ಕರ್ನಾಟಕದ ನಾಲ್ವರು ಸೇರಿದಂತೆ 7 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ

Date:

Advertisements

ನಾಲ್ವರು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.

ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನೆಲೆ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ನ್ಯಾಯದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

Advertisements

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯ ಕೊಲಿಜಿಯಂ ಹೊರಡಿಸಿದ ಹೇಳಿಕೆಯಲ್ಲಿ, “ಹೈಕೋರ್ಟ್‌ಗಳಲ್ಲಿ ವೈವಿಧ್ಯತೆಯನ್ನು ಹೆಚ್ಚಿಸುವ ಮತ್ತು ನ್ಯಾಯಾಂಗದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದ, ಸುಪ್ರೀಂ ಕೋರ್ಟ್ ಕೊಲಿಜಿಯಂ ಏಪ್ರಿಲ್ 15, 2025 ಮತ್ತು ಏಪ್ರಿಲ್ 19, 2025 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಿದೆ” ಎಂದು ತಿಳಿಸಿದೆ.

ಯಾರೆಲ್ಲಾ ವರ್ಗಾವಣೆ ?
ನ್ಯಾ. ಹೇಮಂತ್ ಚಂದನ ಗೌಡರ್​​: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೃಷ್ಣನ್ ನಟರಾಜನ್‌: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ. ಎನ್​​. ಶ್ರೀನಿವಾಸ ಸಂಜಯ್ ಗೌಡ: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೃಷ್ಣ ದೀಕ್ಷಿತ್: ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ‌. ಪೆರುಗು ಶ್ರೀಸುಧ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೆ. ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಡಾ. ಕೆ. ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Satyamev Jayate, Sadhvi Pragya Singh decison,kanunu dvate kanila naya ellagariu vande jai hind vandematram Bolo bharth mata ki jai,vote for Congress. Protection slum hindu terrisost target Ram Mandir bomb blast.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X