BREAKING | ರಾಜ್ಯಸಭೆ ನಾಮಪತ್ರ ತಿರಸ್ಕಾರ ವಿರುದ್ಧದ ಮೀನಾಕ್ಷಿ ನಟರಾಜನ್ ಅರ್ಜಿ ವಜಾ

Date:

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ತಾವು ಸಲ್ಲಿಸಿದ ನಾಮಪತ್ರವನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಜೂನ್ 12) ವಜಾಗೊಳಿಸಿದೆ. ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ಚುನಾವಣಾ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

- Advertisement -

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಆರ್ಟಿಕಲ್ 329ರ ಅನ್ನು ಉಲ್ಲೇಖಿಸಿ ರಿಟ್ ಅರ್ಜಿ ವಿಚಾರಣೆಗೆ ನಿರಾಕರಿಸಿ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? ಮೀನಾಕ್ಷಿ ನಟರಾಜನ್ ನಾಮಪತ್ರ’ ವಿವಾದ: 3 ಸ್ಥಾನ ಗೆದ್ದ ಬಿಜೆಪಿ

ಇನ್ನು ನಾಮಪತ್ರ ತಿರಸ್ಕಾರವಾಗಿರುವುದು ಮೇಲ್ನೋಟಕ್ಕೆ ಕಾನೂನುಬಾಹಿರ, ಸ್ಪಷ್ಟವಾಗಿ ತಪ್ಪಾಗಿದ್ದರೆ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂಬ ವಾದವನ್ನು ಒಪ್ಪಿಕೊಳ್ಳಲು ಪೀಠ ನಿರಾಕರಿಸಿದೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಬಾಕಿ ಇರುವ ಒಂದು ಕಾನೂನು ಪ್ರಕರಣದ ವಿವರಗಳನ್ನು ಮೀನಾಕ್ಷಿ ನಟರಾಜನ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿಲ್ಲ ಎಂದು ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗೆ ದೂರು ನೀಡಿದ್ದರು. ಈ ಆಕ್ಷೇಪಣೆಯನ್ನು ಪುರಸ್ಕರಿಸಿದ ಚುನಾವಣಾಧಿಕಾರಿ ಅರವಿಂದ್ ಶರ್ಮಾ ಅವರು ಮೀನಾಕ್ಷಿ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ.

ಆದರೆ ಮೀನಾಕ್ಷಿ ನಟರಾಜನ್ ಅವರ ವಿರುದ್ಧ ಯಾವುದೇ ಎಫ್‌ಐಆರ್ (FIR) ಅಥವಾ ಕ್ರಿಮಿನಲ್ ಪ್ರಕರಣ ದಾಖಲಾಗಿಲ್ಲ, ಅವರಿಗೆ ಕೇವಲ ನೋಟಿಸ್ ಮಾತ್ರ ನೀಡಲಾಗಿತ್ತು. ಹಾಗಾಗಿ ಅಫಿಡವಿಟ್‌ನಲ್ಲಿ ಅದನ್ನು ಉಲ್ಲೇಖಿಸುವ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದಾರೆ.

ಚುನಾವಣಾ ಪ್ರಕ್ರಿಯೆಯ ಫಲಿತಾಂಶ ಘೋಷಣೆಗೆ ತಡೆ ನೀಡುವಂತೆ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿತ್ತು. ಆದರೆ, ಚುನಾವಣಾ ಪ್ರಕ್ರಿಯೆ ನಡೆಯುತ್ತಿರುವಾಗ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಅರ್ಜಿಯ ವಿವರವಾದ ವಿಚಾರಣೆಯನ್ನು ನಡೆಸಲು ಸಮ್ಮತಿಸಿತ್ತು. ಇದೀಗ ಈ ಅರ್ಜಿಯನ್ನೂ ವಜಾಗೊಳಿಸಿ ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ಚುನಾವಣಾ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....