ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದ ಆರೋಪಿ ಬಂಧನ

Date:

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದ ಆರೋಪಿಯನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಿದ್ದಾರೆ.

- Advertisement -

ಆರೋಪಿಯನ್ನು 31 ವರ್ಷದ ಮೊಹಮ್ಮದ್ ಅಲಿಯಾನ್‌ ಎಂದು ಗುರುತಿಸಲಾಗಿದೆ. ಆರೋಪಿಯು ತಾನೇ ನಟನ ಮನೆಗೆ ನುಗ್ಗಿ ದಾಳಿ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ದಾಳಿಕೋರ ಥಾಣೆಯ ಪಬ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಮುಂಬೈನ ಬಾಂದ್ರಾಗೆ ಕರೆತರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆರೋಪಿಯನ್ನು ಪೊಲೀಸರು ಇಂದು ಕೋರ್ಟ್‌ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಭಾರತೀಯ ಅಥವಾ ಬಾಂಗ್ಲಾದೇಶ ನಾಗರಿಕನಾಗಿದ್ದಾನೆಯೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆ 9 ಗಂಟೆಗೆ ಮುಂಬೈ ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.

ಆರೋಪಿಯು ಜನವರಿ 16 ರಂದು ಮುಂಜಾನೆ ಸೈಫ್ ಅಲಿ ಖಾನ್‌ ಅವರ ಮುಂಬೈನ ಬಾಂದ್ರಾ ನಿವಾಸಕ್ಕೆ ನುಗ್ಗಿ ನಟನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸೈಫ್‌ ಅಲಿ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...