ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಪ್ರಮಾಣದ ಪ್ರದರ್ಶನ: ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Date:

ಪೆಟ್ರೋಲ್ ಬಂಕ್‌ಗಳ ಪ್ರತಿ ನಳಿಕೆಯ (nozzle) ಮೇಲೆ ಪೆಟ್ರೋಲ್‌ನಲ್ಲಿರುವ ನಿಖರವಾದ ಎಥೆನಾಲ್ ಪ್ರಮಾಣವನ್ನು ಕಡ್ಡಾಯವಾಗಿ ಮತ್ತು ಏಕರೂಪವಾಗಿ ಪ್ರದರ್ಶಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

- Advertisement -

​ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಅರ್ಜಿದಾರ ನರೇಂದ್ರ ಕುಮಾರ್ ಗೋಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಜಾಗೊಳಿಸಿದೆ. ಆದಾಗ್ಯೂ, ಈ ಕುರಿತು ತಮ್ಮ ಕುಂದುಕೊರತೆಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಹೈಕೋರ್ಟ್ ಅನ್ನು ಸಂಪರ್ಕಿಸಲು ಅರ್ಜಿದಾರರಿಗೆ ಪೀಠವು ಸ್ವಾತಂತ್ರ್ಯ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ವಿಚಾರಣೆ ವೇಳೆ ಅರ್ಜಿದಾರ ಗೋಸ್ವಾಮಿ, “ಗ್ರಾಹಕರು ತಾವು ಖರೀದಿಸುತ್ತಿರುವ ಇಂಧನದ ಸಂಯೋಜನೆಯನ್ನು (composition) ತಿಳಿಯುವ ಹಕ್ಕನ್ನು ಹೊಂದಿದ್ದಾರೆ. ಆದರೆ, ಪೆಟ್ರೋಲ್ ರಸೀದಿಗಳಲ್ಲಿ ಎಥೆನಾಲ್ ಅಂಶದ ಬಗ್ಗೆ ಯಾವುದೇ ಮಾಹಿತಿಯಿರುವುದಿಲ್ಲ. ರಸೀದಿ ನೋಡಿ, ಇದರಲ್ಲಿ ಎಥೆನಾಲ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇದನ್ನು ತಿಳಿದುಕೊಳ್ಳುವ ಹಕ್ಕು ನನಗಿದೆ” ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ (ಎಜಿ) ಆರ್. ವೆಂಕಟರಮಣಿ ಅವರು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದರು. “ಭಾರತ ಸರ್ಕಾರವು ತಮಗೆ ಉತ್ತರದಾಯಿಯಾಗಿರಬೇಕು ಎಂದು ಅರ್ಜಿದಾರರು ಬಯಸುತ್ತಿದ್ದಾರೆ!” ಎಂದು ಅವರು ಆಕ್ಷೇಪಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಅಭಿಪ್ರಾಯಪಟ್ಟು, ಪ್ರಕರಣದಲ್ಲಿ ಯಾವುದೇ ಆದೇಶ ಅಥವಾ ನಿರ್ದೇಶನ ನೀಡಲು ನಿರಾಕರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...