ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ; ಸುಪ್ರೀಂ ಕೋರ್ಟ್‌ನಿಂದ ಇಂದು ತೀರ್ಪು

Date:

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು(ಜುಲೈ 12) ತೀರ್ಪು ನೀಡಲಿದೆ.

- Advertisement -

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಮೇ 17 ರಂದು ಕೇಜ್ರಿವಾಲ್ ಅವರ ಮನವಿಯ ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಸುಪ್ರೀಂ ಪೀಠವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಮನವಿಯ ಬಗ್ಗೆ ಈ ವರ್ಷದ ಏಪ್ರಿಲ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ಕೋರಿತ್ತು.

ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಏಪ್ರಿಲ್ 9 ರ ಆದೇಶವನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಏತನ್ಮಧ್ಯೆ, ಸೆಪ್ಟೆಂಬರ್ 9 ರಂದು ಇ.ಡಿ ತಮಗೆ ನೀಡಲಾದ ಸಮನ್ಸ್‌ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ಗುರುವಾರ(ಜುಲೈ 11) ಪಟ್ಟಿ ಮಾಡಿದೆ. ನ್ಯಾಯಮೂರ್ತಿ ಪ್ರತಿಬಾ ಎಂ ಸಿಂಗ್ ನೇತೃತ್ವದ ಪೀಠವು ಸಲ್ಲಿಸಿದ ಉತ್ತರಕ್ಕೆ ಮರುಪರಿಶೀಲನೆ ಸಲ್ಲಿಸಲು ಎಎಪಿ ನಾಯಕರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಜೂನ್ 20 ರಂದು, 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು. ಆದಾಗ್ಯೂ, ಇ.ಡಿ ಮರುದಿನ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಜಾಮೀನು ಆದೇಶವನ್ನು ರದ್ದುಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...