ಶಬರಿಮಲೆ | ‘ಮಹಿಳೆಯರಿಗೆ ನಿರ್ಬಂಧ ಸರಿ’ ಎಂದು ಸುಪ್ರೀಂನಲ್ಲಿ ಮತ್ತೆ ಸಮರ್ಥಿಸಿಕೊಂಡ ಕೇಂದ್ರ

Date:

ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮುಟ್ಟಿನ ವಯಸ್ಸಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಗುರುವಾರ ಮತ್ತೆ ಸಮರ್ಥಿಸಿಕೊಂಡಿದೆ. ಈ ನಿಷೇಧವನ್ನು ತೆಗೆದುಹಾಕುವ ಸುಪ್ರೀಂ ಕೋರ್ಟ್‌ನ 2018ರ ತೀರ್ಪು ಪುರುಷರು ಶ್ರೇಷ್ಠರು, ಮಹಿಳೆಯರು ಕೆಳಮಟ್ಟದಲ್ಲಿದ್ದಾರೆ ಎಂಬ ಊಹೆಯ ಮೇಲೆ ನಿಂತಿದೆ ಎಂದು ಹೇಳಿದೆ. ಶಬರಿಮಲೆಗೆ ಮಹಿಳೆಯರಿಗೆ ನಿರ್ಬಂಧ ಸರಿ ಎಂದು ಹೇಳಿಕೊಂಡಿದೆ.

- Advertisement -

ಕೇರಳದಲ್ಲಿರುವ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರುವಂತೆ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕೇಂದ್ರದ ಈ ಅರ್ಜಿ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ಮಾಡುವುದಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಶಬರಿಮಲೆ ಪ್ರವೇಶ | ಮಾಸಿಕ ಮೂರು ದಿನ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸಲ್ಲದು: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ, ಎಂ.ಎಂ. ಸುಂದ್ರೇಶ್, ಅಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಆಗಸ್ಟೀನ್ ಜಾರ್ಜ್ ಮಸಿಹ್, ಪ್ರಸನ್ನ ಬಿ ವರಲೆ, ಆರ್. ಮಹಾದೇವನ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಸಂವಿಧಾನ ಪೀಠಕ್ಕೆ ಲಿಖಿತ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ಪುರುಷರಿಗೆ ಅವಕಾಶವಿಲ್ಲದ ದೇವಾಲಯಗಳ ವಿವರವನ್ನು ನೀಡಿದ್ದಾರೆ.

“ಇದು ದೇವಿ ಭಗವತಿ ದೇವಸ್ಥಾನ. ಇಲ್ಲಿನ ನಂಬಿಕೆಗಳನ್ನು ವಿವರಿಸಲಾಗಿದೆ. ಕೇರಳದಲ್ಲಿ ಒಂದು ದೇವಾಲಯವಿದೆ. ಅಲ್ಲಿ ಪುರುಷರು ಮಹಿಳೆಯರಂತೆ ಬಟ್ಟೆ ಧರಿಸಿ ಹೋಗಬೇಕು. ಆ ದೇವಾಲಯಕ್ಕೆ ಹೋಗಲು ಪುರುಷರು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಿದ್ಧವಾಗುತ್ತಾರೆ. ಮಹಿಳಾ ಕುಟುಂಬ ಸದಸ್ಯರು ಅವರಿಗೆ ಸೀರೆ ಉಡಲು ಸಹಾಯ ಮಾಡುತ್ತಾರೆ. ಆದ್ದರಿಂದ ಇದು ಪುರುಷ ಕೇಂದ್ರಿತ ಅಥವಾ ಸ್ತ್ರೀ ಕೇಂದ್ರಿತ ಧಾರ್ಮಿಕ ನಂಬಿಕೆಗಳ ಪ್ರಶ್ನೆಯಲ್ಲ. ಪ್ರಸ್ತುತ ಪ್ರಕರಣದಲ್ಲಿ, ಇದು ಮಹಿಳಾ ಕೇಂದ್ರಿತವಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಕೇರಳದ ಕೊಟ್ಟಂಕುಳಂಗರ ಶ್ರೀ ದೇವಿ ದೇವಸ್ಥಾನದಲ್ಲಿ, ಪುರುಷರು ಚಮಯವಿಳಕ್ಕು ಹಬ್ಬದ ಸಂದರ್ಭ ಸೀರೆ ಮೊದಲಾದ ಬಟ್ಟೆಗಳನ್ನು ಧರಿಸಿ, ಅಲಂಕಾರ ಮಾಡಿಕೊಂಡು ಹೋಗಿ ದೇವಿಯನ್ನು ಪೂಜಿಸುವ ಸಂಪ್ರದಾಯ ಶತಮಾನಗಳಿಂದ ಇದೆ.

10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಅಂದರೆ ಮುಟ್ಟಾಗುವ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅಯ್ಯಪ್ಪ ‘ನೈಷ್ಠಿಕ ಬ್ರಹ್ಮಚಾರಿ’ ಎಂಬ ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಈ ಸಂಪ್ರದಾಯವನ್ನು ಪಾಲಿಸಲಾಗುತ್ತಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. 2018ರ ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ಎಲ್ಲ ವಯಸ್ಸಿನ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡುವ ಮಹತ್ವದ ತೀರ್ಪು ನೀಡಿತು. ಈ ಮೂಲಕ ಸಂವಿಧಾನದ ಸಮಾನತೆಯ ಹಕ್ಕನ್ನು ಎತ್ತಿಹಿಡಿಯಿತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾದ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...