‘ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಹೇಳುವುದು ಭಾವನೆಗಳ ಅಭಿವ್ಯಕ್ತಿ, ಲೈಂಗಿಕ ಉದ್ದೇಶವಾಗಲ್ಲ: ಬಾಂಬೆ ಹೈಕೋರ್ಟ್

Date:

‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಹೇಳುವುದು ಕೇವಲ ಭಾವನೆಗಳ ಅಭಿವ್ಯಕ್ತಿಯಾಗಿದೆ, ಅದು ಲೈಂಗಿಕ ಉದ್ದೇಶವಾಗಲ್ಲ ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ. ಹಾಗೆಯೇ 2015ರಲ್ಲಿ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಿಂದ 35 ವರ್ಷದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ.

- Advertisement -

ಅನುಚಿತವಾಗಿ ಸ್ಪರ್ಶಿಸುವುದು, ಬಲವಂತದಿಂದ ಬಟ್ಟೆ ಕಳಚುವುದು, ಅಸಭ್ಯವಾಗಿ ಸನ್ನೆ ಮಾಡುವುದನ್ನು ಲೈಂಗಿಕ ಉದ್ದೇಶ ಎಂದು ಹೇಳಲಾಗುತ್ತದೆ ಎಂದು ನ್ಯಾಯಮೂರ್ತಿ ಉರ್ಮಿಳಾ ಜೋಶಿ-ಫಾಲ್ಕೆ ಅವರ ಪೀಠ ತೀರ್ಪಿನಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಕುನಾಲ್ ಕಾಮ್ರಾ ವಿಡಿಯೋ ಹಂಚಿಕೊಂಡವರ ವಿರುದ್ಧ ಪ್ರತೀಕಾರದ ಕ್ರಮ ಕೈಗೊಂಡಿಲ್ಲ: ಬಾಂಬೆ ಹೈಕೋರ್ಟ್‌

ಈ ವ್ಯಕ್ತಿಯು ನಾಗ್ಪುರದಲ್ಲಿ 17 ವರ್ಷದ ಬಾಲಕಿಯ ಕೈ ಹಿಡಿದು ‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಹೇಳಿದ್ದ. ಈ ಸಂಬಂಧ ನಾಗ್ಪುರದ ಸೆಷನ್ಸ್ ನ್ಯಾಯಾಲಯವು 2017ರಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಆತನನ್ನು ದೋಷಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರಕರಣವನ್ನು ಖುಲಾಸೆಗೊಳಿಸಿದೆ. “ಆರೋಪಿಯು ಸಂತ್ರಸ್ತೆಯ ಜೊತೆ ಲೈಂಗಿಕ ಸಂಪರ್ಕ ಸಾಧಿಸುವ ಉದ್ದೇಶ ಹೊಂದಿದ್ದ ಎಂದು ಸೂಚಿಸುವ ಯಾವುದೇ ಘಟನೆಗಳು ನಡೆದಿಲ್ಲ. ‘ಐ ಲವ್‌ ಯು’ ಎಂಬುದು ಲೈಂಗಿಕ ಉದ್ದೇಶವನ್ನು ಸೂಚಿಸಲ್ಲ. ಇದು ನಿಜವಾಗಿ ಭಾವನೆಯ ಅಭಿವ್ಯಕ್ತಿ” ಎಂದು ಹೈಕೋರ್ಟ್ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...