ಸೀಟು ಹಂಚಿಕೆ ನಂತರವೇ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಜೊತೆ ಭಾಗಿ: ಅಖಿಲೇಶ್ ಯಾದವ್

Date:

ಉತ್ತರ ಪ್ರದೇಶದ ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ಪೂರ್ಣಗೊಂಡ ನಂತರವೇ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

- Advertisement -

“ಮಾತುಕತೆ ನಡೆಯುತ್ತಿದೆ. ಎರಡೂ ಕಡೆಗೂ ಪಟ್ಟಿಗಳು ಬರುತ್ತಿವೆ. ಒಮ್ಮೆ ಸೀಟು ಹಂಚಿಕೆ ಅಂತಿಮವಾದರೆ ಸಮಾಜವಾದಿ ಪಕ್ಷ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ. ಸೀಟುಗಳ ಸಂಖ್ಯೆ ಹಾಗೂ ಅಭ್ಯರ್ಥಿಗಳ ಹೆಸರುಗಳು ಈಗಾಗಲೇ ನಿರ್ಧಾರವಾಗಿದೆ. ಆದರೆ ರಾಹುಲ್‌ ಗಾಂಧಿಯವರು ಕೆಲವು ಸೀಟುಗಳು ಬೇಕೆಂದು ಪಟ್ಟು ಹಿಡಿದಿರುವ ಕಾರಣ ಮೈತ್ರಿಯ ಅಂತಿಮ ಪಟ್ಟಿ ತಡವಾಗುತ್ತಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತುಕತೆ ನಡೆಯುತ್ತಿದ್ದು, ಆದರೆ ಸೀಟುಗಳ ಅಂತಿಮ ಪಟ್ಟಿ ಇನ್ನು ತೀರ್ಮಾನವಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆಯು ಅಮೇಥಿ ಲೋಕಸಭಾ ವ್ಯಾಪ್ತಿಯಲ್ಲಿ ಸಾಗುತ್ತಿದೆ. ಇದರ ನಂತರ ರಾಯ್‌ಬರೇಲಿಯಲ್ಲಿ ಸಾಗಲಿದೆ. ಸಮಾಜವಾದಿ ಪಕ್ಷ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಈ ಮೊದಲು ತಿಳಿಸಿದ್ದರು.

ಸಮಾಜವಾದಿ ಪಕ್ಷ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ 11 ಸೀಟು ನಿಡುವುದಾಗಿ ತಿಳಿಸಿತ್ತು. ಆದರೆ ಕಾಂಗ್ರೆಸ್ ರಾಜ್ಯ ಘಟಕ ಹೆಚ್ಚು ಸೀಟು ನಿಡಬೇಕೆಂದು ಬೇಡಿಕೆಯಿಟ್ಟಿತ್ತು.

ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರಾದ ಅಜಯ್ ರಾಯ್, 2009ರಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆದ್ದಿರುವ ಕಾರಣ ಈ ಬಾರಿಯೂ ಅಷ್ಟೆ ಸ್ಥಾನ ನೀಡಬೇಕೆಂದು ಹೇಳಿದ್ದರು.

ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...