ಜುಲೈ 5ರಂದು ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಲಿರುವ ಸಂಯುಕ್ತ ಕಿಸಾನ್ ಮೋರ್ಚಾ ನಿಯೋಗ

Date:

ಸದ್ಯ ರದ್ದುಗೊಂಡಿರುವ ಕೇಂದ್ರ ಕೃಷಿ ಕಾನೂನುಗಳ ವಿರುದ್ಧ 2020-21ರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿದೆ. ಭಾನುವಾರ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ತನ್ನ ನಿಯೋಗ ಸೇರಲಿದೆ ಎಂದು ಘೋಷಿಸಿದೆ.

- Advertisement -

ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಬರೆದ ಪತ್ರದಲ್ಲಿ, ಶಾಂತಿಯುತ ಪ್ರಜಾಸತ್ತಾತ್ಮಕ ಪ್ರತಿಭಟನೆ ಮತ್ತು ಅದರಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು, ಯುವಕರು ಮತ್ತು ಅವರ ಕುಟುಂಬಗಳೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುವುದಾಗಿ ಎಸ್‌ಕೆಎಂ ಭಾನುವಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ಯತ್ನ: ದುಷ್ಕರ್ಮಿಗಳು ಪೊಲೀಸ್ ವಶಕ್ಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರತಿಭಟನಾಕಾರ ವಿದ್ಯಾರ್ಥಿಗಳು ಮತ್ತು ಪರಿಸರ ಕಾರ್ಯಕರ್ತೆ ಸೋನಮ್ ವಾಂಗ್‌ಚುಕ್ ಅವರನ್ನು ಬೆಂಬಲಿಸಿ ನಿಯೋಗ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ರೈತ ಸಂಘಟನೆ ತಿಳಿಸಿದೆ.

ಹಾಗೆಯೇ ಮೋದಿ ಸರ್ಕಾರದ ಕಾಲದಲ್ಲಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ದುರುಪಯೋಗದಿಂದ ಬಾಧಿತರಾದ ವಿದ್ಯಾರ್ಥಿಗಳು ಮತ್ತು ಕುಟುಂಬಗಳಿಗೆ SKM ತನ್ನ ತೀವ್ರ ಸಹಾನುಭೂತಿ ವ್ಯಕ್ತಪಡಿಸಿದೆ. “ಪ್ರತಿಯೊಬ್ಬ ವಿದ್ಯಾರ್ಥಿಗೂ ಪಾರದರ್ಶಕ, ನ್ಯಾಯಯುತ ಮತ್ತು ವಿಶ್ವಾಸಾರ್ಹ ಶಿಕ್ಷಣ ಮತ್ತು ಪರೀಕ್ಷೆಗಳ ಹಕ್ಕಿದೆ. ಈ ವಿಷಯದಲ್ಲಿ ಹೊಣೆಗಾರಿಕೆ ಹೊತ್ತುಕೊಳ್ಳುವುದು ಸರ್ಕಾರದ ಜವಾಬ್ದಾರಿ” ಎಂದು ಪತ್ರದಲ್ಲಿ ಎಸ್‌ಕೆಎಂ ತಿಳಿಸಿದೆ.

ಸಿಜೆಪಿಯ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧವನ್ನು ಈ ಹಿಂದೆ ಖಂಡಿಸಿರುವುದಾಗಿಯೂ ಸಿಜೆಪಿ ಹೇಳಿದೆ. “ವಿದ್ಯಾರ್ಥಿಗಳು ಮತ್ತು ಯುವಕರು ರೈತರ ಮಕ್ಕಳು ಮತ್ತು ಭಾರತದ ಭವಿಷ್ಯವೂ ಹೌದು. ವಿದ್ಯಾರ್ಥಿಗಳು ಮತ್ತು ಯುವಕರ ಹೋರಾಟಗಳು ರೈತರ ಹೋರಾಟ ಎಂದು ಸಂಯುಕ್ತ ಕಿಸಾನ್ ಮೋರ್ಚಾ ದೃಢವಾಗಿ ನಂಬುತ್ತದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...