ಮನೆ, ಶೂಟಿಂಗ್ ಇಷ್ಟೇ ಬದುಕು: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

Date:

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಜೀವ ಬೆದರಿಕೆ ಹೊಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮೊದಲ ಬಾರಿಗೆ ತನ್ನ ಮೌನ ಮುರಿದಿದ್ದಾರೆ. “ಬದುಕು ಈಗ ಮನೆಯಿಂದ ಶೂಟಿಂಗ್, ಶೂಟಿಂಗ್‌ನಿಂದ ಮನೆ ಅಷ್ಟೇ ಆಗಿದೆ. ನಾನು ದೇವರನ್ನು ನಂಬುವವನು. ನನಗೆ ಎಷ್ಟು ಜೀವಿತಾವಧಿ ಬರೆಯಲಾಗಿದೆಯೋ ಅಷ್ಟು ಕಾಲ ಬದುಕುತ್ತೇನೆ” ಎಂದು ಹೇಳಿದ್ದಾರೆ.

- Advertisement -

ಕಳೆದ ವರ್ಷ ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿದೆ. ಹಲವು ಬಾರಿ ಜೀವ ಬೆದರಿಕೆ ಹಾಕಲಾಗಿದೆ. ಅದಾದ ಬಳಿಕ ಸಲ್ಮಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮನೆಯ ಬಾಲ್ಕನಿಯಲ್ಲಿ ಗುಂಡು ತಗುಲದಂತಹ ಗಾಜನ್ನು ಹಾಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಮುಂಬೈನಲ್ಲಿ ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಲ್ಮಾನ್ ಖಾನ್, “ದೇವರು ಮತ್ತು ಅಲ್ಲಾ ಗಮನಿಸುತ್ತಿದ್ದಾರೆ. ಎಷ್ಟು ಜೀವಿತಾವಧಿ ಇದೆಯೋ ಅಷ್ಟು ಕಾಲ ಬದುಕುತ್ತೇನೆ ಅಷ್ಟೇ” ಎಂದಿದ್ದಾರೆ. ಹಾಗೆಯೇ ತನ್ನ ಭದ್ರತೆ ಬಗ್ಗೆಯೂ ಮಾತನಾಡಿದ್ದಾರೆ. “ಕೆಲವೊಮ್ಮೆ ಇಷ್ಟೊಂದು ಜನರು ಸುತ್ತುವರೆದಿರುವುದು ಸಮಸ್ಯೆ ಅನಿಸುತ್ತದೆ” ಎಂದು ಹೇಳಿದ್ದಾರೆ.

ಬೆದರಿಕೆ ಬಳಿಕ ಸಲ್ಮಾನ್ ಈಗ ತಮ್ಮ ಮನೆ ಮತ್ತು ಶೂಟಿಂಗ್ ಸೆಟ್‌ಗೆ ನಡುವೆ ಮಾತ್ರ ಪ್ರಯಾಣಿಸುತ್ತಿರುವುದಾಗಿ ಹೇಳಿದ್ದಾರೆ. “ನಾನು ಪತ್ರಕರ್ತರೊಂದಿಗೆ ಇದ್ದಾಗ ಯಾವುದೇ ಚಿಂತೆ ಪಡುವುದಿಲ್ಲ. ಪತ್ರಕರ್ತರು ಇಲ್ಲದಾಗ ಕಷ್ಟ ಅನಿಸುತ್ತದೆ” ಎಂದೂ ತಿಳಿಸಿದ್ದಾರೆ.

1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರ ಭಾಗಿಯಾಗಿರುವ ವಿಚಾರದಲ್ಲಿ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಅವರನ್ನು ಗುರಿಯಾಗಿಸಿಕೊಂಡಿದೆ. ಈ ಪ್ರಾಣಿಯನ್ನು ಬಿಷ್ಣೋಯ್ ಸಮುದಾಯವು ಪೂಜಿಸುತ್ತದೆ.

ಮಾರ್ಚ್ 30ರಂದು ಸಲ್ಮಾನ್ ಖಾನ್ ನಟನೆಯ ಸಿಕಂದರ್ ಸಿನಿಮಾ ಬಿಡುಗಡೆಯಾಗಲಿದ್ದು, ಈ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...