ಪತಂಜಲಿ ಜಾಹೀರಾತು ವಿವಾದ | ರಾಮ್‌ದೇವ್ ವಿರುದ್ಧ ಸುಪ್ರೀಂ ವಾಗ್ದಾಳಿ, ಕ್ಷಮಾಪಣೆ ತಿರಸ್ಕರಿಸಿದ ಕೋರ್ಟ್

Date:

ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮಾಪತ್ರವನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, “ನಾವು ಕುರುಡರಲ್ಲ, ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ” ಎಂದು ಹೇಳಿದೆ. ಅಷ್ಟೇ ಅಲ್ಲ, ಕೋರ್ಟ್ ಈ ಸಂದರ್ಭದಲ್ಲೇ “ಈ ವಿಚಾರದಲ್ಲಿ ಕೇಂದ್ರದ ಉತ್ತರದಿಂದ ತೃಪ್ತವಾಗಿಲ್ಲ” ಎಂದೂ ತಿಳಿಸಿದೆ.

- Advertisement -

“ಕ್ಷಮಾಪಣೆಯು ಕಾಗದದ ಮೇಲಿದೆ. ಅವರ ಬೆನ್ನು ಗೋಡೆಗೆ ವಿರುದ್ಧವಾಗಿದೆ. ನಾವು ಇದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತೇವೆ. ನಾವು ಉದ್ದೇಶಪೂರ್ವಕ ಒಪ್ಪಂದದ ಉಲ್ಲಂಘನೆ ಎಂದು ಪರಿಗಣಿಸುತ್ತೇವೆ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿಚಾರಣೆಯ ಆರಂಭದಲ್ಲಿ, ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಮೊದಲು ಮಾಧ್ಯಮಗಳಿಗೆ ಕ್ಷಮೆಯಾಚಿಸಿದರು ಎಂಬ ಅಂಶವನ್ನು ಪೀಠವು ಒತ್ತಿ ಹೇಳಿದೆ. “ವಿಷಯವು ನ್ಯಾಯಾಲಯದ ಮೆಟ್ಟಿಲೇರುವವರೆಗೂ, ನಮಗೆ ಅಫಿಡವಿಟ್‌ಗಳನ್ನು ಕಳುಹಿಸುವುದು ಸೂಕ್ತವೆಂದು ಅವರಿಗೆ ಅನಿಸಿಲ್ಲ. ಅವರು ಅಫಿಡವಿಟ್ ಅನ್ನು ಮೊದಲು ಮಾಧ್ಯಮಗಳಿಗೆ ಕಳುಹಿಸಿದ್ದು ನಿನ್ನೆ ಸಂಜೆ 7.30 ರವರೆಗೆ ಅದನ್ನು ಕೋರ್ಟ್‌ಗೆ ನೀಡಿಲ್ಲ. ಇದು ಅವರು ಪ್ರಚಾರವನ್ನು ನಂಬುತ್ತಾರೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ” ಎಂದು ನ್ಯಾಯಮೂರ್ತಿ ಕೊಹ್ಲಿ ಹೇಳಿದರು.

ಇದನ್ನು ಓದಿದ್ದೀರಾ?   ಜಾಹೀರಾತು ಪ್ರಕರಣ | ರಾಮ್‌ದೇವ್‌ಗೆ ಸುಪ್ರೀಂ ಸಮನ್ಸ್ ಬೆನ್ನಲ್ಲೇ ಕ್ಷಮೆಯಾಚಿಸಿದ ಪತಂಜಲಿ

ಇನ್ನು ಪತಂಜಲಿ ಸಂಸ್ಥಾಪಕರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, “ಕಕ್ಷಿದಾರರ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಮತ್ತು ಕ್ಷಮೆ ಕೇಳಲಾಗಿದೆ” ಎಂದು ಹೇಳಿದರು. ಅಫಿಡವಿಟ್‌ಗಳನ್ನು ಓದುತ್ತಿದ್ದಂತೆ ನ್ಯಾಯಮೂರ್ತಿ ಅಮಾನುಲ್ಲಾ ಅವರು, “ನೀವು ಅಫಿಡವಿಟ್‌ಗೆ ವಂಚಿಸುತ್ತಿದ್ದೀರಿ. ಈ ಅಫಿಡವಿಟ್ ಮಾಡಿದ್ದು ಯಾರು, ನನಗೆ ಆಶ್ಚರ್ಯವಾಗಿದೆ” ಎಂದರು.

ಮುಕುಲ್ ರೋಹಟಗಿ ‘ತಪ್ಪಾಗಿದೆ’ ಎಂದು ಹೇಳಿದ್ದು, ಅದಕ್ಕೆ ನ್ಯಾಯಾಲಯವು “ತುಂಬಾ ಸಣ್ಣ ಮಾತು” ಎಂದು ಉತ್ತರಿಸಿದೆ. ಕ್ಷಮೆಯಾಚನೆಯು ‘ಹೃದಯಪೂರ್ವಕವಾಗಿದೆಯೇ’ ಎಂದು ನ್ಯಾಯಮೂರ್ತಿ ಅಮಾನುಲ್ಲಾ ಪ್ರಶ್ನಿಸಿದರು. “ಇನ್ನೇನು ಹೇಳುವುದು, ನೀವು ಹೇಳಿದಂತೆ ಮಾಡುತ್ತೇವೆ. ಅವರು ವೃತ್ತಿಪರ ದಾವೆದಾರರಲ್ಲ. ಜನರು ಜೀವನದಲ್ಲಿ ತಪ್ಪುಗಳನ್ನು ಮಾಡುತ್ತಾರೆ” ಎಂದು ರೋಹಟಗಿ ಉತ್ತರಿಸಿದರು.

“ನಮ್ಮ ಆದೇಶದ ನಂತರವೂ ತಪ್ಪು ಮಾಡುತ್ತಾರೆಯೇ? ಈ ಪ್ರಕರಣದಲ್ಲಿ ನಾವು ತುಂಬಾ ಉದಾರವಾಗಿರಲು ಬಯಸುವುದಿಲ್ಲ” ಎಂದು ಪೀಠ ಸ್ಪಷ್ಟಪಡಿಸಿದೆ. “ಕೇವಲ ಒಂದು ಎಫ್‌ಎಂಸಿಜಿಯ ವಿಚಾರವಲ್ಲ, ಇದು ಕಾನೂನಿನ ಉಲ್ಲಂಘನೆ ವಿಚಾರವಾಗಿದೆ. ರಾಜ್ಯ ಪ್ರಾಧಿಕಾರವು ನಿಮ್ಮನ್ನು ಹಿಂತೆಗೆದುಕೊಳ್ಳುವಂತೆ ಕೇಳಿದಾಗ ನಿಮ್ಮ ಪ್ರತ್ಯುತ್ತರಗಳನ್ನು ನೋಡಿ” ಎಂದು ತರಾಟೆಗೆ ತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...