ಅದಾನಿ ಹಿಂಡನ್‌ಬರ್ಗ್ ಪ್ರಕರಣ: ನ. 8ಕ್ಕೆ ಅಂತಿಮ ದಾಖಲೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ

Date:

ಅದಾನಿ ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸಂಬಂಧಿತ ಎಲ್ಲರೂ ಕೂಡ ಬುಧವಾರದೊಳಗೆ (ನ. 8) ಅಂತಿಮ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ.

- Advertisement -

ಅದಾನಿ ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟೂ ಬೇಗ ವಿಚಾರಣೆ ಆರಂಭಿಸುವಂತೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿದಾರರೊಬ್ಬರು ಸಲ್ಲಿಸಿದ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ರಿಜಿಸ್ಟ್ರಾರ್​ಗೆ ಇದನ್ನು ಗಮನಿಸಲು ಹೇಳುವುದಾಗಿ ತಿಳಿಸಿತು. ಹಾಗೆಯೇ, ನಾಳೆ ಇದನ್ನು ಮತ್ತೆ ಪ್ರಸ್ತಾಪಿಸುವಂತೆಯೂ ಅರ್ಜಿದಾರರಿಗೆ ಸೂಚಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅರ್ಜಿದಾರರ ಪರ ವಾದಿಸಿದ ಪ್ರಶಾಂತ್ ಭೂಷಣ್, ಈ ಪ್ರಕರಣವನ್ನು ಲಿಸ್ಟ್​ಗೆ ಹಾಕಿಸಲು ಅರ್ಜಿದಾರರು ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಸಾಧ್ಯವಾಗಿಲ್ಲ ಆಗಸ್ಟ್ 28ಕ್ಕೆ ವಿಚಾರಣೆ ನಡೆಯಲು ಲಿಸ್ಟ್ ಆಗಿತ್ತಾದರೂ ಅದು ಮುಂದಕ್ಕೆ ಹೋಗಿದೆ. ಈಗ ಮತ್ತೆ ಲಿಸ್ಟ್ ಆಗುತ್ತಿಲ್ಲ. ಆದಷ್ಟೂ ಬೇಗ ಪ್ರಕರಣವು ಲಿಸ್ಟ್ ಆಗಿ, ವಿಚಾರಣೆ ಶುರುವಾಗಲಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಅವರು, ಸರ್ಕಾರ ಈ ಪ್ರಕರಣದಲ್ಲಿ ಎರಡು ಪುಟಗಳ ದಾಖಲೆಯನ್ನು ಸಲ್ಲಿಸಬೇಕಿದೆ ಎಂಬ ವಿಚಾರವನ್ನು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಾದ್ಯಂತ ನೀರಾವರಿ ಪಂಪ್‍ಸೆಟ್‍ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್: ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ

ಅದಾನಿ ಸಮೂಹದ ಷೇರುಗಳ ಬೆಲೆಯನ್ನು ತಿರುಚಿದ ಆರೋಪಗಳಿಗೆ ಸಂಬಂಧಿಸಿದ ಪಿಐಎಲ್‌ಗಳ ವಿಚಾರಣೆಗೆ ಪಟ್ಟಿ ಮಾಡುವ ವಿಷಯವನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಪರಿಶೀಲಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ತಿಳಿಸಿದೆ.

ಜುಲೈ 11 ರಂದು, ಅದಾನಿ ಸಮೂಹದಿಂದ ಷೇರುಗಳ ಬೆಲೆ ತಿರುಚಿದ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯ ಸ್ಥಿತಿಯ ಬಗ್ಗೆ ತಿಳಿಸುವಂತೆ ‘ಸೆಬಿ’ಗೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸೆಬಿಯಿಂದ ತನಿಖೆಗೆ ಆಗಸ್ಟ್ 14 ರವರೆಗೆ ಕಾಲಾವಕಾಶ ನೀಡಿದ್ದ ನ್ಯಾಯಾಲಯ, ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು ಎಂದು ಹೇಳಿತ್ತು.

ಸೆಬಿ ಈ ಪ್ರಕರಣದಲ್ಲಿ 24 ಅಂಶಗಳನ್ನು ತನಿಖೆ ಮಾಡಿದೆ. ಇದರಲ್ಲಿ 22 ತನಿಖೆಗಳು ಅಂತಿಮಗೊಂಡಿವೆ. ಇನ್ನೆರಡು ತನಿಖೆಯಲ್ಲಿ ಮಧ್ಯಂತರ ವರದಿಗಳು ಸಿದ್ಧವಾಗಿವೆ. ನವೆಂಬರ್ 8ಕ್ಕೆ ದೂರುದಾರರು, ಅದಾನಿ ಪರ ವಕೀಲರು, ಸರ್ಕಾರ ಮತ್ತು ಸೆಬಿ ಎಲ್ಲರೂ ಕೂಡ ಅಂತಿಮ ದಾಖಲೆಗಳನ್ನು ಸುಪ್ರೀಂ ನ್ಯಾಯಪೀಠಕ್ಕೆ ಸಲ್ಲಿಸಬೇಕಾಗುತ್ತದೆ. ಅದಾದ ಬಳಿಕ ಮುಂದಿನ ವಿಚಾರಣೆಗೆ ನ್ಯಾಯಪೀಠ ದಿನ ನಿಗದಿ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...