ಬಿಡದಿ ಭೂಸ್ವಾಧೀನ ರದ್ದುಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

Date:

ಕರ್ನಾಟಕದ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಕೃಷಿ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಆಗ್ರಹಿಸಿದೆ.

- Advertisement -

ಬಿಡದಿ ರೈತರು ಕಳೆದ 568 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿರುವ SKM, ಬೆಂಗಳೂರಿನಲ್ಲಿ ನಡೆಯುತ್ತಿರುವ ರೈತರ ಸರದಿ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದೆ. ನೀರಾವರಿ ಸೌಲಭ್ಯ ಹೊಂದಿರುವ ಫಲವತ್ತಾದ ಕೃಷಿ ಭೂಮಿ, ಬಹುವಾರ್ಷಿಕ ಬೆಳೆಗಳು, ಜಾನುವಾರು ಸಾಕಣೆ ಹಾಗೂ ಸಾಂಪ್ರದಾಯಿಕ ಜೀವನೋಪಾಯವನ್ನು ಉಳಿಸಿಕೊಳ್ಳಲು ರೈತರು ಹೋರಾಟ ನಡೆಸುತ್ತಿದ್ದಾರೆ. ಪ್ರಸ್ತಾವಿತ ಟೌನ್‌ಶಿಪ್‌ ಯೋಜನೆಗಾಗಿ ತಮ್ಮ ಭೂಮಿಯನ್ನು ಬಲವಂತವಾಗಿ ಹಾಗೂ ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಲು ಆಗ್ರಹ

ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸುವುದರ ಜತೆಗೆ, ರೈತರ ವಿರುದ್ಧ ನಡೆಯುತ್ತಿರುವ ಕಿರುಕುಳ, ದೌರ್ಜನ್ಯ ಹಾಗೂ ದಬ್ಬಾಳಿಕೆಯನ್ನು ನಿಲ್ಲಿಸಬೇಕು. ಬೈರಾಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ಭೂಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದ ಸಕ್ರಿಯ ಬೆಂಬಲದೊಂದಿಗೆ ರೈತರ ಹೋರಾಟ ನಡೆಯುತ್ತಿದೆ . ಪ್ರತಿಭಟನಾ ನಿರತ ರೈತರ ಮೇಲೆ ಸುಳ್ಳು ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸುವುದು ಮತ್ತು ಭೂಸ್ವಾಧೀನ ಪರಿಹಾರ ಪಡೆಯಲು ನಕಲಿ ದಾಖಲೆಗಳನ್ನು ಸೃಷ್ಟಿಸುವುದನ್ನು ತಡೆಯಬೇಕು. ಎಂದು SKM ಆಗ್ರಹಿಸಿದೆ.

9,640 ಎಕರೆ ಭೂಮಿ ಸ್ವಾಧೀನಕ್ಕೆ ಪ್ರಸ್ತಾವ

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ (KUDA Act) ಅಡಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗಿದೆ. ಯೋಜನೆಗಾಗಿ ಸುಮಾರು 9,640 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಇದರಲ್ಲಿ ಬಹುತೇಕ ಗ್ರಾಮೀಣ ಕೃಷಿ ಭೂಮಿಯೇ ಸೇರಿದೆ. ಈ ಪ್ರದೇಶವು 9 ಕಂದಾಯ ಗ್ರಾಮಗಳು ಹಾಗೂ 16 ಕಂದಾಯೇತರ ಗ್ರಾಮಗಳಲ್ಲಿ ವ್ಯಾಪಿಸಿದೆ. ಈ ಗ್ರಾಮಗಳು ನಗರಸಭೆ ವ್ಯಾಪ್ತಿಯ ಹೊರಗಿವೆ ಎಂದು SKM ಹೇಳಿದೆ.

ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ವಿ. ಗೋಪಾಲಗೌಡ ನೇತೃತ್ವದ ಸಮಿತಿಯೊಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೀಡಿರುವ ವರದಿಯಲ್ಲಿ, KUDA ಕಾಯ್ದೆಯಡಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಅಮಾನ್ಯವಾಗಿದೆ ಎಂದು ಹೇಳಲಾಗಿದೆ. ಜತೆಗೆ, ಈ ಪ್ರಕ್ರಿಯೆಯು 2013ರ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ಸ್ಥಾಪನೆಯಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು ಕಾಯ್ದೆ (LARR Act)ಯ ನಿಯಮಗಳಿಗೂ ವಿರುದ್ಧವಾಗಿದೆ ಎಂದು ವರದಿ ತಿಳಿಸಿದೆ ಎಂದು SKM ಹೇಳಿದೆ.

ಸಾಮಾಜಿಕ ಪರಿಣಾಮದ ಮೌಲ್ಯಮಾಪನಕ್ಕೆ ಒತ್ತಾಯ

2013ರ LARR ಕಾಯ್ದೆಯಡಿ ಭೂಸ್ವಾಧೀನಕ್ಕೂ ಮುನ್ನ ಸಾಮಾಜಿಕ ಪರಿಣಾಮದ ಮೌಲ್ಯಮಾಪನ (Social Impact Assessment–SIA) ನಡೆಸುವುದು ಅಗತ್ಯವಾಗಿದೆ. ಇದರ ಮೂಲಕ ಭೂಸ್ವಾಧೀನದಿಂದ ಪರಿಸರ, ಕೃಷಿ, ಸ್ಥಳೀಯ ಸಮುದಾಯ ಹಾಗೂ ಜನರ ಜೀವನೋಪಾಯದ ಮೇಲೆ ಉಂಟಾಗುವ ಪರಿಣಾಮಗಳನ್ನು ಪರಿಶೀಲಿಸಬೇಕಾಗುತ್ತದೆ. ಆದರೆ, ಕರ್ನಾಟಕ ಸರ್ಕಾರ 2013ರ LARR ಕಾಯ್ದೆಯನ್ನು ಕಡೆಗಣಿಸಿ KUDA ಕಾಯ್ದೆಯಡಿ ಭೂಸ್ವಾಧೀನಕ್ಕೆ ಮುಂದಾಗಿದೆ ಎಂದು SKM ಆರೋಪಿಸಿದೆ.

ಇದನ್ನೂ ಓದಿ: ಭೂಮಿ ಉಳಿಸಲು ಯುವಪಡೆ ಏಳಲಿ: ಬಿಡದಿ ಹೋರಾಟಕ್ಕೆ ‘ಜೆನ್ ಝೀ’ಗಳ ಸಾಥ್ ಕೋರಿದ ದೇವನೂರು

ಕಾಂಗ್ರೆಸ್‌ ನೇತೃತ್ವದ ಯುಪಿಎ-2 ಸರ್ಕಾರವೇ 2013ರ LARR ಕಾಯ್ದೆಯನ್ನು ಜಾರಿಗೆ ತಂದಿತ್ತು. 2014ರಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ LARR ಕಾಯ್ದೆಯ ನಿಯಮಗಳನ್ನು ಬದಲಾಯಿಸಲು ಭೂಸ್ವಾಧೀನ ಸುಗ್ರೀವಾಜ್ಞೆ ತಂದಿತ್ತು. ಆದರೆ ರೈತರ ತೀವ್ರ ಹೋರಾಟದ ಹಿನ್ನೆಲೆಯಲ್ಲಿ ಆ ಕ್ರಮದಿಂದ ಸರ್ಕಾರ ಹಿಂದೆ ಸರಿಯಬೇಕಾಯಿತು ಎಂದು SKM ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈಗ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರವೇ LARR ಕಾಯ್ದೆಯ ನಿಯಮಗಳನ್ನು ಕಡೆಗಣಿಸಿ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರೈತರ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಕಾರ್ಪೊರೇಟ್‌ ಹಿತಾಸಕ್ತಿಗಳಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ನಡೆಯುತ್ತಿದೆ ಎಂಬುದು ಸಂಘಟನೆಯ ಆರೋಪವಾಗಿದ್ದು, ಬಿಡದಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...

ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ...

ಮಿಜೋರಾಂ ಹೋಟೆಲ್‌ಗೆ ಎನ್‌ಐಎ ದಾಳಿ: ಮಣಿಪುರದ ಇಬ್ಬರು ಕುಕಿ ವಿದ್ಯಾರ್ಥಿ ನಾಯಕರ ಬಂಧನ

ಮಣಿಪುರ ಮೂಲದ ಇಬ್ಬರು ಕುಕಿ ವಿದ್ಯಾರ್ಥಿ ನಾಯಕರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ...