ಶಬರಿಮಲೆಗೆ ಮಹಿಳೆಯರ ಪ್ರವೇಶ | ಏ.7 ರಿಂದ ಸುಪ್ರೀಂನ 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

Date:

ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

- Advertisement -

9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವನ್ನು ಮುಖ್ಯನ್ಯಾಯಮೂರ್ತಿ ರಚಿಸಲಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠ ಹೇಳಿತು. ಏಪ್ರಿಲ್ 9 ರಿಂದ ವಿಚಾರಣೆ ಆರಂಭವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಏಪ್ರಿಲ್ 22ರಂದು ವಿಚಾರಣೆ ಮುಗಿಯುವ ನಿರೀಕ್ಷೆ ಇದೆ. ಮಾರ್ಚ್ 14ರೊಳಗೆ ವಾದವನ್ನು ಬರಹ ರೂಪದಲ್ಲಿ ಸಲ್ಲಿಸಿ ಎಂದು ಪಕ್ಷಗಾರರಿಗೆ ಕೋರ್ಟ್ ಇದೇ ವೇಳೆ ಸೂಚಿಸಿದೆ.

ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಪುನರ್‌ಪರಿಶೀಲನೆ ನಡೆಸಲು ಸಲ್ಲಿಸಿರುವ ಅರ್ಜಿಗೆ ಬೆಂಬಲ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಶಬರಿಮಲೆ ತೀರ್ಪನ್ನು ಪುನರ್‌ಪರಿಶೀಲನೆ ನಡೆಸಲು ಸಲ್ಲಿಸಲಾದ ಅರ್ಜಿದಾರರ ನೋಡಲ್ ವಕೀಲರನ್ನಾಗಿ ಕೃಷ್ಣ ಕುಮಾರ್ ಸಿಂಗ್ ಅವರನ್ನೂ, ಪುನರ್‌ಪರಿಶೀಲನೆಗೆ ವಿರುದ್ಧ ಇರುವವರಿಗೆ ನೋಡಲ್ ವಕೀಲರಾಗಿ ಶಾಶ್ವತಿ ಪರಿಯವರನ್ನೂ ಇದೇ ವೇಳೆ ಕೋರ್ಟ್ ನೇಮಿಸಿದೆ.

ಜೊತೆಗೆ ಹಿರಿಯ ವಕೀಲರಾದ ಕೆ. ಪರಮೇಶ್ವರ ಹಾಗೂ ಶಿವಂ ಸಿಂಗ್ ಅವರನ್ನು ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸಿದ್ದಾಗಿಯೂ ಕೋರ್ಟ್ ಪ್ರಕಟಿಸಿದೆ.

2026ರ ಏಪ್ರಿಲ್ 7ರಂದು ಬೆಳಿಗ್ಗೆ 10.30ಕ್ಕೆ 9 ಮಂದಿ ನ್ಯಾಯಮೂರ್ತಿಗಳ ಪೀಠ ಶಬರಿಮಲೆ ಪ್ರಕರಣದ ‍ಪುನರ್‌ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸುವುದಾಗಿಯೂ, ಪುನರ್‌ಪರಿಶೀಲನೆ ಅರ್ಜಿದಾರರು ಹಾಗೂ ಅವರಿಗೆ ಬೆಂಬಲ ನೀಡುವವರನ್ನು ಫೆ. 7 ರಿಂದ 9ರವೆಗೆ, ವಿರೋಧಿಸುವವರನ್ನು ಏ. 14 ರಿಂದ 16ರವರೆಗೆ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.

ಅಲ್ಲದೆ ಕಾಲಮಿತಿಯನ್ನು ಪಾಲಿಸಬೇಕು ಎಂದು ಪ್ರಕರಣದಲ್ಲಿ ಹಾಜರಾಗುವ ವಕೀಲರಿಗೆ ನ್ಯಾಯಾಲಯ ನಿರ್ದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...