‘ಗ್ರಾಮೀಣ ಕಾರ್ಮಿಕರ ಕೂಲಿ ಕಳವು’: ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಎಂನರೇಗಾ) ಯೋಜನೆಗೆ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಬಿ–ಜಿ ರಾಮ್ ಜಿ’ (VB-G RAM G) ಕಾಯ್ದೆಯು ಗ್ರಾಮೀಣ ಭಾರತದ ಸಾಮಾಜಿಕ ಭದ್ರತೆಯ ಮೇಲಿನ ‘ಸರ್ಜಿಕಲ್ ಸ್ಟ್ರೈಕ್’ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ‘ಮತ ಕದಿಯುವ ಸರ್ಕಾರ’ ಎಂದು ಜರಿದಿರುವ ಕಾಂಗ್ರೆಸ್‌, ಇದೀಗ ಅದು ‘ಗ್ರಾಮೀಣ ಕಾರ್ಮಿಕರ ಕೂಲಿ ಕಳವು’ ಮಾಡುವುದರಲ್ಲೂ ಪರಿಣತಿ ಸಾಧಿಸಿದೆ ಎಂದು ಗಂಭೀರ ಆರೋಪ ಮಾಡಿದೆ.

- Advertisement -

​ಮಹಾರಾಷ್ಟ್ರದ ಬೀಡ್ ಸೇರಿದಂತೆ ಹಲವು ಜಿಲ್ಲೆಗಳು ಕಳೆದ ಒಂದು ದಶಕದಲ್ಲೇ ಕಂಡರಿಯದ ಭೀಕರ ಬರಗಾಲ ಎದುರಿಸುತ್ತಿವೆ. ಇಂತಹ ಸಂಕಷ್ಟದ ಸಮಯದಲ್ಲಿ ಆಸರೆಯಾಗಬೇಕಿದ್ದ ಹಳೆಯ ಉದ್ಯೋಗ ಖಾತರಿ ಯೋಜನೆಯನ್ನು ಬದಲಾಯಿಸಿರುವುದು ಗ್ರಾಮೀಣರ ಪಾಲಿನ ಮರಣಶಾಸನವಾಗಿದೆ. ಕಾಗದದ ಮೇಲೆ ಸಾವಿರಾರು ಕಾರ್ಮಿಕರು ಹೊಸ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ ಎಂದು ತೋರಿಸಲಾಗಿದೆ. ಆದರೆ, ಬೀಡ್ ಜಿಲ್ಲೆಯ ಐದು ಕಾಮಗಾರಿ ಸ್ಥಳಗಳಲ್ಲಿ ವಾಸ್ತವವಾಗಿ ಯಾರೊಬ್ಬರೂ ಕೆಲಸ ಮಾಡುತ್ತಿಲ್ಲ ಎಂಬ ಮಾಧ್ಯಮ ವರದಿಯೊಂದನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ...

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

​ಕ್ಷೇತ್ರ ಮಟ್ಟದ ತನಿಖಾ ವರದಿಯೊಂದನ್ನು ಆಧರಿಸಿ ‘ಎಕ್ಸ್’ (ಟ್ವಿಟರ್) ಜಾಲತಾಣದಲ್ಲಿ ಕಿಡಿಕಾರಿರುವ ಅವರು, ಬಹುತೇಕ ಗ್ರಾಮಸ್ಥರಿಗೆ ತಿಂಗಳುಗಳಿಂದ ಕೆಲಸವೇ ಸಿಕ್ಕಿಲ್ಲ. ಆದರೂ ದಾಖಲೆಗಳಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಸುಳ್ಳು ಹಾಜರಾತಿ ಸೃಷ್ಟಿಸಲಾಗಿದೆ. ಕೆಲಸಗಾರರ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ಕೂಲಿ ಹಣವನ್ನು ಆಡಳಿತ ಪಕ್ಷಕ್ಕೆ ಸೇರಿದ ಸ್ಥಳೀಯ ರಾಜಕಾರಣಿಗಳು ಲಪಟಾಯಿಸುತ್ತಿದ್ದಾರೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.

​ಉತ್ತರ ಪ್ರದೇಶ ಸೇರಿದಂತೆ ಇತರ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಇಂತಹ ಸುಳ್ಳು ಹಾಜರಾತಿ ಹಾಗೂ ನಕಲಿ ಆ್ಯಪ್‌ಗಳ (ಕ್ಲೋನ್ ಆ್ಯಪ್) ಹಗರಣಗಳು ಮಾಧ್ಯಮಗಳಲ್ಲಿ ಬಹಿರಂಗವಾಗಿವೆ. ಇದು ಕೇವಲ ಸಾಮಾನ್ಯ ಭ್ರಷ್ಟಾಚಾರವಲ್ಲ, ಬದಲಾಗಿ ಬಡ ಕಾರ್ಮಿಕರ ಬೆವರ ಕಾಸನ್ನು ವ್ಯವಸ್ಥಿತವಾಗಿ ದೋಚುವ ಕೃತ್ಯವಾಗಿದೆ. ತಂತ್ರಜ್ಞಾನದ ನೆಪವೊಡ್ಡಿ ಜನರನ್ನು ಈ ಯೋಜನೆಯಿಂದ ವ್ಯವಸ್ಥಿತವಾಗಿ ಹೊರಗಿಡಲಾಗುತ್ತಿದೆ ಎಂದು ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಹೊಸ ಕಾಯ್ದೆಯು ಕೇವಲ ತಂತ್ರಜ್ಞಾನ ಆಧಾರಿತ ತಾರತಮ್ಯಕ್ಕೆ ದಾರಿ ಮಾಡಿಕೊಟ್ಟಿದೆ. ಜೊತೆಗೆ ಅಧಿಕಾರದ ಕೇಂದ್ರೀಕರಣದ ಮೂಲಕ ಗ್ರಾಮ ಪಂಚಾಯಿತಿಗಳ ಹಕ್ಕುಗಳನ್ನು ಮತ್ತು ಅಧಿಕಾರವನ್ನು ಕಸಿದುಕೊಂಡು ಅವುಗಳನ್ನು ದುರ್ಬಲಗೊಳಿಸಿದೆ. ಶ್ರೀರಾಮನ ಹೆಸರನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ, ಅದೇ ರಾಮನ ಹೆಸರಿನಲ್ಲಿ ತಂದಿರುವ ಯೋಜನೆಯ ಮೂಲಕ ಬಡವರ ಹಕ್ಕುಗಳ ಮೇಲೆ ಪ್ರಹಾರ ನಡೆಸುತ್ತಿರುವುದು ಅದರ ನೈಜ ಬಣ್ಣವನ್ನು ಬಯಲು ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

​ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಎರಡು ದಶಕಗಳ ಹಿಂದೆ ಜಾರಿಗೆ ತಂದಿದ್ದ ಐತಿಹಾಸಿಕ ಎಂನರೇಗಾ (MGNREGA) ಯೋಜನೆಯನ್ನು ರದ್ದುಪಡಿಸಲಾಗಿದೆ. ಅದರ ಬದಲಾಗಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ’ ಅಂದರೆ ಸಂಕ್ಷಿಪ್ತವಾಗಿ ‘ವಿಬಿ-ಜಿ ರಾಮ್ ಜಿ’ (VB-G RAM G) ಕಾಯ್ದೆಯನ್ನು ಇದೇ ವರ್ಷ ಜುಲೈ 1ರಿಂದ ದೇಶಾದ್ಯಂತ ಜಾರಿಗೆ ತರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...

ಫ್ರಾನ್ಸ್‌ | ಭುಗಿಲೆದ್ದ ಪ್ರತಿಭಟನೆ: 2,400ಕ್ಕೂ ಅಧಿಕ ಮಂದಿ ಬಂಧನ, ಸಾವಿರಕ್ಕೂ ಹೆಚ್ಚು ಪೊಲೀಸರಿಗೆ ಗಾಯ

ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಒಂದಾದ ಫ್ರಾನ್ಸ್‌ನಲ್ಲಿ ಜೀವನ ವೆಚ್ಚದ ಏರಿಕೆ, ಸಾರ್ವಜನಿಕ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ ಪ್ರಶ್ನೆಗಳು

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ...

ಮಧ್ಯಪ್ರದೇಶ ಮರಳು ಮಾಫಿಯಾದ ಜೊತೆ ಸರ್ಕಾರಿ ಅಧಿಕಾರಿಗಳು ಶಾಮೀಲು; NGT ಕಳವಳ

ಮಧ್ಯಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ...