ಶಬರಿಮಲೆ ಪ್ರಕರಣ : ಧಾರ್ಮಿಕ ಸಂಸ್ಥೆಗಳಲ್ಲಿ ನಿರ್ದಿಷ್ಟ ನಿಯಮಗಳಿರಬೇಕು, ಅರಾಜಕತೆ ಇರಬಾರದು : ಸುಪ್ರೀಂ ಕೋರ್ಟ್‌

Date:

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿರ್ದಿಷ್ಟ ನಿಯಮಗಳಿರಬೇಕು, ಆದರೆ ಅಲ್ಲಿ ಯಾವುದೇ ಕಾರಣಕ್ಕೂ ಅರಾಜಕತೆ ಇರಬಾರದು ಎಂದು ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿನ ತಾರತಮ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಕುರಿತಾದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ 9 ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಧಾರ್ಮಿಕ ಸಂಸ್ಥೆಯನ್ನು ನಿರ್ವಹಿಸುವ ಹಕ್ಕು ಎಂದರೆ ನಿಯಮಗಳಿಲ್ಲದೆ ಮನಬಂದಂತೆ ನಡೆಸುವುದು ಎಂದರ್ಥವಲ್ಲ. ಪೂಜಾ ವಿಧಾನ, ಕೆಲಸಗಳ ಅನುಕ್ರಮ ಮತ್ತು ಪ್ರವೇಶದ ಬಗ್ಗೆ ಒಂದು ಶಿಸ್ತುಬದ್ಧ ವಿಧಾನ ಮತ್ತು ಮಾನದಂಡಗಳು ಇರಲೇಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ಎಂ ಎಂ ಸುಂದರೇಶ್, ಅಹ್ಸನುದ್ದೀನ್ ಅಮಾನುಲ್ಲಾ ಅರವಿಂದ್ ಕುಮಾರ್, ಆಗಸ್ಟೀನ್ ಜಾರ್ಜ್ ಮಸಿಹ್, ಪ್ರಸನ್ನ ಬಿ ವರಾಳೆ, ಆರ್ ಮಹಾದೇವನ್ ಮತ್ತು ಜೋಯ್ಮಾಲ್ಯ ಬಾಗ್ಚಿ ಅವರಿದ್ದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಅಹಿಂದ ನಾಯಕತ್ವ:‌ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿಯಾಗಬಲ್ಲರೇ?

ಧಾರ್ಮಿಕ ಸಂಸ್ಥೆಗಳ ಮೇಲೆ ನಿಯಂತ್ರಣ ಅಗತ್ಯವಿದ್ದರೂ, ಆ ನಿಯಂತ್ರಣವು ಸಾಂವಿಧಾನಿಕ ಮಿತಿಗಳನ್ನು ಮೀರುವಂತಿಲ್ಲ. ವಿಶಾಲವಾದ ಸಾಂವಿಧಾನಿಕ ತತ್ವಗಳ ಆಧಾರದ ಮೇಲೆ ಯಾವುದೇ ರೀತಿಯ ಭೇದಭಾವ ಅಥವಾ ತಾರತಮ್ಯ ಇರಬಾರದು ಎಂದು ನ್ಯಾಯಮೂರ್ತಿ ಅಮಾನುಲ್ಲಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಹಝರತ್ ಖ್ವಾಜಾ ನಿಜಾಮುದ್ದೀನ್ ದರ್ಗಾಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ವ್ಯವಸ್ಥಿತ ನಿರ್ವಹಣೆಯ ಅಗತ್ಯವನ್ನು ಒತ್ತಿಹೇಳುವಾಗ ನ್ಯಾಯಾಲಯ ಈ ಮಾತುಗಳನ್ನು ಹೇಳಿದೆ.

- Advertisement -

ಒಟ್ಟಾರೆಯಾಗಿ, ಧಾರ್ಮಿಕ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಿದರೂ, ಅವುಗಳು ಸಂವಿಧಾನದ ಚೌಕಟ್ಟಿನೊಳಗೆ ಮತ್ತು ವ್ಯವಸ್ಥಿತ ನಿಯಮಗಳ ಅಡಿಯಲ್ಲಿ ಇರಬೇಕು ಎಂಬುದು ಸುಪ್ರೀಂ ಕೋರ್ಟ್‌ ಅಭಿಪ್ರಾಯ ಪಟ್ಟಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...

ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು ಹೊರಟ ಕೇಂದ್ರದ ಕರಾಳ ಶಾಸನ

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ...