‘ಆರ್‌ಟಿಐ ಕಾರ್ಯಕರ್ತ’ ಎಂಬುದು ಹೊಸ ದಂಧೆಯಾಗಿದೆ: ಸುಪ್ರೀಂ ಕೋರ್ಟ್

Date:

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ‘ಕಾರ್ಯಕರ್ತ’ರೆಂದು ಕರೆದುಕೊಳ್ಳುವುದು ಇತ್ತೀಚೆಗೆ ಹೊಸ ದಂಧೆಯಾಗಿ (ಬ್ಯುಸಿನೆಸ್‌) ಮಾರ್ಪಟ್ಟಿದೆ ಎಂದು ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಸ್ತೆ ಕಾಮಗಾರಿಗೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಪಂಜಾಬ್‌ನ ಆರ್‌ಟಿಐ ಕಾರ್ಯಕರ್ತನಿಗೆ ನಿರೀಕ್ಷಣಾ ಜಾಮೀನು ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಸಂದೀಪ್‌ ಮೆಹ್ತಾ ಹಾಗೂ ವಿಜಯ್‌ ಬಿಷ್ಣೋಯ್‌ ಅವರಿದ್ದ ವಿಭಾಗೀಯ ಪೀಠವು, ಆರೋಪಿ ಆರ್‌ಟಿಐ ಕಾರ್ಯಕರ್ತ ರಾಕೇಶ್‌ ಕುಮಾರ್‌ ಬೆಹ್ಲ್‌ ಮತ್ತು ಆತನ ಸಹಚರ ರಾಜೀವ್ ಕುಮಾರ್ ಅಲಿಯಾಸ್ ಮಿಂಟು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಜಾಗೊಳಿಸಿತು. ವಿಚಾರಣೆ ವೇಳೆ, ಸರ್ಕಾರಿ ಕಾಮಗಾರಿಗಳ ಮೇಲೆ ನಿಗಾ ಇಡಲು ಇವರಿಗಿರುವ ಅಧಿಕಾರವಾದರೂ ಏನು ಎಂದು ಪೀಠವು ಕಟುವಾಗಿ ಪ್ರಶ್ನಿಸಿತು. ಆರ್‌ಟಿಐ ಕಾರ್ಯಕರ್ತರೆಂದು ಹೇಳಿಕೊಳ್ಳುವುದು ಇದೀಗ ಹೊಸ ದಂಧೆಯಾಗಿದೆ; ಕೇಂದ್ರ ಸರ್ಕಾರ ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದೆ ಹಾಗೂ ಕಾಮಗಾರಿಯ ಉಸ್ತುವಾರಿಯನ್ನು ಸರ್ಕಾರವೇ ನೋಡಿಕೊಳ್ಳುತ್ತದೆ, ಹೀಗಿರುವಾಗ ಇದನ್ನು ಪ್ರಶ್ನಿಸಲು ನೀವ್ಯಾರು ಎಂದು ನ್ಯಾಯಮೂರ್ತಿ ಸಂದೀಪ್‌ ಮೆಹ್ತಾ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅಲ್ಲದೆ, ಆರ್‌ಟಿಐ ಕಾರ್ಯಕರ್ತನೆಂದು ಹೇಳಿಕೊಳ್ಳುವ ಇದೊಂದು ‘ಹಳದಿ ಪತ್ರಿಕೋದ್ಯಮ’ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಅರ್ಜಿಯನ್ನು ವಜಾಗೊಳಿಸಿದರು. ಇದಕ್ಕೆ ದನಿಗೂಡಿಸಿದ ನ್ಯಾಯಮೂರ್ತಿ ವಿಜಯ್‌ ಬಿಷ್ಣೋಯ್‌ ಅವರು, ರಸ್ತೆ ಕಾಮಗಾರಿಗಳ ಉಸ್ತುವಾರಿ ನೋಡಿಕೊಳ್ಳಲು ನೀವೇನಾದರೂ ಮೇಲಾಧಿಕಾರಿಯೇ ಎಂದು ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡರು.

ಇದನ್ನು ಓದಿದ್ದೀರಾ? ಫಿಫಾ ಜಗತ್ತಿನಲ್ಲಿ ಭಾರತದ ಹೆಜ್ಜೆಗುರುತು – ಕನ್ನಡಿಗ ಕೆಂಪಯ್ಯನವರ ಮರೆಯಲಾಗದ ಸಾಧನೆ

ಈ ಪ್ರಕರಣವು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಬಟಾಲಾದಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಗೆ ಸಂಬಂಧಿಸಿದ್ದಾಗಿದೆ. ಈ ಕಾಮಗಾರಿಗೆ ಇಬ್ಬರು ಆರೋಪಿಗಳು ಅಡ್ಡಿಪಡಿಸಿದ್ದರು. ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದೂರುದಾರರಿಗೆ ಬೆದರಿಕೆ ಹಾಕಿದ್ದಲ್ಲದೆ, ಸ್ಥಳದಲ್ಲಿದ್ದ ಕಾರ್ಮಿಕರ ಮೇಲೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದರು ಎಂದು ಪೊಲೀಸ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ರಸ್ತೆ ಕಾಮಗಾರಿಯಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕಾಗಿ ತಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪದಡಿ ಸಿಲುಕಿಸಲಾಗಿದೆ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಆದರೆ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿರುವುದು ಮತ್ತು ಹಲ್ಲೆ ನಡೆಸಿರುವುದು ಎಫ್‌ಐಆರ್‌ನಲ್ಲಿ ಸ್ಪಷ್ಟವಾಗಿರುವುದರಿಂದ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ಮೇ 14ರಂದೇ ಆದೇಶಿಸಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್ ಕೂಡ ಈ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಆರೋಪಿಗಳಿಗೆ ಹಿನ್ನಡೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...