ಕೇಜ್ರಿವಾಲ್ ಜಾಮೀನು ವಿಸ್ತರಣೆ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಸ್ತರಣೆ ಅರ್ಜಿಯ ತುರ್ತು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ನಿರಾಕರಿಸಿದ್ದು, ಅರ್ಜಿಯ ವಿಚಾರಣೆಯ ಹೆಚ್ಚಿನ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಕಳುಹಿಸಿದೆ.

ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಜೂನ್ 1ರಂದು ಕೊನೆಯಾಗಲಿದ್ದು, ಕೇಜ್ರಿವಾಲ್ ಜೂನ್ 2ಕ್ಕೆ ಮತ್ತೆ ಶರಣಾಗಬೇಕಾಗುತ್ತದೆ. ಆದರೆ ಆರೋಗ್ಯ ಸಮಸ್ಯೆಯ ಕಾರಣವನ್ನು ನೀಡಿ ಜಾಮೀನನ್ನು ಮತ್ತೆ 7 ದಿನಗಳ ಕಾಲ ವಿಸ್ತರಣೆ ಮಾಡಲು ಕೋರಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ?  ಒಂದು ತಿಂಗಳಲ್ಲಿ 7 ಕೆಜಿ ತೂಕ ನಷ್ಟ: ಬಹಳ ಗಂಭೀರ ಸಮಸ್ಯೆ ಎಂದ ಕೇಜ್ರಿವಾಲ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿಸಿದೆ. ಅದಾದ ಬಳಿಕ ತಿಹಾರ್‌ ಜೈಲಿಗೆ ಕಳುಹಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದ್ದು ಮೇ 10ರಂದು ಕೇಜ್ರಿವಾಲ್ ಬಿಡುಗಡೆಗೊಂಡಿದ್ದಾರೆ.

ಈಗ ಆರೋಗ್ಯ ಸಮಸ್ಯೆಯ ಕಾರಣ ವೈದ್ಯಕೀಯ ಪರೀಕ್ಷೆಗಾಗಿ 7 ದಿನಗಳ ಕಾಲ ಜಾಮೀನು ಅವಧಿ ವಿಸ್ತರಿಸಲು ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕೇಜ್ರಿವಾಲ್ ಪರವಾಗಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಮುಖ್ಯಮಂತ್ರಿ ಅವರ ಜಾಮೀನು ವಿಸ್ತರಣೆ ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಆದರೆ ಈ ಪ್ರಸ್ತಾಪವನ್ನು ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ ನಿರಾಕರಿಸಿತು.

ಇದನ್ನು ಓದಿದ್ದೀರಾ?  ಮಧ್ಯಂತರ ಜಾಮೀನು 7 ದಿನ ವಿಸ್ತರಿಸಲು ಕೋರಿ ಸುಪ್ರೀಂಗೆ ಕೇಜ್ರಿವಾಲ್ ಅರ್ಜಿ

ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ತಿಂಗಳ ಅವಧಿಯಲ್ಲಿಯೇ ಬರೋಬ್ಬರಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದು ತಮ್ಮ ತೂಕ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿದ್ದಾರೆ.

ಕೆಲವು ಗಂಭೀರ ವೈದ್ಯಕೀಯ ಸ್ಥಿತಿಯನ್ನು ಎದುರಿಸುತ್ತಿರುವ ಕಾರಣ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲು ಇನ್ನೂ ಏಳು ದಿನಗಳವರೆಗೆ ಮಧ್ಯಂತರ ಜಾಮೀನು ವಿಸ್ತರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

ಈ ಬಗ್ಗೆ ಬಟಿಂಡಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ನನ್ನ ತೂಕ ಭಾರೀ ಇಳಿಕೆಯಾಗಿದೆ. ಯಾವುದೇ ಕಾರಣವಿಲ್ಲದೆ ಒಬ್ಬ ವ್ಯಕ್ತಿಯ ತೂಕ ಒಂದು ತಿಂಗಳಲ್ಲಿ 7 ಕೆಜಿಯಷ್ಟು ಇಳಿಕೆಯಾದರೆ ಅದು ಅತೀ ಗಂಭೀರವಾದ ಸಮಸ್ಯೆ. ಆದ್ದರಿಂದ ವೈದ್ಯರು ಹಲವಾರು ಪರೀಕ್ಷೆಗಳನ್ನು ಸೂಚಿಸಿದ್ದಾರೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಷೇರು ಮಾರುಕಟ್ಟೆಯ ಅಕ್ರಮದ ತನಿಖೆಗಾಗಿ ಟಿಎಂಸಿ ನಿಯೋಗದಿಂದ ಸೆಬಿ ಅಧಿಕಾರಿಗಳ ಭೇಟಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರ ನಿಯೋಗ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ)...

ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ಬಕ್ರೀದ್ ಸಂಭ್ರಮಾಚರಣೆ ಮರೆತು ಪ್ರಯಾಣಿಕರ ರಕ್ಷಣೆಗಿಳಿದ ಮುಸ್ಲಿಮರು

ಪಶ್ಚಿಮ ಬಂಗಾಳದ ಐಕಾನಿಕ್ ಗಿರಿಧಾಮ ಡಾರ್ಜಿಲಿಂಗ್ ಬಳಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್...