು ನೆರವು ನೀಡಿದ್ದಾರೆ ಎಂದು ಹೇಳಲಾಗಿದೆ. ಹೊಸದಾಗಿ ನಿರ್ಮಿಸಲಾದ ಸಂಕೀರ್ಣದಲ್ಲಿ ಫೆಬ್ರವರಿ 19ರಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.

1962ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಈ ಆರ್‌ಎಸ್‌ಎಸ್‌ ಕಚೇರಿಯಲ್ಲಿ ನವೀಕರಣ ಕಾಮಗಾರಿ ಪ್ರಾರಂಭಿಸಿದ್ದರಿಂದ 2016ರಿಂದ ಬಾಡಿಗೆ ಕಚೇರಿಯಲ್ಲಿ ಕಾರ್ಯಚರಿಸುತ್ತಿತ್ತು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X