​ರಸ್ತೆ ಗುಂಡಿಗಿಳಿದು ಶಾಸಕನ ವಿನೂತನ ಪ್ರತಿಭಟನೆ: 18 ಅಡಿ ಆಳದ ಗುಂಡಿಯಲ್ಲಿ 5 ಗಂಟೆ ಧರಣಿ

Date:

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಸಮಾಜವಾದಿ ಪಾರ್ಟಿಯ (ಎಸ್‌ಪಿ) ಶಾಸಕ ಹಸನ್ ರೂಮಿ ಅವರು 18 ಅಡಿ ಆಳದ ಗುಂಡಿಗಿಳಿದು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

​ಕಾನ್ಪುರದ ಜಾಜ್‌ಮೌ ಪ್ರದೇಶದ 5 ಮೀಟರ್ ಅಗಲದ ವಿಐಪಿ ರಸ್ತೆಯು ಮಂಗಳವಾರ ಮತ್ತು ಬುಧವಾರ ಸುರಿದ ಸತತ ಮಳೆಯಿಂದಾಗಿ ದಿಢೀರ್ ಕುಸಿದು ಬಿದ್ದಿತ್ತು. ಇದರ ಪರಿಣಾಮವಾಗಿ ರಸ್ತೆಯ ಮಧ್ಯದಲ್ಲಿಯೇ ಬರೋಬ್ಬರಿ 18 ಅಡಿ ಆಳದ ಬೃಹತ್ ಗುಂಡಿ ನಿರ್ಮಾಣವಾಗಿತ್ತು. ರಸ್ತೆಯ ಮೇಲಿನ ಮಳೆಯ ನೀರೆಲ್ಲವೂ ಈ ಗುಂಡಿಯೊಳಗೆ ಜಲಪಾತದಂತೆ ಧುಮ್ಮಿಕ್ಕುವ ಆತಂಕಕಾರಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

​ಗುರುವಾರ ಈ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಹಸನ್ ರೂಮಿ, ಹದಗೆಟ್ಟ ರಸ್ತೆ ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನೇರವಾಗಿ ಆ ಬೃಹತ್ ಗುಂಡಿಯೊಳಗೆ ಇಳಿದರು. ಮಳೆಯ ನಡುವೆಯೂ ಅವರು ಸತತ ಐದು ಗಂಟೆಗಳ ಕಾಲ ಗುಂಡಿಯೊಳಗೆ ನಿಂತು ಧರಣಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಶಾಸಕರ ಈ ದಿಟ್ಟ ನಡೆಗೆ ಎಸ್‌ಪಿ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಭಾರೀ ಬೆಂಬಲ ಸೂಚಿಸಿ ಸ್ಥಳದಲ್ಲಿ ಜಮಾಯಿಸಿದರು.

​”ಇದು ಅಧಿಕಾರಿಗಳ ಗಂಭೀರ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ. ರಸ್ತೆ ನಿರ್ಮಾಣ ಮತ್ತು ನಿರ್ವಹಣೆ ಹೊಣೆ ಹೊತ್ತಿರುವ ಇಲಾಖೆಗಳು ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿವೆ. ಕಳಪೆ ಕಾಮಗಾರಿಗೆ ಕಾರಣರಾದ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು” ಎಂದು ಶಾಸಕ ರೂಮಿ ಪಟ್ಟು ಹಿಡಿದರು.

​ಶಾಸಕರ ನಿರಂತರ ಧರಣಿ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸ್ಥಳೀಯ ಆಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಕೂಡಲೇ ಈ ಬೃಹತ್ ಗುಂಡಿಯನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮತ್ತು ಘಟನೆಯ ಕುರಿತು ಅಧಿಕೃತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಬಳಿಕವಷ್ಟೇ ಶಾಸಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...