ಸಲ್ಮಾನ್ ಖಾನ್ ನಿವಾಸದ ಮೇಲಿನ ಗುಂಡಿನ ದಾಳಿ ಪ್ರಕರಣ: ಶರಣಾಗತಿ ಕೋರಿದ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್

Date:

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಇದೀಗ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಾನು ಸ್ವಯಂಪ್ರೇರಿತವಾಗಿ ಶರಣಾಗಲು ಬಯಸುವುದಾಗಿ ತಿಳಿಸಿದ್ದಾನೆ.

- Advertisement -

ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಅನ್ಮೋಲ್ ಬಿಷ್ಣೋಯ್, ಮುಂಬೈನ ವಿಶೇಷ ಎಂಸಿಒಸಿಎ (MCOCA) ನ್ಯಾಯಾಲಯದಲ್ಲಿ ಈ ಅರ್ಜಿ ಸಲ್ಲಿಸಿದ್ದಾನೆ. “ನ್ಯಾಯಯುತವಾದ ವಿಚಾರಣೆ ನಡೆಯಲಿ ಮತ್ತು ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ನಾನು ಈ ಪ್ರಕರಣದಲ್ಲಿ ಶರಣಾಗಲು ಬಯಸುತ್ತೇನೆ. ಕಾನೂನು ಪ್ರಕ್ರಿಯೆಯಲ್ಲಿ ಭಾಗವಹಿಸಲು ನಾನು ಸಿದ್ಧನಿದ್ದೇನೆ,” ಎಂದು ಅರ್ಜಿಯಲ್ಲಿ ತಿಳಿಸಿದ್ದಾನೆ. ತಾನು ಈಗಾಗಲೇ ಎನ್ಐಎ (NIA) ಪ್ರಕರಣದಲ್ಲಿ ಬಂಧನದಲ್ಲಿದ್ದು, ನ್ಯಾಯಾಲಯದ ಆದೇಶವಿಲ್ಲದೆ ವೈಯಕ್ತಿಕವಾಗಿ ಹಾಜರಾಗಲು ಸಾಧ್ಯವಿಲ್ಲದ ಕಾರಣ, ತನ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪ್ರೊಡಕ್ಷನ್ ವಾರಂಟ್ (Production Warrant) ನೀಡುವಂತೆ ಮನವಿ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

2024ರ ಏಪ್ರಿಲ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ‘ಗ್ಯಾಲಕ್ಸಿ ಅಪಾರ್ಟ್ಮೆಂಟ್’ ಹೊರಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ವಿಕಿ ಗುಪ್ತಾ, ಸಾಗರ್ ಪಾಲ್ ಸೇರಿದಂತೆ ಐವರು ಆರೋಪಿಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿಗಳ ಪೈಕಿ ಅನುಜ್‌ಕುಮಾರ್ ಥಾಪನ್ ಎಂಬಾತ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದನು.

ಇದನ್ನೂ ಓದಿ: TET ಅಕ್ರಮ | ಪಂಜಾಬ್, ಬಿಹಾರದಲ್ಲಿ ಮತ್ತೆ ಮೂವರ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ತಮ್ಮನಾದ ಅನ್ಮೋಲ್, ಕಳೆದ ವರ್ಷದ ನವೆಂಬರ್‌ನಲ್ಲಿ ಅಮೆರಿಕದಿಂದ ಗಡೀಪಾರುಗೊಂಡ ನಂತರ ಎನ್ಐಎ ವಶಕ್ಕೆ ಸಿಕ್ಕಿದ್ದನು. ಸಲ್ಮಾನ್ ಖಾನ್ ನಿವಾಸದ ಮೇಲಿನ ದಾಳಿ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿ.

ಸದ್ಯ ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಿದ್ದು, ಅನ್ಮೋಲ್ ಬಿಷ್ಣೋಯ್ ನ ಅನುಪಸ್ಥಿತಿಯಲ್ಲೇ ಈಗಾಗಲೇ ಮೂವರು ಸಾಕ್ಷಿಗಳ ವಿಚಾರಣೆ ನಡೆದಿದೆ. ತಾನು ಶರಣಾಗುವುದರಿಂದ ಪ್ರಕರಣದ ವಿಚಾರಣೆ ಮತ್ತು ಕಾನೂನು ಪ್ರಕ್ರಿಯೆಗಳು ವೇಗವಾಗಿ ನಡೆಯಲು ಸಹಾಯವಾಗುತ್ತದೆ ಎಂದು ಅನ್ಮೋಲ್ ತನ್ನ ಅರ್ಜಿಯಲ್ಲಿ ವಾದಿಸಿದ್ದಾನೆ.

ಈ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಕೂಡ ವಾಂಟೆಡ್ ಆರೋಪಿಯಾಗಿದ್ದು, ಅನ್ಮೋಲ್ ಬಿಷ್ಣೋಯ್‌ನ ಈ ಶರಣಾಗತಿಯ ಮನವಿಯು ಪ್ರಕರಣದಲ್ಲಿ ಮಹತ್ವದ ತಿರುವನ್ನು ನೀಡುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌ ರೈತನಿಗಿಲ್ಲ ಲಾಭ!

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ...

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...

ರಾಜ್ಯದ ನ್ಯಾಯಾಲಯಗಳಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ಬಾಕಿ; ನ್ಯಾಯಮೂರ್ತಿ‌ ಕಳವಳ

ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಮತ್ತು ವಿವಿಧ ಇಲಾಖೆಗಳು ಹಲವು ಕ್ರಮಗಳನ್ನು...