ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾ ಜಾಮೀನು ವಿಸ್ತರಣೆಗೆ ನಕಾರ

Date:

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಜಾಮೀನು ವಿಸ್ತರಿಸಲು ಶುಕ್ರವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಏಪ್ರಿಲ್ 20ರವರೆಗೆ ಬಲವಂತದ ಕ್ರಮದಿಂದ ರಕ್ಷಣೆ ಕೋರಿದ್ದ ಖೇರಾ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಬದಲಾಗಿ ಅಸ್ಸಾಂನ ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸಿ ನಿರೀಕ್ಷಣಾ ಜಾಮೀನು ಪಡೆಯುವಂತೆ ಪೀಠ ಸೂಚಿಸಿದೆ.

- Advertisement -

ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಶರ್ಮಾ ಅವರ ಬಳಿ ಮೂರು ದೇಶಗಳ ಪಾಸ್‌ಪೋರ್ಟ್‌ಳಿವೆ. ವಿದೇಶಗಳಲ್ಲಿ ಗಮನಾರ್ಹ ಆಸ್ತಿಯನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಇತ್ತೀಚೆಗೆ ಆರೋಪಿಸಿದ್ದರು. ಈ ಆರೋಪವು ಅಸ್ಸಾಂನಲ್ಲಿ ರಾಜಕೀಯ ವಿವಾದ ಸೃಷ್ಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಈ ಆರೋಪ ಸಂಬಂಧ ಅಸ್ಸಾಂ ಸಿಎಂ ಪತ್ನಿ ದೂರು ದಾಖಲಿಸಿದ್ದರು. ಅದಾದ ಬೆನ್ನಲ್ಲೇ ಪವನ್ ಖೇರಾ ನಿರೀಕ್ಷಣಾ ಜಾಮೀನು ಕೋರಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಒಂದು ವಾರದ ಮಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ಬುಧವಾರ ಸುಪ್ರೀಂ ಕೋರ್ಟ್ ತೆಲಂಗಾಣ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

ಶುಕ್ರವಾರ ಖೇರಾ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದಗಳನ್ನು ಶುಕ್ರವಾರ ಗಮನಿಸಿದ ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಅತುಲ್ ಎಸ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು, ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮತ್ತು ತೆಲಂಗಾಣ ಹೈಕೋರ್ಟ್ ಮಾಡಿದ ಪ್ರತಿಕೂಲ ಹೇಳಿಕೆಗಳನ್ನು ಪರಿಗಣಿಸಬೇಡಿ ಎಂದು ಅಸ್ಸಾಂ ನ್ಯಾಯಾಲಯಕ್ಕೆ ಸೂಚಿಸಿದೆ. ಖೇರಾ ಅವರ ಅರ್ಜಿಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಅಸ್ಸಾಂನ ಕೋರ್ಟ್‌ಗೆ ಪೀಠವು ತಿಳಿಸಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಅಸ್ಸಾಂ ಪೊಲೀಸರ ತಂಡವೊಂದು ನವದೆಹಲಿಯಲ್ಲಿರುವ ಪವನ್ ಖೇರಾ ಅವರ ನಿವಾಸಕ್ಕೆ ತೆರಳಿ ಶೋಧ ನಡೆಸಿತ್ತು. ಅಲ್ಲಿ ಅವರು ಪತ್ತೆಯಾಗದ ಕಾರಣ ಹೈದರಾಬಾದ್‌ನಲ್ಲಿದ್ದ ಖೇರಾ ಅವರನ್ನು ಹುಡುಕಿಕೊಂಡು ಪೊಲೀಸರು ತೆಲಂಗಾಣಕ್ಕೂ ಆಗಮಿಸಿದ್ದರು. ಇದರ ಬೆನ್ನಲ್ಲೇ ಬಂಧನದಿಂದ ರಕ್ಷಣೆ ಕೋರಿ ಪವನ್ ಖೇರಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...