ನಾರಿಶಕ್ತಿ ಅಪಮಾನಗೊಳಿಸುವ ಸ್ತ್ರೀ ದ್ವೇಷಿಗಳಿರುವುದು ಬೇಸರ: ಶಾಮನೂರು ಹೇಳಿಕೆಗೆ ಸೈನಾ ನೆಹ್ವಾಲ್‌ ಕಿಡಿ

Date:

“ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ” ಎಂದು ಬಿಜೆಪಿ ಸಂಸದ ಸಿದ್ದೇಶ್ವರ್‌ ಪತ್ನಿ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಕಿಡಿಕಾರಿದ್ದಾರೆ.

ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಶಾಮನೂರು ಅವರನ್ನ ಸ್ತ್ರೀ ದ್ವೇಷಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ನಾಯಕನ ಮಾತು ಸ್ತ್ರೀ ವಿರೋಧಿ ಧೋರಣೆಯಾಗಿದೆ. ಈ ಹೇಳಿಕೆ ಮಹಿಳಾ ಸಬಲೀಕರಣವನ್ನೇ ಅವಮಾನಿಸಿದೆ ಎಂದು ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಬ್ಯಾಡ್ಮಿಂಟನ್‌ ಆಟಗಾರ್ತಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೈನಾ ನೆಹ್ವಾಲ್‌ ಹೇಳಿದ್ದೇನು?

ಮಹಿಳೆಯನ್ನು ಅಡುಗೆ ಕೋಣೆಗೆ ಸೀಮಿತಗೊಳಿಸಬೇಕು ಅಂತಾ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಯಸಿದ್ದಾರೆ. ಆದರೆ ಪ್ರತಿ ಮಹಿಳೆಯೂ ಹೋರಾಡುತ್ತಾಳೆ ಅನ್ನೋ ತತ್ವದಲ್ಲಿ ನಂಬಿಕೆಯಿಟ್ಟುರುವ ಪಕ್ಷದ ಅಭ್ಯರ್ಥಿಯಾಗಿ ಗಾಯತ್ರಿ ಅವರು ಕಣದಲ್ಲಿದ್ದಾರೆ.

ನಾನು ಮೈದಾನದಲ್ಲಿ ಭಾರತಕ್ಕಾಗಿ ಪದಕಗಳನ್ನು ಗೆದ್ದಾಗ ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿತ್ತು? ಎಲ್ಲಾ ಹುಡುಗಿಯರು ಮತ್ತು ಮಹಿಳೆಯರು ತಮಗೆ ಇಷ್ಟವಾದ ಯಾವುದೇ ಕ್ಷೇತ್ರದಲ್ಲಿ ದೊಡ್ಡದನ್ನು ಸಾಧಿಸಬೇಕು ಎಂದು ಕನಸು ಕಾಣುತ್ತಿರುವಾಗ ಹಾಗೆ ಏಕೆ ಹೇಳಬೇಕು? ಒಂದೆಡೆ ನಾವು ನಾರಿ ಶಕ್ತಿ ಕೋ ವಂದನ್ (ನಾರಿ ಶಕ್ತಿಗೆ ವಂದನೆ) ಮಾಡುತ್ತಿದ್ದೇವೆ. ನಮ್ಮ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಇನ್ನೊಂದೆಡೆ, ನಾರಿ ಶಕ್ತಿಯನ್ನು ಅಪಮಾನಗೊಳಿಸುವ ಮತ್ತು ಸ್ತ್ರೀ ದ್ವೇಷದ ಜನ ಇರುವುದು ನಿಜಕ್ಕೂ ಅಸಮಾಧಾನ ಎಂದು ಬರೆದುಕೊಂಡಿದ್ದಾರೆ.

ಶಾಮನೂರು ಹೇಳಿದ್ದೇನು?

ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಮಾತನಾಡಿ, ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್‌ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ನಾಲಗೆ ಹರಿಬಿಟ್ಟಿದ್ದರು. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇದೇ ರೀತಿಯ ಹೇಳಿಕೆಗಳನ್ನು ಹಿಂದೊಮ್ಮೆ ಸಂಘಪರಿವಾರದ ಮುಖಂಡರೊಬ್ಬರು ಹೇಳಿದ್ದರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...