ಸಲಿಂಗ ವಿವಾಹ | ಬಹಿರಂಗ ವಿಚಾರಣೆಗಾಗಿ ಸುಪ್ರೀಂಗೆ ಅರ್ಜಿದಾರರ ಮನವಿ

Date:

ಸಲಿಂಗ ವಿವಾಹ ಪ್ರಕರಣದ ಅರ್ಜಿದಾರರು ತಮ್ಮ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯದಲ್ಲಿ ಬಹಿರಂಗವಾಗಿ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಮನವಿ ಮಾಡಿದ್ದಾರೆ. ಆದಾಗ್ಯೂ, ಮರುಪರಿಶೀಲನಾ ಅರ್ಜಿಗಳನ್ನು ಚೇಂಬರ್ ವಿಚಾರಣೆಗಳಲ್ಲಿ ನಿರ್ಧರಿಸಲಾಗುತ್ತದೆ ಮತ್ತು ಸಾಂವಿಧಾನಿಕ ಪೀಠವು ಅರ್ಜಿಗಳ ಅರ್ಹತೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -

ಸಲಿಂಗ ವಿವಾಹದ ಕೆಲವು ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ನೀರಜ್ ಕಿಶನ್ ಕೌಲ್ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಮರುಪರಿಶೀಲನಾ ಅರ್ಜಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಸಲಿಂಗ ವಿವಾಹಗಳನ್ನು ಕಾನೂನಿನಲ್ಲಿ ಮಾನ್ಯವೆಂದು ಗುರುತಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ಹಿಂದಿನ ನಿರ್ಧಾರವನ್ನು ಅರ್ಜಿಯು ಪ್ರಶ್ನಿಸಿದೆ. “ದಯವಿಟ್ಟು ಮರುಪರಿಶೀಲನಾ ಅರ್ಜಿಗಳನ್ನು ನ್ಯಾಯಾಲಯದಲ್ಲಿ ಬಹಿರಂಗವಾಗಿ ವಿಚಾರಣೆ ನಡೆಸಬೇಕು” ಎಂದು ಕೌಲ್ ವಿನಂತಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಜುಲೈ 10 (ಬುಧವಾರ) ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಆದರೆ, ಮುಕ್ತ ನ್ಯಾಯಾಲದ ಬದಲಾಗಿ ಚೇಂಬರ್‌ನಲ್ಲಿ ವಿಚಾರಣೆ ನಡೆಯಲಿದೆ. ವಿಚಾರಣಾ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿವಿ ನಾಗರತ್ನ, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಇರಲಿದ್ದಾರೆ.

ಪರಿಶೀಲನಾ ಅರ್ಜಿಗಳನ್ನು ಚೇಂಬರ್‌ಗಳಲ್ಲಿ ವಿಚಾರಣೆ ನಡೆಸಲಾಗುವುದು. ಅಲ್ಲಿ ಅರ್ಜಿದಾರರು, ಪ್ರತಿವಾದಿಗಳು, ವಕೀಲರು ಅಥವಾ ದಾವೆದಾರರು ಹಾಜರಾಗುವುದಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಆದಾಗ್ಯೂ, ವಿಚಾರಣೆಯು ನ್ಯಾಯಾಲಯದ ಪಡಸಾಲೆಯಲ್ಲಿ ವಿಚಾರಣೆ ಸೂಕ್ತವೆಂದು ಅರ್ಜಿದಾರರು ಭಾವಿಸಿದರೆ ನ್ಯಾಯಾಲಯಕ್ಕೆ ಅಥವಾ ಸುಪ್ರೀಂ ಕೋರ್ಟ್‌ನ ಆಯಾ ಪೀಠಕ್ಕೆ ಮನವಿ ಮಾಡಲು ಅವಕಾಶವಿದೆ.

ಈ ವರದಿ ಓದಿದ್ದೀರಾ?: ದಲಿತರು-ಬುಡಕಟ್ಟು ಜನರು ಹಾಗೂ ಹಿಂದುಳಿದವರೇ ಉಷ್ಣೋಗ್ರತೆಯ ಬಲಿಪಶುಗಳು

ಕಳೆದ ವರ್ಷ ಅಕ್ಟೋಬರ್ 17 ರಂದು, ಒಂದು ಮಹತ್ವದ ತೀರ್ಪಿನಲ್ಲಿ, ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

“ಸಲಿಂಗ ವಿವಾಹವನ್ನು ಕಾನೂನುಬದ್ದಗೊಳಿಸುವ ಅಧಿಕಾರವು ಕೇವಲ ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳ ವ್ಯಾಪ್ತಿಗೆ ಬರುತ್ತದೆ. ಶಾಸಕಾಂಗವು ಅನುಚ್ಛೇದ 14 ಮತ್ತು 15(3)ಗೆ ತಿದ್ದುಪಡಿ ತಂದು, ಸಲಿಂಗ ವಿವಾಹ ಸಂಬಂಧ ಕಾನೂನನ್ನು ರಚಿಸಬಹುದು” ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಶಾಸಕಾಂಗಕ್ಕೆ ಸಕಾರಾತ್ಮಕ ನಿರ್ದೇಶನವನ್ನು ನೀಡಲು ತಮಗೆ ಅಧಿಕಾರವಿಲ್ಲ ಎಂದೂ ಕೋರ್ಟ್‌ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...