ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಬಂಧಿತ ಪ್ರಾಧ್ಯಾಪಕ ಅಲಿ ಖಾನ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಅಸ್ತು

Date:

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ್ದ ಕಾರಣ ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಇಂದು ಅಥವಾ ನಾಳೆ ವಿಚಾರಣೆ ನಡೆಯುವ ಸಾಧ್ಯತೆಯಿದೆ.

- Advertisement -

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಪ್ರಾಧ್ಯಾಪಕ ಅಲಿ ಖಾನ್ ಬಂಧನ; ಸಚಿವ ವಿಜಯ್ ಶಾ ಬಂಧನವೇಕಿಲ್ಲ: ವಿಪಕ್ಷಗಳ ಪ್ರಶ್ನೆ

ಸದ್ಯ ಪ್ರಾಧ್ಯಾಪಕರ ಬಂಧನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಮತ್ತು ಎಸ್‌ಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಲಿ ಖಾನ್ ಅವರ ಬಂಧನವನ್ನು ಟೀಕಿಸಿದ್ದಾರೆ. ಹಾಗೆಯೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಚಿವ ವಿಜಯ್ ಶಾ ಬಂಧನವೇಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ನಡುವೆ ತನ್ನ ಬಂಧನವನ್ನು ಪ್ರಶ್ನಿಸಿ ಅಲಿ ಖಾನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಾಧ್ಯಾಪಕರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದ ಮುಂದೆ ಈ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ.

“ದೇಶಭಕ್ತಿಯ ಹೇಳಿಕೆ ನೀಡಿದ ಕಾರಣಕ್ಕಾಗಿ ಅವರನ್ನು (ಅಲಿ ಖಾನ್) ಬಂಧಿಸಲಾಗಿದೆ. ದಯವಿಟ್ಟು ಅರ್ಜಿ ವಿಚಾರಣೆಯನ್ನು ಮಂಗಳವಾರ ಅಥವಾ ಬುಧವಾರ ನಡೆಸಿ” ಎಂದು ಕಪಿಲ್ ಸಿಬಲ್ ಕೋರಿದರು. ಈ ವಿನಂತಿಯನ್ನು ಒಪ್ಪಿಕೊಂಡ ಸಿಜೆಐ ಗವಾಯಿ ಅವರು ಅರ್ಜಿಯ ಶೀಘ್ರ ವಿಚಾರಣೆಗೆ ಪಟ್ಟಿ ಮಾಡುವಂತೆ ನಿರ್ದೇಶಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...