ಮಣಿಪುರ ಹಿಂಸಾಚಾರ |  ಕುಕಿ ಬುಡಕಟ್ಟು ಸಮುದಾಯದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಕಾರ

Date:

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯಕ್ಕೆ ಸೇನೆಯ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿದೆ.

- Advertisement -

ʻಇದು ಸಂಪೂರ್ಣವಾಗಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆʼ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎಂಎಂ ಸುಂದ್ರೇಶ್ ಅವರಿದ್ದ ರಜಾಕಾಲದ ಪೀಠವು, ವಿಚಾರಣೆಯನ್ನು ಜುಲೈ 3ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ʻಮಣಿಪುರ ಬುಡಕಟ್ಟು ವೇದಿಕೆʼ ಪರವಾಗಿ ವಿಷಯ ಪ್ರಸ್ತಾಪಿಸಿದ. ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ʻಕೇಂದ್ರ ಸರ್ಕಾರವು ನೀಡಿರುವ ಭದ್ರತೆಯ ಭರವಸೆಯನ್ನು ನಂಬಲು ಸಾಧ್ಯವಿಲ್ಲ.  ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಅಲ್ಪಸಂಖ್ಯಾತ ಕುಕಿ ಬುಡಕಟ್ಟು ಜನಾಂಗದವರಿಗೆ ಸೇನಾ ರಕ್ಷಣೆ ಕೋರಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ʻ ಭದ್ರತಾ ಏಜೆನ್ಸಿಗಳು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿರುವುದರಿಂದ ತುರ್ತು ವಿಚಾರಣೆಯ ಅಗತ್ಯವಿಲ್ಲʼ ಎಂದು ಹೇಳಿದರು.

ʻಕೇಂದ್ರ ಮತ್ತು ಮಣಿಪುರ ಸರ್ಕಾರಗಳು ಜಂಟಿಯಾಗಿ ಈಶಾನ್ಯ ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ “ಜನಾಂಗೀಯ ನಿರ್ಮೂಲನೆ” ಗುರಿಯನ್ನು ಹೊಂದಿದೆ.  ಎರಡೂ ಸರ್ಕಾರಗಳು ಕೋಮುವಾದಿ ಕಾರ್ಯಸೂಚಿಯನ್ನು ಹೊಂದಿವೆʼ ಎಂದು ಮಣಿಪುರ ಬುಡಕಟ್ಟು ವೇದಿಕೆ ಆರೋಪಿಸಿದೆ.

ಮೇ 3 ರಂದು ಮಣಿಪುರದಲ್ಲಿ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಭುಗಿಲೆದ್ದ ಹಿಂಸಾಚಾರದಲ್ಲಿಈಗಾಗಲೇ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು,  ನಾಗಾಗಳು ಮತ್ತು ಕುಕಿಗಳು  ರಾಜ್ಯದ ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ. ಈ ಜನಾಂಗದವರು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...