ಭಾರತದ ವೈವಿದ್ಯತೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸ್ಯಾಮ್ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮಾಧ್ಯಮವೊಂದರಲ್ಲಿ ಸಂದರ್ಶನ ನೀಡಿದ್ದ ಸ್ಯಾಮ್ ಪಿತ್ರೋಡಾ, “ನಾವು ಭಾರತದಂತಹ ವೈವಿದ್ಯತೆ ದೇಶವನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳಬಹುದು.ಈಶಾನ್ಯ ಭಾರತದಲ್ಲಿರುವವರು ಚೀನೀಗಳಂತೆ, ಪಶ್ಚಿಮ ಭಾಗದವರು ಅರಬ್ಬರಂತೆ,ಉತ್ತರದವರು ಶ್ವೇತ ವರ್ಣದವರಂತೆ ಹಾಗೂ ದಕ್ಷಿಣದವರು ಆಫ್ರಿಕಾದವರಂತೆ ಕಾಣುತ್ತಾರೆ. ಇದು ಅಂತಹ ದೊಡ್ಡ ವಿಷಯವಾಗುವುದಿಲ್ಲ. ನಾವೆಲ್ಲರು ಸೋದರ ಸೋದರಿಯರು” ಎಂದು ಹೇಳಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ
ದೇಶದ ಜನರು ವಿವಿಧ ಭಾಷೆಗಳು, ಉಡುಪುಗಳು ಹಾಗೂ ಆಹಾರವನ್ನು ಗೌರವಿಸುತ್ತಾರೆ. ಆ ಭಾರತದಲ್ಲಿ ನಂಬಿಕೆ ಹೊಂದಿದ್ದು, ಪ್ರತಿಯೊಬ್ಬರಿಗೂ ವಾಸಿಸಲು ಸ್ಥಳವಿದ್ದು, ಎಲ್ಲರೂ ರಾಜಿ ಮಾಡಿಕೊಂಡು ಬದುಕುತ್ತಾರೆ ಎಂದು ಸ್ಯಾಮ್ ಪಿತ್ರೋಡಾ ತಿಳಿಸಿದ್ದರು.
“ಭಾರತವು ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಭ್ರಾತೃತ್ವದೊಂದಿಗೆ ಬೇರೂರಿದೆ. ಆದರೆ ಈಗ ಸ್ವಾತಂತ್ರ್ಯವು ರಾಮ ನವಮಿ, ರಾಮ ದೇಗುಲದೊಂದಿಗೆ ಸವಾಲು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಮಯದಲ್ಲೂ ದೇಗುಲಕ್ಕೆ ತೆರಳುತ್ತಾರೆ. ಅವರು ಭಾರತದ ನಾಯಕರಂತೆ ಮಾತನಾಡದೆ, ಬಿಜೆಪಿಯವರಂತೆ ಮಾತನಾಡುತ್ತಾರೆ” ಎಂದು ಪಿತ್ರೋಡಾ ಹೇಳಿದ್ದರು.
ಸ್ಯಾಮ್ ಪಿತ್ರೋಡಾ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಅಂತರ ಕಾಯ್ದುಕೊಂಡಿತ್ತು. ಈ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭಾರತದ ವೈವಿದ್ಯತೆಯ ಬಗ್ಗೆ ಹೋಲಿಕೆ ಮಾಡಿರುವ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ಅತ್ಯಂತ ದುರಾದೃಷ್ಟಕರ ಹಾಗೂ ಸ್ವೀಕಾರ್ಹವಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಹೇಳಿಕೆಯಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಳ್ಳುತ್ತದೆ ಎಂದು ತಿಳಿಸಿದ್ದರು.
श्री सैम पित्रोदा ने अपनी मर्ज़ी से इंडियन ओवरसीज कांग्रेस के अध्यक्ष पद से इस्तीफ़ा देने का फ़ैसला किया है। कांग्रेस अध्यक्ष ने उनका इस्तीफ़ा स्वीकार कर लिया है।
Mr. Sam Pitroda has decided to step down as Chairman of the Indian Overseas Congress of his own accord. The Congress…
— Jairam Ramesh (@Jairam_Ramesh) May 8, 2024
