ಭಾರತಕ್ಕೆ 3,000 ಉಕ್ರೇನಿಯನ್ನರ ಪ್ರವೇಶ, ಉಗ್ರಗಾಮಿ ಗುಂಪುಗಳಿಗೆ ತರಬೇತಿ – ವದಂತಿ; ಕೇಂದ್ರ ಸರ್ಕಾರ ಹೇಳಿದ್ದೇನು?

Date:

3,000 ಉಕ್ರೇನಿಯನ್ನರು ಭಾರತಕ್ಕೆ ಪ್ರವೇಶಿಸಿ, ಈಶಾನ್ಯ ರಾಜ್ಯಗಳಲ್ಲಿ ಅಡಗಿಕೊಂಡಿದ್ದಾರೆ. ಅವರು ಉಗ್ರಗಾಮಿ ಗುಂಪುಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ಭಾರೀ ವೈರಲ್ ಆಗಿದೆ. ಆರೋಪವನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, “ಈ ಪೋಸ್ಟ್‌ಗಳು ಸಂಪೂರ್ಣ ಸುಳ್ಳು” ಎಂದು ಹೇಳಿದೆ.

- Advertisement -

“ಸುಮಾರು 3,000ಕ್ಕೂ ಹೆಚ್ಚು ಉಕ್ರೇನಿಯನ್ನರು ಭಾರತಕ್ಕೆ ಪ್ರವೇಶಿಸಿದ್ದಾರೆ. ಅವರು ಅಮೆರಿಕದ ಬಾಡಿಗೆ ಸೈನಿಕರ ಬೆಂಬಲದೊಂದಿಗೆ ಈಶಾನ್ಯದಲ್ಲಿ ಅಡಗಿಕೊಂಡಿದ್ದಾರೆ. ಅಲ್ಲಿ ಅವರು ಬಂಡುಕೋರ ಗುಂಪುಗಳಿಗೆ ತರಬೇತಿ ನೀಡುತ್ತಿದ್ದಾರೆ. ಭಯೋತ್ಪಾದಕರಿಗೆ ಅಗ್ಗದ ಡ್ರೋನ್‌ಗಳನ್ನು ಪೂರೈಸುತ್ತಿದ್ದಾರೆ” ಎಂದು ಆರೋಪಿ ಕೆಲವು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಆರೋಪಗಳು ಮತ್ತು ಹೇಳಿಕೆಗಳು ಸಂಪೂರ್ಣ ಸುಳ್ಳು ಎಂದು ಕೇಂದ್ರ ಸರ್ಕಾರ ಹೇಳಿದೆ. “ಮಿಜೋರಾಂ ಮೂಲಕ ಮ್ಯಾನ್ಮಾರ್‌ಗೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಒಟ್ಟು 7 ವ್ಯಕ್ತಿಗಳನ್ನು (6 ಉಕ್ರೇನಿಯನ್ನರು ಮತ್ತು 1 ಅಮೆರಿಕದ ಪ್ರಜೆ) ಎನ್‌ಐಎ ಬಂಧಿಸಿದೆ. ವಲಸೆ ಮತ್ತು ಭದ್ರತಾ ಏಜೆನ್ಸಿಗಳು ಸಂಪೂರ್ಣ ಜಾಗರೂಕವಾಗಿದ್ದು, ತನಿಖೆ ಮುಂದುವರಿದಿದೆ” ಎಂದು ಹೇಳಿದೆ.

“ಬಂಧಿತ ಏಳು ವ್ಯಕ್ತಿಗಳಲ್ಲಿ ಅಮೆರಿಕದ ಪ್ರಜೆ ಮ್ಯಾಥ್ಯೂ ಆರನ್ ವ್ಯಾನ್ ಡೈಕ್ ಕೂಡ ಸೇರಿದ್ದಾನೆ. ಅಂತರಾಷ್ಟ್ರೀಯ ಭದ್ರತಾ ವಿಶ್ಲೇಷಕನಾಗಿರುವ ಈತನನ್ನು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈತ ‘ಸನ್ಸ್ ಆಫ್ ಲಿಬರ್ಟಿ ಇಂಟರ್ನ್ಯಾಷನಲ್’ (SOLI) ಸಂಸ್ಥೆಯ ಸ್ಥಾಪಕನಾಗಿದ್ದು, ತನ್ನನ್ನು ತಾನು ‘ಲಿಬಿಯಾ ಕ್ರಾಂತಿ’ಯ ಅನುಭವವಿರುವ ಯೋಧನೆಂದು ಕರೆದುಕೊಳ್ಳುತ್ತಿದ್ದಾರೆ” ಎಂದು ಸರ್ಕಾರ ವಿವರಿಸಿದೆ.

“ಉಕ್ರೇನ್ ಪ್ರಜೆಗಳಾದ ಹುರ್ಬಾ ಪೆಟ್ರೋ, ಸ್ಲಿವಿಯಾಕ್ ತಾರಸ್, ಇವಾನ್ ಸುಕ್ಮನೋವ್ಸ್ಕಿ, ಸ್ಟೆಫಾಂಕಿವ್ ಮರಿಯನ್, ಹೊಂಚಾರುಕ್ ಮಕ್ಸಿಮ್ ಮತ್ತು ಕಾಮಿನ್ಸ್ಕಿ ವಿಕ್ಟರ್ ಅವರನ್ನು ದೆಹಲಿ ಮತ್ತು ಲಕ್ನೋ ವಿಮಾನ ನಿಲ್ದಾಣಗಳಲ್ಲಿ ವಶಕ್ಕೆ ಪಡೆಯಲಾಗಿದೆ. ಮ್ಯಾನ್ಮಾರ್‌ನ ಸಶಸ್ತ್ರ ಪಡೆಗಳಿಗೆ ಸಹಾಯ ಮಾಡುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮ್ಯಾನ್ಮರ್ ಸಶಸ್ತ್ರ ಪಡೆಗಳು ಭಾರತ ವಿರೋಧಿ ಬಂಡುಕೋರ ಗುಂಪುಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿವೆ” ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ವರ್ಣರಂಜಿತ ಹಾರ್ಮುಜ್ ಪರ್ವತದ ಕಥನ ಗೊತ್ತೇ?

ಕಳೆದ ವಾರ ಬಂದ ನಿರ್ದಿಷ್ಟ ಸುಳಿವಿನ ಮೇರೆಗೆ ಈ ಆರೋಪಿಗಳನ್ನು ಬಂಧಿಸಲಾಗಿದೆ. ಎನ್‌ಐಎ ದಾಖಲಿಸಿರುವ ಎಫ್‌ಐಆರ್ ಪ್ರಕಾರ, 14 ಉಕ್ರೇನಿಯನ್ನರು ಪ್ರವಾಸಿ ವೀಸಾದಲ್ಲಿ ವಿವಿಧ ದಿನಾಂಕಗಳಂದು ಭಾರತಕ್ಕೆ ಪ್ರವೇಶಿಸಿದ್ದರು. ನಂತರ ಅಗತ್ಯವಿರುವ ನಿರ್ಬಂಧಿತ ಪ್ರದೇಶದ ಪರವಾನಗಿ (RAP) ಅಥವಾ ಸಂರಕ್ಷಿತ ಪ್ರದೇಶದ ಪರವಾನಗಿ (PAP) ಇಲ್ಲದೆ ಅಸ್ಸಾಂನ ಗುವಾಹಟಿ ಮತ್ತು ಅಲ್ಲಿಂದ ಮಿಜೋರಾಂಗೆ ವಿಮಾನದ ಮೂಲಕ ಪ್ರಯಾಣಿಸಿದ್ದರು. ಈ ಗುಂಪು ನಂತರ ಮ್ಯಾನ್ಮಾರ್‌ಗೆ ‘ಅಕ್ರಮವಾಗಿ’ ಪ್ರವೇಶಿಸಿ, ಅಲ್ಲಿನ ಎಥ್ನಿಕ್ ಆರ್ಮ್ಡ್ ಗ್ರೂಪ್‌ಗಳಿಗೆ (EAGs) ಡ್ರೋನ್ ಯುದ್ಧ ಮತ್ತು ಜಾಮಿಂಗ್ ತಂತ್ರಜ್ಞಾನದ ಕುರಿತು ಪೂರ್ವನಿರ್ಧರಿತ ತರಬೇತಿ ನೀಡಲು ಯೋಜಿಸಿತ್ತು. ಈ ಗುಂಪುಗಳು ಭಾರತದಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕ ಸಂಸ್ಥೆಗಳಿಗೆ ಬೆಂಬಲ ನೀಡುತ್ತವೆ ಎಂದು ಆರೋಪಿಸಲಾಗಿದೆ.

“ಈ EAG ಗುಂಪುಗಳು ಭಾರತದ ಕೆಲವು ನಿಷೇಧಿತ ಬಂಡುಕೋರ ಗುಂಪುಗಳಿಗೆ ಶಸ್ತ್ರಾಸ್ತ್ರ ಮತ್ತು ಇತರ ಸಾಮಗ್ರಿಗಳನ್ನು ಪೂರೈಸುವ ಮತ್ತು ತರಬೇತಿ ನೀಡುವ ಮೂಲಕ ಬೆಂಬಲಿಸುತ್ತಿವೆ. ಇದು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಹಿತಾಸಕ್ತಿಯ ಮೇಲೆ ಪರಿಣಾಮ ಬೀರುತ್ತಿದೆ” ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

ಆದರೆ, 3,000 ಮಂದಿ ಉಕ್ರೇನಿಯನ್ನರು ಭಾರತಕ್ಕೆ ಪ್ರವೇಶಿಸಿದ್ದಾರೆ. ಉಗ್ರಗಾಮಿ ಗುಂಪುಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂಬುದು ಸಂಪೂರ್ಣ ಸುಳ್ಳು ಎಂದು ಸರ್ಕಾರ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...