ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ಸೇರಿ 67 ಮಂದಿ ಬಡ್ತಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

Date:

  • ಏ.18ರಂದು ಅಧಿಸೂಚನೆ ಹೊರಡಿಸಿದ್ದ ಹೈಕೋರ್ಟ್‌ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ
  • ರಾಜ್ಯ ಸರ್ಕಾರ ಹೊರಡಿಸಿದ ನೋಟೀಸ್‌ ಸುಪ್ರೀಂ ಕೋರ್ಟ್ ತೀರ್ಪುಗಳ ಉಲ್ಲಂಘನೆ ಎಂದ ಪೀಠ  

ಮಾನಹಾನಿ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ ನ್ಯಾಯಾಧೀಶರು ಸೇರಿದಂತೆ 68 ನ್ಯಾಯಾಧೀಶರನ್ನು ಜಿಲ್ಲಾ ನ್ಯಾಯಾಧೀಶರಾಗಿ ಬಡ್ತಿ ನೀಡುವ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ.

ನ್ಯಾಯಮೂರ್ತಿಗಳಾದ ಎಂ ಆರ್ ಷಾ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ನ್ಯಾಯಾಂಗ ಅಧಿಕಾರಿಗಳ ಬಡ್ತಿಗಾಗಿ ಗುಜರಾತ್ ಹೈಕೋರ್ಟ್ ನೀಡಿದ ಶಿಫಾರಸಿಗೆ ತಡೆ ನೀಡಿತು ಮತ್ತು ನ್ಯಾಯಾಲಯದ ಶಿಫಾರಸಿನ ಅನುಷ್ಠಾನಕ್ಕೆ ಗುಜರಾತ್ ಸರ್ಕಾರ ನೀಡಿದ ನೋಟಿಸ್‌ಗೆ ಕೂಡ ತಡೆ ನೀಡಿದೆ.

ಈ ವಿಷಯವು ವಿಚಾರಣೆಗೆ ಒಳಪಟ್ಟಿದ್ದರೂ ಕೂಡ ಬಡ್ತಿಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023| ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ

68 ನ್ಯಾಯಾಂಗ ಅಧಿಕಾರಿಗಳ ಪೈಕಿ ಹರೀಶ್ ಹಸ್ಮುಖ್ ಭಾಯ್ ವರ್ಮಾ ಅವರು ರಾಹುಲ್ ಗಾಂಧಿ ವಿರುದ್ಧ ದೋಷಾರೋಪಣೆಯ ಆದೇಶ ಜಾರಿಗೊಳಿಸಿ, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು.

ಸುಪ್ರೀಂಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ, ತರಾತುರಿಯಲ್ಲಿ ರಾಜ್ಯ ಸರ್ಕಾರ ನ್ಯಾಯಾಧೀಶರ ಬಡ್ತಿಗಾಗಿ ಹೊರಡಿಸಿದ ಆದೇಶವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. “ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಅಧಿಕಾರಿಗಳಿಗೆ ಬಡ್ತಿ ನೀಡುವ ನಿರ್ಧಾರದ ಅನುಷ್ಠಾನವನ್ನು ತಡೆಹಿಡಿಯುತ್ತೇವೆ” ಎಂದು ನ್ಯಾಯಮೂರ್ತಿ ಎಂ ಆರ್‌ ಷಾ ತಿಳಿಸಿದ್ದಾರೆ.

ಕೆಳ ನ್ಯಾಯಾಲಯದ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ವರ್ಗಾವಣೆಯ ಕುರಿತು ಏಪ್ರಿಲ್ 18ರಂದು ಅಧಿಸೂಚನೆಯನ್ನು ಹೊರಡಿಸಿದ್ದ ಹೈಕೋರ್ಟ್‌ ವಿರುದ್ಧ ಸುಪ್ರೀಂ ಕೋರ್ಟ್ ಏಪ್ರಿಲ್ 28ರಂದು ಅಸಮಾಧಾನ ವ್ಯಕ್ತಪಡಿಸಿತ್ತು. ಹೈಕೋರ್ಟ್‌ ಅಧಿಸೂಚನೆಯ ಪ್ರಕಾರ ವರ್ಮಾ ಅವರನ್ನು ರಾಜ್‌ಕೋಟ್ ಜಿಲ್ಲಾ ನ್ಯಾಯಾಲಯಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಲಾಗುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...