ಕೋಲ್ಕತ್ತ ಪಾಲಿಕೆಯಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ: ವಿಪಕ್ಷಗಳ ಆಕ್ರೋಶ

Date:

ಪಶ್ಚಿಮ ಬಂಗಾಳದ ಕೋಲ್ಕತ್ತ ಮಹಾನಗರ ಪಾಲಿಕೆಯಲ್ಲಿ (ಕೆಎಂಸಿ) ಇತರ ರಾಷ್ಟ್ರೀಯ ನಾಯಕರ ಭಾವಚಿತ್ರಗಳ ಜತೆಗೆ ಹಿಂದುತ್ವ ನಾಯಕ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ಅಳವಡಿಸಿರುವುದು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

- Advertisement -

ಕೆಎಂಸಿ ಕೌನ್ಸಿಲರ್‌ಗಳ ಕ್ಲಬ್‌ನ ಎರಡನೇ ಮಹಡಿಯಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ರಾಣಾ ಪ್ರತಾಪ್ ಮತ್ತು ರಾಣಿ ಲಕ್ಷ್ಮೀಬಾಯಿ ಸೇರಿದಂತೆ ಏಳು ಮಂದಿ ಪ್ರಮುಖ ಐತಿಹಾಸಿಕ ವ್ಯಕ್ತಿಗಳ ಭಾವಚಿತ್ರಗಳ ಜತೆಗೆ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕಲಾಗಿದೆ. ರಾಜ್ಯದ ಬಿಜೆಪಿ ಸರ್ಕಾರವು ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಪಕ್ಷದ ಇತರ ಸೈದ್ಧಾಂತಿಕ ನಾಯಕರ ಭಾವಚಿತ್ರಗಳನ್ನು ಅಳವಡಿಸುವ ಮತ್ತು ಪ್ರತಿಮೆಗಳನ್ನು ಸ್ಥಾಪಿಸುವ ಕಾರ್ಯ ಆರಂಭಿಸಿದೆ. ಕೆಎಂಸಿ ಪ್ರಧಾನ ಕಚೇರಿ ಸೇರಿದಂತೆ ಹಲವೆಡೆ ಮುಖರ್ಜಿ ಅವರ ಭಾವಚಿತ್ರ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಈ ಹಿಂದೆ ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್...

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ ಸ್ವಾವಲಂಬನೆ, ಮಹಿಳೆಯರಿಗೆ ಉದ್ಯೋಗಾವಕಾಶ, ಗ್ರಾಮೀಣ ಜನರಿಗೆ ಬದುಕಿನ ಭದ್ರತೆ ಹಾಗೂ ದೇಶಕ್ಕೆ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ದೊರಕಿಸಿಕೊಟ್ಟ ದೂರದೃಷ್ಟಿಯ ನಾಯಕರು. ಭಾರತದ...

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ಈಗ ಹೊಸ ಭಾವಚಿತ್ರಗಳನ್ನು ಅಳವಡಿಸಿರುವ ಜಾಗದಲ್ಲಿ ಈ ಹಿಂದೆ ಮೃತಪಟ್ಟ ಕೌನ್ಸಿಲರ್‌ಗಳ ಭಾವಚಿತ್ರಗಳಿದ್ದವು; ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ವಿಶೇಷವಾಗಿ ಸಾವರ್ಕರ್ ಅವರ ಭಾವಚಿತ್ರವನ್ನು ಸೇರಿಸಿರುವುದಕ್ಕೆ ಮಮತಾ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಎಐಟಿಸಿ) ಹಾಗೂ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಎಐಟಿಸಿ ನಾಯಕ ಬೈಶ್ವಾನರ್ ಚಟರ್ಜಿ, ಕೆಎಂಸಿಯಲ್ಲಿ ಈಗಾಗಲೇ ಈ ಸಂಸ್ಥೆಯೊಂದಿಗೆ ಐತಿಹಾಸಿಕ ನಂಟು ಹೊಂದಿದ್ದ ದೇಶಬಂಧು ಚಿತ್ತರಂಜನ್ ದಾಸ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ. ಬಿಧನ್ ಚಂದ್ರ ರಾಯ್ ಮತ್ತು ರವೀಂದ್ರನಾಥ ಟ್ಯಾಗೋರ್ ಅವರ ಭಾವಚಿತ್ರಗಳಿವೆ ಎಂದು ಉಲ್ಲೇಖಿಸಿದ್ದಾರೆ. ನಗರದ ಸ್ಥಳೀಯ ಸಂಸ್ಥೆಯೊಂದಿಗೆ ಯಾವುದೇ ಸಂಬಂಧವಿಲ್ಲದ ಸಾವರ್ಕರ್ ಅವರ ಭಾವಚಿತ್ರವನ್ನು ಕೌನ್ಸಿಲರ್‌ಗಳ ಕ್ಲಬ್‌ನಲ್ಲಿ ದಿಢೀರ್ ಅಳವಡಿಸಿರುವುದರ ಹಿಂದಿನ ಔಚಿತ್ಯವೇನು ಎಂದು ಅವರು ಪ್ರಶ್ನಿಸಿದ್ದಾರೆ.

ಇದು ರಾಜ್ಯದ ಪರಂಪರೆಯನ್ನು ‘ಸಾವರ್ಕರೀಕರಣ’ಗೊಳಿಸುವ ಪ್ರಯತ್ನ ಎಂದು ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಟೀಕಿಸಿದ್ದಾರೆ. “ಸಾವರ್ಕರ್ ಅವರನ್ನು ಕೊಂಡಾಡುವವರು ದೇಶಭಕ್ತರಾಗಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರವು ಈಗಾಗಲೇ ಈ ದಿಕ್ಕಿನಲ್ಲಿ ಪ್ರಮುಖ ಸಂಸ್ಥೆಗಳ ಮರುನಾಮಕರಣ ಆರಂಭಿಸಿದೆ. ಈ ಹಿಂದೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿದ್ದ ಕೋಲ್ಕತ್ತದ ಬಂದರಿಗೆ ಶ್ಯಾಮ ಪ್ರಸಾದ್ ಮುಖರ್ಜಿ ಬಂದರು ಎಂದು ಮರುನಾಮಕರಣ ಮಾಡಿರುವುದೇ ಇದಕ್ಕೆ ನಿದರ್ಶನ” ಎಂದು ಅವರು ಹೇಳಿದ್ದಾರೆ.

ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿರುವ ಮಾಜಿ ಕೌನ್ಸಿಲರ್ ಹಾಗೂ ಬಿಜೆಪಿ ಶಾಸಕ ಸಜಲ್ ಘೋಷ್, “ಅನಗತ್ಯ ವಿವಾದ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ವಿರೋಧ ಪಕ್ಷಗಳು ಕೈಗೊಂಡಿರುವ ದುರದೃಷ್ಟಕರ ನಡೆ ಇದು” ಎಂದು ಟೀಕಿಸಿದ್ದಾರೆ.

“ನಿಮಗೆ ಇಷ್ಟವಿರಲಿ ಅಥವಾ ಇಲ್ಲದಿರಲಿ, ಸಾವರ್ಕರ್ ಅವರು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ನೇರ ಸಂಬಂಧ ಹೊಂದಿದ್ದಾರೆ. ಕ್ರಾಂತಿಕಾರಿ ನಾಯಕ ಸಾವರ್ಕರ್ ಅವರು ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಎಷ್ಟು ವರ್ಷಗಳನ್ನು ಕಳೆದರೋ, ಅಷ್ಟು ತಿಂಗಳುಗಳನ್ನೂ ಈಗಿನ ವಿರೋಧ ಪಕ್ಷದ ನಾಯಕರು ಜೈಲಿನಲ್ಲಿ ಕಳೆಯಲು ಸಾಧ್ಯವಿಲ್ಲ” ಎಂದು ಘೋಷ್ ಹೇಳಿದ್ದಾರೆ. ಈ ಹಿಂದೆ ಹೋ–ಚಿ ಮಿನ್ಹ್, ಕಾರ್ಲ್ ಮಾರ್ಕ್ಸ್ ಮತ್ತು ವ್ಲಾಡಿಮಿರ್ ಲೆನಿನ್ ಅವರಂತಹ ಕಮ್ಯುನಿಸ್ಟ್ ನಾಯಕರ ಭಾವಚಿತ್ರಗಳನ್ನು ಹಾಕಲಾಗಿತ್ತು; ಅವರಿಗೂ ಈ ದೇಶಕ್ಕೂ ಏನು ಸಂಬಂಧವಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ಶೀಘ್ರದಲ್ಲೇ ಕೆಎಂಸಿ ಚುನಾವಣೆ ನಡೆಸಲು ಬಿಜೆಪಿ ಸರ್ಕಾರ ಉತ್ಸುಕವಾಗಿರುವ ಸಂದರ್ಭದಲ್ಲೇ ಈ ವಿವಾದ ಭುಗಿಲೆದ್ದಿದೆ. ಕ್ಷೇತ್ರ ಪುನರ್‌ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಇತ್ಯರ್ಥವಾಗುವವರೆಗೆ ಚುನಾವಣೆಗೆ ಕಲ್ಕತ್ತ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಪಶ್ಚಿಮ ಬಂಗಾಳ ಸರ್ಕಾರವು 2026ರ ಜೂನ್ 8ರಂದು ಕೋಲ್ಕತ್ತ ಮಹಾನಗರ ಪಾಲಿಕೆ ಮಂಡಳಿಯನ್ನು ವಿಸರ್ಜಿಸಿ, ಪಾಲಿಕೆ ಆಯುಕ್ತೆ ಸ್ಮಿತಾ ಪಾಂಡೆ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿದೆ. ಅದಕ್ಕೂ ಮುನ್ನ ಕಳೆದ 16 ವರ್ಷಗಳಿಂದ ತೃಣಮೂಲ ಕಾಂಗ್ರೆಸ್ ಕೆಎಂಸಿ ಆಡಳಿತದ ಚುಕ್ಕಾಣಿ ಹಿಡಿದಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

ಕೊಪ್ಪಳ | ಗರ್ಭಿಣಿ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್‌ ಅನಾರೋಗ್ಯದಿಂದ ನಿಧನ

ಕುಷ್ಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ...