ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

Date:

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ ಪ್ರತಿಕ್ರಿಯೆ ಸಲ್ಲಿಸಲು ವಿಳಂಬ ಮಾಡಿದ್ದಕ್ಕಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ₹10,000 ದಂಡ ವಿಧಿಸಿದೆ.

- Advertisement -

ಜಮೀನು ಹಗರಣದ ತನಿಖೆ ವೇಳೆ ಇಡಿ ಅಧಿಕಾರಿಗಳು ತಮ್ಮ ಹಕ್ಕುಗಳನ್ನು ಉಲ್ಲಂಘಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಿಎಂ ಹೇಮಂತ್ ಸೊರೇನ್ ಅವರು ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ಹಾಗೂ ಅದರ ಆಧಾರಿತ ನಡಾವಳಿಗಳನ್ನು ರದ್ದುಗೊಳಿಸುವಂತೆ ಕೋರಿ ಇಡಿ ಅಧಿಕಾರಿಗಳು ಜಾರ್ಖಂಡ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ; ಸಚಿವೆಯ ಪುತ್ರಿ ಸೇರಿ ನಾಲ್ವರ ಸಾವು

ಈ ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದ ಅಥವಾ ಪ್ರತಿಕ್ರಿಯೆಯನ್ನು ಸಲ್ಲಿಸಲು ಹೈಕೋರ್ಟ್ ಸಮಯ ನೀಡಿದ್ದರೂ, ಸೊರೇನ್ ಅವರ ಪರ ವಕೀಲರು ನಿಗದಿತ ಅವಧಿಯಲ್ಲಿ ಪ್ರತಿಕ್ರಿಯೆ ಸಲ್ಲಿಸಿರಲಿಲ್ಲ. ಈ ವಿಳಂಬಕ್ಕೆ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ₹10,000 ದಂಡ ವಿಧಿಸಿ ಆದೇಶಿಸಿದೆ. ಅಲ್ಲದೆ, ಮುಂದಿನ ನಿಗದಿತ ಸಮಯದೊಳಗೆ ಕಡ್ಡಾಯವಾಗಿ ಪ್ರತಿಕ್ರಿಯೆ ಸಲ್ಲಿಸಬೇಕೆಂದು ಸೂಚಿಸಿದೆ.

ಪ್ರಕರಣದ ಮುಂದಿನ ವಿವರವಾದ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 2ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ವಿರುದ್ಧ ಅ. 2ರಂದು ಬೃಹತ್ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್

ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ಕಾರ್ಯವೈಖರಿಯನ್ನು ಒತ್ತಾಯಿಸಿ ಹಾಗೂ ಮುಖ್ಯ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಈ ದಿನ ಸಂಪಾದಕೀಯ | ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆಯೇ, ನಾಯಕರ ಮಾತು ಎಚ್ಚರಿಕೆಯ ಗಂಟೆಯೇ?

ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್‌, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ...