ಸಾತನ್‌ಕುಳಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರು ದೋಷಿಗಳು; ಮದುರೈ ಕೋರ್ಟ್ ಐತಿಹಾಸಿಕ ತೀರ್ಪು!

Date:

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣದಲ್ಲಿ 9 ಪೊಲೀಸರನ್ನು ದೋಷಿಗಳು ಎಂದು ಮದುರೈ ನ್ಯಾಯಾಲಯವು ಘೋಷಿಸಿದೆ. ಮಹತ್ವದ ತೀರ್ಪು ಪ್ರಕಟಿಸಿದೆ.

- Advertisement -

2020ರ ಜೂನ್‌ನಲ್ಲಿ ಕೋವಿಡ್-19 ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಈ ಇಬ್ಬರಿಗೂ ಅಮಾನವೀಯವಾಗಿ ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಲಾಗಿತ್ತು. ಪರಿಣಾಮವಾಗಿ ತಂದೆ-ಮಗ ಇಬ್ಬರೂ ಮೃತಪಟ್ಟಿದ್ದರು. ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ತನ್ನ ಚಾರ್ಜ್‌ಶೀಟ್‌ನಲ್ಲಿ; “ತಂದೆ-ಮಗ ಯಾವುದೇ ನಿಯಮ ಉಲ್ಲಂಘಿಸದಿದ್ದರೂ ಅವರನ್ನು ಅಕ್ರಮವಾಗಿ ಬಂಧಿಸಿ ಠಾಣೆಗೆ ಕರೆತರಲಾಗಿತ್ತು. ಇಬ್ಬರ ಮೇಲೆ ರಾತ್ರಿಯಿಡೀ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ನೆಲದ ಮೇಲೆ ಚೆಲ್ಲಿದ್ದ ತಮ್ಮದೇ ರಕ್ತವನ್ನು ಸ್ವಚ್ಛಗೊಳಿಸುವಂತೆ ಪೊಲೀಸರು ಅವರಿಂದ ಚಿತ್ರಹಿಂಸೆ ನೀಡಿದ್ದಾರೆ. ಮರುದಿನ ಬೆಳಿಗ್ಗೆ ಪೌರಕಾರ್ಮಿಕರೊಬ್ಬರನ್ನು ಕರೆಸಿ ಠಾಣೆಯಲ್ಲಿದ್ದ ರಕ್ತದ ಕಲೆಗಳನ್ನು ಅಳಿಸಿಹಾಕುವ ಮೂಲಕ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ. ಪೊಲೀಸರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಂತ್ರಸ್ತರ ವಿರುದ್ಧವೇ ಸುಳ್ಳು ಪ್ರಕರಣ ದಾಖಲಿಸಿದ್ದರು” ಎಂದು ವಿವರಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿರುವ ಮದುರೈನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ. ಮುತ್ತುಕುಮಾರನ್, ಒಂಬತ್ತು ಪೊಲೀಸರನ್ನು ಐಪಿಸಿ ಸೆಕ್ಷನ್ 302ರ (ಕೊಲೆ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೋಷಿಗಳು ಎಂದು ತೀರ್ಪು ನೀಡಿದ್ದಾರೆ.

ಅಪರಾಧಿಗಳಿಗೆ ನೀಡಬೇಕಾದ ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 30ರಂದು ಪ್ರಕಟಿಸಲಾಗುವುದು. ಅಲ್ಲಿಯವರೆಗೆ ಒಂಬತ್ತೂ ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ. ಶಿಕ್ಷೆ ಪ್ರಕಟಿಸುವ ಮುನ್ನ ಅಪರಾಧಿಗಳ ವೈದ್ಯಕೀಯ ಸ್ಥಿತಿಗತಿ ಮತ್ತು ಅವರ ಆಸ್ತಿ ವಿವರಗಳ ವರದಿಯನ್ನು ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

ಈ ಲೇಖನ ಓದಿದ್ದೀರಾ?: ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಒಟ್ಟು 10 ಮಂದಿ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ ಸ್ಪೆಷಲ್ ಸಬ್ ಇನ್ಸ್‌ಪೆಕ್ಟರ್ ಪಾಲ್‌ದೊರೈ ವಿಚಾರಣೆಯ ಅವಧಿಯಲ್ಲಿ ಕೋವಿಡ್‌ನಿಂದ ಮೃತಪಟ್ಟಿದ್ದರು. ಉಳಿದಂತೆ ಇನ್ಸ್‌ಪೆಕ್ಟರ್ ಶ್ರೀಧರ್, ಎಸ್‌ಐಗಳಾದ ರಘು ಗಣೇಶ್, ಬಾಲಕೃಷ್ಣನ್ ಸೇರಿದಂತೆ 9 ಮಂದಿ ಈಗ ಶಿಕ್ಷೆಗೆ ಗುರಿಯಾಗಿದ್ದಾರೆ.

ಸುಮಾರು ಆರು ವರ್ಷಗಳ ಸುದೀರ್ಘ ಹೋರಾಟದ ನಂತರ ಜಯರಾಜ್ ಮತ್ತು ಬೆನಿಕ್ಸ್ ಕುಟುಂಬಕ್ಕೆ ನ್ಯಾಯ ಸಿಕ್ಕಂತಾಗಿದೆ. ಮದ್ರಾಸ್ ಹೈಕೋರ್ಟ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡು ನಿರಂತರವಾಗಿ ಮೇಲ್ವಿಚಾರಣೆ ನಡೆಸಿತ್ತು ಎಂಬುದು ಗಮನಾರ್ಹ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...