ರಾಜಸ್ಥಾನ ಸರ್ಕಾರ ವಿರುದ್ಧ ಸಚಿನ್‌ ಪೈಲಟ್ ಸತ್ಯಾಗ್ರಹ; ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚರಿಕೆ

Date:

  • ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿರುವ ಸಚಿನ್ ಪೈಲಟ್
  • ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸುವ ಎಚ್ಚರಿಕೆ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ವಿರುದ್ಧ ಮುನಿಸಿಕೊಂಡು ಮಂಗಳವಾರ (ಏಪ್ರಿಲ್‌ 11) ದಿನವಿಡೀ ಉಪವಾಸ ಸತ್ಯಾಗ್ರಹ ಘೋಷಿಸಿರುವ ಸಚಿನ್ ಪೈಲಟ್ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚರಿಕೆ ನೀಡಿದೆ.

- Advertisement -

ಗೆಹ್ಲೋಟ್‌ ಅವರ ಈ ಹಿಂದಿನ ವಸುಂಧರಾ ರಾಜೆ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಸಚಿನ್ ಪೈಲಟ್ ದಿನವಿಡೀ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಈ ಬಿಕ್ಕಟ್ಟು ತಲೆದೋರಿರುವುದಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಸಚಿನ್ ಪೈಲಟ್ ಅವರಿಗೆ ಸೋಮವಾರ (ಏಪ್ರಿಲ್‌ 10) ರಾತ್ರಿ ಪತ್ರವೊಂದನ್ನು ಬರೆದು ಎಚ್ಚರಿಸಿದೆ. “ಸಚಿನ್‌ ಪೈಲಟ್ ಅವರ ನಿರ್ಧಾರವು ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಇದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಲಾಗುವುದು” ಎಂದು ಕಾಂಗ್ರೆಸ್‌ ವರಿಷ್ಠರು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆ ಕೈಗೊಂಡರೆ ಪೈಲಟ್‌ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್‌ ನಾಯಕತ್ವ ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ನಾಯಕ ಹಾಗೂ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಈ ಹಿಂದಿನ ವಸುಂಧರಾ ರಾಜೆ ಸರ್ಕಾರದ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಇದರ ವಿರುದ್ಧ ತನಿಖೆ ನಡೆಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಚಿನ್‌ ಪೈಲಟ್‌ ಭಾನುವಾರ (ಏಪ್ರಿಲ್ 9) ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದರು.

ಸಚಿನ್‌ ಪೈಲಟ್‌ ಅವರ ಪ್ರತಿಭಟನೆ ಘೋಷಣೆ ಬಗ್ಗೆ ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖ್‌ಜಿಂದರ್‌ ಸಿಂಗ್‌ ರಾಂಧವ ಸೋಮವಾರ ರಾತ್ರಿ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜ್ಯೋತಿಬಾ ಜನ್ಮದಿನ | ಬ್ರಾಹ್ಮಣಶಾಹಿ ವಿರುದ್ಧ ಹೋರಾಟ ನಡೆಸಿದವರು ಮಹಾತ್ಮ ಫುಲೆ

“ಪೈಲಟ್‌ ಅವರ ಸತ್ಯಾಗ್ರಹ ಪಕ್ಷ ವಿರೋಧಿ ಚಟುವಟಿಕೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಮಸ್ಯೆಗಳಲ್ಲಿದ್ದಲ್ಲಿ ಪಕ್ಷದೊಳಗೇ ಇತ್ಯರ್ಥಪಡಿಸಿಕೊಳ್ಳಬೇಕು. ಅದನ್ನು ಮಾಧ್ಯಮ ಮತ್ತು ಸಾರ್ವಜನಿಕಗೊಳಿಸಬಾರದು” ಎಂದು ಸುಖ್‌ಜಿಂದರ್‌ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಸಚಿನ್‌ ಪೈಲಟ್‌ ಅವರ ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸುತ್ತಿರುವ ಅವರ ನಿಷ್ಠರಿಗೂ ಕಾಂಗ್ರೆಸ್‌ ಹೈಕಮಾಂಡ್‌ ಸೋಮವಾರ ನೀಡಿದ ಸಂದೇಶ ಎಚ್ಚರಿಕೆಯ ಗಂಟೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...