ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಮಸೂದೆ: ಕಾನೂನು ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

Date:

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ ತಡೆ ನೀಡಲು ಸುಪ್ರೀಂ ನಿರಾಕರಿಸಿದೆ.

ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ನೇತೃತ್ವದ ಪೀಠವು ನೂತನ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ನಾವು ನೋಟಿಸ್ ಜಾರಿಗೊಳಿಸಿದ್ದೇವೆ. ಆದರೆ ಕಾನೂನಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್, ಅರ್ಜಿದಾರರ ಪರವಾಗಿ ಹಾಜರಾಗಿದ್ದ ಜಯ ಠಾಕೂರ್ ಅವರು ನೂತನ ಮಸೂದೆಯು ಅಧಿಕಾರದ ಪ್ರತ್ಯೇಕತೆಗೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಮಸೂದೆಯನ್ನು ಸಂವಿಧಾನದ ಪೀಠಕ್ಕೆ ವರ್ಗಾಯಿಸಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೂತನ ಮಸೂದೆಗೆ ತಡೆ ನೀಡಲು ಸಾಧ್ಯವಿಲ್ಲ. ಪ್ರಕರಣದ ಅರ್ಜಿಯ ವಿಚಾರಣೆಯನ್ನು 2024ರ ಏಪ್ರಿಲ್‌ಗೆ ಮುಂದೂಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಮಾರ್ಪಡಿಸಿದ ನೂತನ ಕಾಯ್ದೆಯಲ್ಲಿ ಚುನಾವಣಾ ಆಯುಕ್ತರ ನೇಮಕದ ಸಮಿತಿಯಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿ ಮುಖ್ಯ ನ್ಯಾಯಾಧೀಶರ ಬದಲಾಗಿ ಪ್ರಧಾನಿ ಹಾಗೂ ವಿಪಕ್ಷ ನಾಯಕ ಒಳಗೊಂಡಿರುವುದನ್ಬು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಚೇರಿಯ ನಿಯಮಗಳು) ಕಾಯಿದೆ, 2023 ರ ವಿರುದ್ಧ ಮಧ್ಯ ಪ್ರದೇಶ ಕಾಂಗ್ರೆಸ್ ನಾಯಕಿ ಜಯ ಠಾಕೂರ್ ಹಾಗೂ ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದಾರೆ.

ಹೊಸ ಮಸೂದೆಯು ಸಂವಿಧಾನದ 14,21,50 ಹಾಗೂ 324ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಘೋಷಿಸಬೇಕು. ಏಕೆಂದರೆ ಇದು ಸಂವಿಧಾನ ಬದ್ಧವಾದ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ವಿರುದ್ಧವಾಗಿದೆ ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದರು.

ಕಾನೂನು ಹಾಗೂ ನ್ಯಾಯಾಂಗ ಸಚಿವಾಲಯವು 2023ರ ಡಿಸೆಂಬರ್ 28ರಂದು ನೂತನ ಮಸೂದೆಯ ಬಗ್ಗೆ ಸುತ್ತೋಲೆ ಹೊರಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...