ಚುನಾವಣಾ ಬಾಂಡ್ | ಎಸ್‌ಬಿಐ ಸಲ್ಲಿಸಿದ ಅರ್ಜಿ ವಜಾ, ನಾಳೆಯೇ ಮಾಹಿತಿ ನೀಡಿ ಎಂದ ಸುಪ್ರೀಂ

Date:

ಚುನಾವಣಾ ಬಾಂಡ್‌ ಮಾಹಿತಿಯನ್ನು ನೀಡಲು ಅಧಿಕ ಸಮಯವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ನಾಳೆಯೇ ಸಂಪೂರ್ಣ ಮಾಹಿತಿ ನೀಡಲು ಆದೇಶಿಸಿದೆ.

- Advertisement -

ಎಸ್‌ಬಿಐ ತನ್ನ ಅರ್ಜಿಯಲ್ಲಿ ಸ್ವತಃ ಎಲ್ಲಾ ವಿವರಗಳು ಪ್ರತ್ಯೇಕವಾಗಿ ಲಭ್ಯವಿದೆ ಎಂದು ಉಲ್ಲೇಖಿಸಿದೆ. ಹಾಗಿರುವಾಗ ಹೆಚ್ಚುವರಿ ಸಮಯ ಯಾಕೆ ನೀಡಬೇಕು ಎಂದು ಪ್ರಶ್ನಿಸಿರುವ ಸುಪ್ರೀಂ ಎಸ್‌ಬಿಐಯನ್ನು ತರಾಟೆಗೆ ತೆಗೆದುಕೊಂಡು, ಮಾಹಿತಿ ನೀಡಲು ಒಂದು ದಿನದ ಅವಕಾಶ ನೀಡಿದೆ. ಅಲ್ಲದೆ ಎಲ್ಲ ಮಾಹಿತಿಯನ್ನು ಒಟ್ಟುಗೂಡಿಸಿ ಎಸ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ಮಾರ್ಚ್‌ 15 ಸಂಜೆ 5 ಗಂಟೆಯೊಳಗೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಳೆದ ತಿಂಗಳು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದ್ದು, ಎಸ್‌ಬಿಐಗೆ ಚುನಾವಣಾ ಬಾಂಡ್‌ನ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಲು ಮಾರ್ಚ್‌ 6ರವರೆಗೆ ಸಮಯ ನೀಡಿತ್ತು.

ಆದರೆ ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ ಅಂತ್ಯದವರೆಗೂ ಅಂದರೆ ನಾಲ್ಕು ತಿಂಗಳುಗಳ ಕಾಲಾವಕಾಶವನ್ನು ಕೋರಿ ಎಸ್‌ಬಿಐ ಅರ್ಜಿ ಸಲ್ಲಿಸಿತ್ತು. ಲೋಕಸಭೆ ಚುನಾವಣೆ ಮುಗಿಯುವವರೆಗೂ ಎಸ್‌ಬಿಐ ಅವಕಾಶ ಕೇಳಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿತ್ತು.

ಇನ್ನು ಸುಪ್ರೀಂ ಕೋರ್ಟ್ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ (ಎಡಿಆರ್) ಎನ್‌ಜಿಒ ಮತ್ತು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಎಸ್‌ಬಿಐ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ವೇಳೆ ಉಲ್ಲೇಖಿಸಿದೆ.

ಅರ್ಜಿ ವಿಚಾರಣೆಯ ಆರಂಭದಲ್ಲೇ “ನೀವು 26 ದಿನಗಳ ಕಾಲ ಏನು ಮಾಡಿದ್ದೀರಿ?” ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್, “ಮೂರು ವಾರ ಕಾಲಾವಕಾಶ ನೀಡಿದರೆ ಯಾವ ಪಕ್ಷಕ್ಕೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಹೊರತುಪಡಿಸಿ ಉಳಿದ ಮಾಹಿತಿಯನ್ನು ನೀಡಬಹುದು” ಎಂದ ಎಸ್‌ಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ.

“ಈಗಾಗಲೇ ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ಲಭಿಸಿದೆ ಎಂಬ ಮಾಹಿತಿಯನ್ನು ರಾಜಕೀಯ ಪಕ್ಷಗಳೇ ನೀಡಿದೆ. ಮತ್ತೆ ಅದೇ ಮಾಹಿತಿ ನೀಡಲು ನಿಮಗೆ ಮೂರು ವಾರಗಳ ಸಮಯ ಯಾಕೆ?” ಎಂದು ಸುಪ್ರೀಂ ಕೋರ್ಟ್ ಎಸ್‌ಬಿಐ ಪರ ವಕೀಲ ಹರೀಶ್ ಸಾಳ್ವೆರನ್ನು ಪ್ರಶ್ನಿಸಿದೆ.

ಚುನಾವಣಾ ಬಾಂಡ್‌ಗಳ ಬಗ್ಗೆ ಫೆ.15 ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಪ್ರಕ್ರಿಯೆ ಅಸಂವಿಧಾನಿಕ ಹಾಗೂ ನಾಗರಿಕರ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತೀರ್ಪು ನೀಡಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...