ಅಯೋಧ್ಯೆ ರಾಮಮಂದಿರ ಲೂಟಿ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ದೇವಾಲಯವನ್ನು ನಿರ್ವಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ನೀಡಿದೆ.
ಇದನ್ನೂ ಓದಿ: ರಾಮಮಂದಿರ ಲೂಟಿ | ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್
ಈವರೆಗೆ ಏನೆಲ್ಲ ಬೆಳವಣಿಗೆಗಳಾಗಿವೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ವರದಿಯಲ್ಲಿ ಎಸ್‌ಐಟಿಯ ರಚನೆ ಕುರಿತಾಗಿಯೂ ಉಲ್ಲೇಖಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 20 ಕ್ಕೆ ನಿಗದಿಪಡಿಸಲಾಗಿದೆ.
ಇನ್ನು ಈ ಹಿಂದೆ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಲೂಟಿ, ಇತರೆ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ಆ ಅರ್ಜಿಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಇದೇ ವಿಚಾರದಲ್ಲಿ ವಿಚಾರಣೆ ನಡೆಯಲಿರುವಾಗ ಇಲ್ಲಿಯೂ ವಿಚಾರಣೆ ಅನಗತ್ಯ ಎಂದಿತ್ತು. ಈ ಅರ್ಜಿಗಳ ರವಾನೆ ಮಾಡಿತ್ತು.




