ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ಬಗ್ಗೆ ಏ.18ರಂದು ಸುಪ್ರೀಂ ತೀರ್ಪು

Date:

ಚುನಾವಣಾ ಬಾಂಡ್‌ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು ಬ್ಯಾಚ್‌ನ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ(ಏ.18) ತೀರ್ಪು ಪ್ರಕಟಿಸಲಿದೆ.

- Advertisement -

ಇದೇ ವಿಷಯವಾಗಿ ಕಳೆದ ವರ್ಷದ ನವೆಂಬರ್‌ 2 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರವು ಜನವರಿ 2, 2018ರಂದು ಅಧಿಸೂಚನೆ ಹೊರಡಿಸಿದ್ದು, ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ನಗದು ನೆರವು ನೀಡುವ ಪರ್ಯಾಯವಾಗಿ ಚುನಾವಣಾ ಬಾಂಡ್ ಯೋಜನೆಯನ್ನು ಆರಂಭಿಸಲಾಗಿತ್ತು.

ಯೋಜನೆಯ ನಿಯಮಾವಳಿಗಳ ಅನ್ವಯ,ದೇಶದ ಯಾವುದೇ ಪ್ರಜೆ ಅಥವಾ ದೇಶದಲ್ಲಿ ಸ್ಥಾಪಿತವಾದ ಸಂಸ್ಥೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದಾಗಿತ್ತು. ವೈಯಕ್ತಿಕವಾಗಿ ಅಥವಾ ಇತರರೊಂದಿಗೆ ಜಂಟಿಯಾಗಿ ಚುನಾವಣಾ ಬಾಂಡ್ಗಳನ್ನು ಖರೀದಿಸಬಹುದಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

1951ನೇ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 29ಎ ಅಡಿಯಲ್ಲಿ ಕಳೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಶೇ.1 ರಷ್ಟು ಮತ ಪಡೆದ ನೋಂದಾಯಿಸಲಾದ ರಾಜಕೀಯ ಪಕ್ಷಗಳು ಮಾತ್ರ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ಅರ್ಹವಾಗಿದ್ದವು.

ಅಧಿಸೂಚನೆಯ ಪ್ರಕಾರ, ಅರ್ಹತೆ ಹೊಂದಿದ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ಅಧಿಕೃತ ಬ್ಯಾಂಕ್‌ಗಳ ಮೂಲಕ ನಗದನ್ನಾಗಿ ಸ್ವೀಕರಿಸಬಹುದಾಗಿತ್ತು.

ಆದಾಗ್ಯೂ 2019ರ ಏಪ್ರಿಲ್‌ನಲ್ಲಿ , ಅರ್ಜಿಗಳನ್ನು ಸುದೀರ್ಘವಾಗಿ ವಿಚಾರಣೆ ನಡೆಸದೆ ಚುನಾವಣಾ ಬಾಂಡ್‌ಗಳ ಯೋಜನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ನಂತರದಲ್ಲಿ ಕಳೆದ ವರ್ಷದ ಅಕ್ಟೋಬರ್‌ 31ರಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ   ಕಾಂಗ್ರೆಸ್‌ನ ಜಯಾ ಠಾಕೂರ್, ಸಿಪಿಎಂ ಹಾಗೂ ಎನ್‌ಜಿಒ ಸಂಸ್ಥೆ ಎಡಿಆರ್‌ ಒಳಗೊಂಡ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ವಾದಗಳನ್ನು ಆಲಿಸಿತ್ತು.

ಈ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಪ್ರಕ್ರಿಯೆಗಳಲ್ಲಿ ನಗದು ಹಣವನ್ನು ಕಡಿಮೆ ಮಾಡುವ ಅಗತ್ಯತೆಯನ್ನು ಒತ್ತಿ ಹೇಳಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...