ಚುನಾವಣಾ ಬಾಂಡ್‌ ಮಾರ್ಗಸೂಚಿ ಬಗ್ಗೆ ಆರ್‌ಟಿಐ ಮಾಹಿತಿ ನೀಡಲು ಎಸ್‌ಬಿಐ ನಕಾರ

Date:

ಚುನಾವಣಾ ಬಾಂಡ್ ಮಾಹಿತಿ ನೀಡಲು ಹೆಚ್ಚುವರಿ ಸಮಯ ಕೇಳಿ ಸುಪ್ರೀಂ ಕೋರ್ಟ್‌ನ ಛಾಟಿಯೇಟಿಗೆ ಗುರಿಯಾದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಈಗ, ಆರ್‌ಟಿಐ ಅರ್ಜಿಯೊಂದಕ್ಕೆ ಉತ್ತರ ನೀಡಲು ನಿರಾಕರಿಸಿದೆ. ಚುನಾವಣಾ ಬಾಂಡ್‌ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಲು ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದ್ದು, ಮಾಹಿತಿ ನೀಡಲಾಗದು ಎಂದು ಎಸ್‌ಬಿಐ ತಿಳಿಸಿದೆ.

ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಅರ್ಜಿಯನ್ನು ಸಲ್ಲಿಸಿದ್ದು, ಪ್ರಸ್ತುತ ರದ್ದಾದ ಚುನಾವಣಾ ಬಾಂಡ್ ಯೋಜನೆಯ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ | ವಿಶ್ವದಲ್ಲೇ ಅತೀ ದೊಡ್ಡ ಹಗರಣ ಎಂದ ನಿರ್ಮಲಾ ಸೀತಾರಾಮನ್ ಪತಿ!

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಎಸ್‌ಬಿಐನ ಉಪ ವ್ಯವಸ್ಥಾಪಕ ಎಂ ಖನ್ನಾ ಬಾಬು ಅವರು, “ಚುನಾವಣಾ ಬಾಂಡ್ ಮಾರ್ಗಸೂಚಿಯು ಆತಂರಿಕ ಮಾರ್ಗಸೂಚಿ ಮತ್ತು ಈ ಮಾಹಿತಿಯು ಆರ್‌ಟಿಐ ಕಾಯ್ದೆಯ 8(1)(ಡಿ) ಅಡಿಯಲ್ಲಿ ಬಹಿರಂಗಪಡಿಸಲು ಸಾಧ್ಯವಾಗದ ಮಾಹಿತಿ” ಎಂದು ತಿಳಿಸಿದ್ದಾರೆ.

ಆರ್‌ಟಿಐ ಕಾಯ್ದೆಯ 8(1)(ಡಿ) ಪ್ರಕಾರ ವಾಣಿಜ್ಯ, ಬೌದ್ಧಿಕ ಆಸ್ತಿ, ವಹಿವಾಟು ರಹಸ್ಯ ಮೊದಲಾದವುಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇದೆ. ಅಂದರೆ ಇಂತಹ ವಿಚಾರಗಳನ್ನು ಆರ್‌ಟಿಐ ಅಡಿಯಲ್ಲಿಯೂ ಬಹಿರಂಗಪಡಿಸದೆ ಇರಬಹುದು.

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿ ಬಾಂಡ್ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ತಿಳಿಸಿತ್ತು. ಆದರೆ ಎಸ್‌ಬಿಐ ಇದಕ್ಕಾಗಿ ನಾಲ್ಕು ತಿಂಗಳುಗಳ ಅವಕಾಶ ಕೋರಿತ್ತು. ಆದರೆ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್ ಒಂದು ದಿನದಲ್ಲೇ ಎಲ್ಲ ಮಾಹಿತಿ ನೀಡಲು ತಿಳಿಸಿತ್ತು. ಇದಾದ ಬಳಿಕ ಎಸ್‌ಬಿಐ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಿದೆ.

ಚುನಾವಣಾ ಬಾಂಡ್ ಮೂಲಕ ಹಗರಣವನ್ನು ಮಾಡಿರುವ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ರಕ್ಷಿಸುವ ಪ್ರಯತ್ನವನ್ನು ಎಸ್‌ಬಿಐ ಮಾಡಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಹಾಗೆಯೇ ಚುನಾವಣಾ ಬಾಂಡ್ ವಿಶ್ವದಲ್ಲೇ ಅತೀ ದೊಡ್ಡ ಹಗರಣ ಎಂದು ಹೇಳಿದೆ.

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...