ದಾವೂದ್ ಇಬ್ರಾಹಿಂ ಬಿಜೆಪಿ ಸೇರುವುದೊಂದೇ ಬಾಕಿ: ಮೋಶಾರನ್ನು ಚುಚ್ಚಿದ ಸಂಜಯ್ ಸಿಂಗ್

Date:

ಪ್ರಾದೇಶಿಕ ಪಕ್ಷಗಳನ್ನು ಒಡೆಯುವ ಬಿಜೆಪಿಯ ರಾಜಕೀಯ ತಂತ್ರಗಳನ್ನು ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ ಸಂಸದ ಸಂಜಯ್ ಸಿಂಗ್ ತೀಕ್ಷ್ಣವಾಗಿ ಟೀಕಿಸಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಸಂಜಯ್ ಸಿಂಗ್, “ದಾವೂದ್ ಇಬ್ರಾಹಿಂ ಬಿಜೆಪಿ ಸೇರುವುದೊಂದೇ ಬಾಕಿ” ಎಂದು ವ್ಯಂಗ್ಯವಾಡಿದ್ದಾರೆ.

- Advertisement -

ಬಿಜೆಪಿಯು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಹೆದರಿಸುತ್ತಿದೆ ಮತ್ತು ಪ್ರಾದೇಶಿಕ ಪಕ್ಷಗಳನ್ನು ಇಬ್ಬಾಗ ಮಾಡುತ್ತಿದೆ ಎಂದು ಸಂಜಯ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ದೆಹಲಿಯ ನೂತನ ಸಿಎಂ ಆತಿಶಿ ಮಾರ್ಲೆನಾ ಸಿಂಗ್ ಅವರ ಹಿಂದಿನ ಕುತೂಹಲಕಾರಿ ಕಥೆ

ಹಾಗೆಯೇ, “ಬಿಜೆಪಿಯವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ. ಆದರೆ ವಿರೋಧ ಪಕ್ಷದ ಯಾವ ನಾಯಕರ ಮೇಲೆ ಭ್ರಷ್ಟಾಚಾರದ ಆರೋಪ ಇರುತ್ತದೆಯೋ, ಅವರು ಬಿಜೆಪಿ ಸೇರಿದ ತಕ್ಷಣ ‘ಸ್ವಚ್ಛ’ವಾಗುತ್ತಾರೆ. ಇವರ ವಾಷಿಂಗ್ ಮೆಷಿನ್ ರಾಜಕಾರಣವನ್ನು ನೋಡಿದರೆ, ಭವಿಷ್ಯದಲ್ಲಿ ದಾವೂದ್ ಇಬ್ರಾಹಿಂ ಬಿಜೆಪಿ ಸೇರಿದರೂ ಆಶ್ಚರ್ಯವಿಲ್ಲ” ಎಂದು ಮೋಶಾರನ್ನು ಚುಚ್ಚಿದ್ದಾರೆ.

“ದೇಶಾದ್ಯಂತ ಪ್ರಾದೇಶಿಕ ಪಕ್ಷಗಳನ್ನು ಇಬ್ಭಾಗ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ (ಮೋಶಾ) ಕಾರಣ. ತನಿಖಾ ಸಂಸ್ಥೆಗಳ ಭಯದಿಂದಾಗಿ ನಾಯಕರು ತಮ್ಮ ಪಕ್ಷಗಳನ್ನು ತೊರೆದು ಬಿಜೆಪಿಗೆ ಶರಣಾಗುತ್ತಿದ್ದಾರೆ” ಎಂದು ದೂರಿದ್ದಾರೆ.

“ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಮೂಲಕ ದೇಶದಲ್ಲಿ ವಿರೋಧ ಪಕ್ಷಗಳೇ ಇಲ್ಲದಂತೆ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ. ತಾವೇ ಭ್ರಷ್ಟರು ಎಂದು ಕರೆದ ನಾಯಕರನ್ನು ಆನಂತರ ತಮ್ಮದೇ ಪಕ್ಷಕ್ಕೆ ಸೇರಿಸಿಕೊಳ್ಳುವ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ” ಎಂದು ವಾದಿಸಿದ್ದಾರೆ.

ಇನ್ನು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ಸಂದರ್ಶನದಲ್ಲಿ ಮಾತನಾಡಿದ ಸಂಜಯ್ ಸಿಂಗ್, “ಆರ್‌ಎಸ್‌ಎಸ್-ಬಿಜೆಪಿಗರು ಸಿಜೆಪಿಯಿಂದಾಗಿ ಭಯಭೀತರಾಗಿದ್ದಾರೆ ಎಂಬುದು ಸ್ಪಷ್ಟ. ಆದ್ದರಿಂದ ಅಭಿಜೀತ್ ದೀಪ್ಕೆ ಅವರ ಮೇಲೆ ದಾಳಿ ಮಾಡುತ್ತಿದ್ದಾರೆ. ಯಾವುದೇ ಚಳವಳಿ ಎಂದಿಗೂ ಕೆಟ್ಟದ್ದಲ್ಲ, ಅದು ಒಳ್ಳೆಯ ಅಥವಾ ಕೆಟ್ಟ ಗುರಿಗಳನ್ನು ಹೊಂದಿರಬಹುದು. ಸಿಜೆಪಿ ಗುರಿ ಒಳ್ಳೆಯದಾಗಿದೆ. 22 ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ನೀಟ್ ಪತ್ರಿಕೆ ಸೋರಿಕೆಗೆ ಪ್ರತಿಕ್ರಿಯೆಯಾಗಿ ಈ ಚಳವಳಿಯನ್ನು ಪ್ರಾರಂಭಿಸಲಾಗಿದೆ. ಈ ಬೇಡಿಕೆಯನ್ನು ಒಪ್ಪುವ ಯಾರಾದರೂ ಸಿಜೆಪಿಗೆ ಬೆಂಬಲಿಸಬೇಕು” ಎಂದು ಅಭಿಪ್ರಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...