ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯಿರುವ ಸಂದೇಶ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬಂದಿದೆ.
ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಮತ್ತು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು 5 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಮುಂಬೈ ಪೊಲೀಸರಿಗೆ ಬಂದಿರುವ ಬೆದರಿಕೆ ಸಂದೇಶವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
“ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಬದುಕಲು ಬಯಸಿದರೆ ಹಾಗೂ ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ಪಾವತಿಸಬೇಕು. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್‌ಗಿಂತ ಕೆಟ್ಟದಾಗುತ್ತದೆ” ಎಂದು ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು
ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ (66) ಅವರನ್ನು ಅಕ್ಟೋಬರ್ 12 ರಂದು ಮುಂಬೈನ ಉನ್ನತ ಮಟ್ಟದ ಬಾಂದ್ರಾದಲ್ಲಿರುವ ಅವರ ಶಾಸಕ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಕೊಂದ ನಂತರ ಬೆದರಿಕೆ ಪತ್ರ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ನಿವಾಸಿ ಗುರ್ಮೈಲ್ ಬಲ್ಜಿತ್ ಸಿಂಗ್ (23), ಉತ್ತರ ಪ್ರದೇಶ ಮೂಲದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಸೇರಿದಂತೆ ನಾಲ್ವರನ್ನು ಪೊಲೀಸರು ಇದುವರೆಗೆ ಬಂಧಿಸಿದ್ದಾರೆ.
