- ಸಲಿಂಗ ವಿವಾಹ ವಿಚಾರವನ್ನು ಚರ್ಚಿಸಲು ಸಂಸತ್ ಸರಿಯಾದ ವೇದಿಕೆ ಎಂದ ಸುಪ್ರೀಂ ಕೋರ್ಟ್
- ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಹತ್ತು ದಿನಗಳೊಳಗೆ ಕಾಯ್ದೆಯ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಹೇಳಿದೆ
ನಾವು ಈ ಸಲಿಂಗ ಸಂಬಂಧಗಳನ್ನು ಕೇವಲ ದೈಹಿಕ ಸಂಬಂಧಗಳಾಗಿ ನೋಡುತ್ತೇವೆ, ಆದರೆ ಅಲ್ಲಿ ಹೆಚ್ಚು ಸ್ಥಿರವಾದ, ಭಾವನಾತ್ಮಕ ಸಂಬಂಧವೂ ಇರುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.
ಸಲಿಂಗ ವಿವಾಹ ಮಾನ್ಯತೆ ವಿಚಾರದಲ್ಲಿ ಐವರು ನ್ಯಾಯಾಧೀಶರ ಪೀಠ ನಡೆಸುತ್ತಿರುವ ಮೂರನೇ ದಿನದ ವಿಚಾರಣೆಯಲ್ಲಿ ಈ ರೀತಿ ಹೇಳಿದ್ದಾರೆ.
“ಸಲಿಂಗ ವಿವಾಹವನ್ನು ಕಾನೂನಾತ್ಮಕವಾಗಿ ಜಾರಿಗೊಳಿಸುವುದಕ್ಕೆ ನಾವು ಮದುವೆಯ ಕಲ್ಪನೆಯನ್ನು ಮರುವ್ಯಾಖ್ಯಾನಿಸಬೇಕು. ಮದುವೆಯಾಗುವುದಕ್ಕೆ ಎರಡು ಭಿನ್ನ ಲಿಂಗಕ್ಕೆ ಸೇರಿದವರು ಅಗತ್ಯವೇ” ಎಂದು ಮುಖ್ಯ ನ್ಯಾಯಮೂರ್ತಿ ಕೇಳಿದ್ದಾರೆ.
“1954 ರಲ್ಲಿ ವಿಶೇಷ ವಿವಾಹ ಕಾಯ್ದೆ ಜಾರಿಗೆ ಬಂದ ನಂತರ ಕಳೆದ 69 ವರ್ಷಗಳಲ್ಲಿ ಕಾನೂನು ಗಮನಾರ್ಹವಾಗಿ ವಿಕಸನಗೊಂಡಿದೆ. ಇದು ಅವರ ವೈಯಕ್ತಿಕ ಕಾನೂನುಗಳನ್ನು ಅನುಸರಿಸಲು ಇಷ್ಟಪಡದ ಜನರಿಗೆ ನಾಗರಿಕ ವಿವಾಹದ ರೂಪವನ್ನು ಒದಗಿಸಿದೆ. ಸಲಿಂಗಕಾಮವನ್ನು ಅಪರಾಧವಲ್ಲ ಎಂದು ಹೇಳುವ ಮೂಲಕ ನಾವು ಒಂದೇ ಲಿಂಗಕ್ಕೆ ಸೇರಿದ ಇಬ್ಬರು ವಯಸ್ಕರ ಸಂಬಂಧವನ್ನು ಗುರುತಿಸುವುದು ಮಾತ್ರವಲ್ಲದೆ, ಒಂದೇ ಲಿಂಗಕ್ಕೆ ಸೇರಿದವರ ನಡುವಿನ ಸಂಬಂಧವು ಸ್ಥಿರವಾಗಿಯೂ ಇರುತ್ತದೆ ಎಂಬುದನ್ನು ಕಂಡುಕೊಂಡಿದ್ದೇವೆ” ಎಂದು 2018ರ ಐತಿಹಾಸಿಕ ಆದೇಶವನ್ನು ಉಲ್ಲೇಖಿಸಿ ಚಂದ್ರಚೂಡ್ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಲಿಂಗ ವಿವಾಹ ಮಾನ್ಯತೆ; ಹತ್ತು ದಿನಗಳೊಳಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದಕ್ಕಾಗಿ ಬೇಡಿಕೆ ಸಲ್ಲಿಸಿದ ಅರ್ಜಿಗಳನ್ನು ನಗರದ ಗಣ್ಯರ ದೃಷ್ಟಿಕೋನ ಎಂದು ಹೇಳಿದ್ದು, ಈ ವಿಚಾರವನ್ನು ಚರ್ಚಿಸಲು ಸಂಸತ್ ಸರಿಯಾದ ವೇದಿಕೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಕೇವಲ ನಗರ ಗಣ್ಯರ ದೃಷ್ಟಿಕೋನಗಳನ್ನು ಪ್ರತಿಬಿಂಬಿಸುವ ಅರ್ಜಿಗಳನ್ನು ಸೂಕ್ತ ಶಾಸಕಾಂಗದೊಂದಿಗೆ ಹೋಲಿಸಲಾಗುವುದಿಲ್ಲ. ಇದು ವಿಶಾಲ ವ್ಯಾಪ್ತಿಯ ದೃಷ್ಟಿಕೋನಗಳು ಮತ್ತು ಧ್ವನಿಗಳನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶಾದ್ಯಂತ ವಿಸ್ತರಿಸುತ್ತದೆ ಎಂದು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ.
ಸಲಿಂಗ ವಿವಾಹ ಕಾಯ್ದೆಯನ್ನು ಜಾರಿ ತರುವ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಹತ್ತು ದಿನಗಳೊಳಗೆ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.
ಕೇಂದ್ರ ಕಾನೂನು ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಹತ್ತು ದಿನಗಳ ಒಳಗೆ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ಸಲ್ಲಿಸುವಂತೆ ಸೂಚಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಲುವಿನಲ್ಲಿ ಯಾವುದೇ ವಿಳಂಬವಿಲ್ಲದೆ ಸರಿಯಾದ ನಿರ್ಧಾರ ತೆಗೆದುಕೊಳ್ಳ ತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.