ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿದ ಆರೋಪಿಯನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು 31 ವರ್ಷದ ಮೊಹಮ್ಮದ್ ಅಲಿಯಾನ್ ಎಂದು ಗುರುತಿಸಲಾಗಿದೆ. ಆರೋಪಿಯು ತಾನೇ ನಟನ ಮನೆಗೆ ನುಗ್ಗಿ ದಾಳಿ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ದಾಳಿಕೋರ ಥಾಣೆಯ ಪಬ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಮುಂಬೈನ ಬಾಂದ್ರಾಗೆ ಕರೆತರಲಾಗಿದೆ.
ಆರೋಪಿಯನ್ನು ಪೊಲೀಸರು ಇಂದು ಕೋರ್ಟ್‌ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಭಾರತೀಯ ಅಥವಾ ಬಾಂಗ್ಲಾದೇಶ ನಾಗರಿಕನಾಗಿದ್ದಾನೆಯೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆಗೆ ಮುಂಬೈ ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.
ಆರೋಪಿಯು ಜನವರಿ 16 ರಂದು ಮುಂಜಾನೆ ಸೈಫ್ ಅಲಿ ಖಾನ್ ಅವರ ಮುಂಬೈನ ಬಾಂದ್ರಾ ನಿವಾಸಕ್ಕೆ ನುಗ್ಗಿ ನಟನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!