ಮುಂಬೈ ಪೊಲೀಸ್ ಸೋಗಿನಲ್ಲಿ ಪೊಲೀಸ್‌ಗೆ ಕರೆ ಮಾಡಿ ಸಿಕ್ಕಿಬಿದ್ದ ವಂಚಕ; ವಿಡಿಯೋ ವೈರಲ್

Date:

ಪ್ರಸ್ತುತ ದೇಶದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಅಧಿಕವಾಗುತ್ತಿದೆ. ಅದರಲ್ಲೂ ಪೊಲೀಸ್‌ ಸೋಗಿನಲ್ಲಿ, ನ್ಯಾಯಾಧೀಶರ ಸೋಗಿನಲ್ಲಿ ವಿಡಿಯೋ ಕರೆ ಮಾಡಿ ಹಣ ದೋಚುವ ಅದೆಷ್ಟೋ ಪ್ರಕರಣಗಳು ವರದಿಯಾಗುತ್ತಿದೆ. ಹೀಗೆಯೇ ವಂಚಕನೋರ್ವ ಮುಂಬೈ ಪೊಲೀಸ್ ಸೋಗಿನಲ್ಲಿ ಪೊಲೀಸ್ ಅಧಿಕಾರಿಯೋರ್ವರಿಗೆಯೇ ಕರೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

- Advertisement -

ಕೇರಳದಲ್ಲಿ ಇಂತಹ ಘಟನೆ ನಡೆದಿದೆ. ವಂಚಕನೋರ್ವ ಪೊಲೀಸ್ ಅಧಿಕಾರಯ ಸೋಗಿನಲ್ಲಿ ನಿಜವಾಗಿ ಪೊಲೀಸ್ ಅಧಿಕಾರಿಯೊಬ್ಬರಿಗೆ ವಿಡಿಯೋ ಕರೆ ಮಾಡಿದ್ದಾನೆ. ಕೇರಳದ ತ್ರಿಶೂರ್ ಪೊಲೀಸರು ಈ ವಿಡಿಯೋ ಕರೆಯ ಸಂಪೂರ್ಣ ಸಂಭಾಷಣೆಯನ್ನು ವಿಡಿಯೋ ಮಾಡಿಕೊಂಡು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಹುಲಿಯನ್ನು ಹಿಡಿದ ಹುಲಿ” ಎಂದು ತ್ರಿಶೂರ್ ಪೊಲೀಸರು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬೆಳಗಾವಿ | ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ವಂಚನೆ: ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ

ಪೊಲೀಸ್ ಸಮವಸ್ತ್ರವನ್ನು ಧರಿಸಿರುವ ವಂಚಕನು ತನ್ನನ್ನು ತಾನು ಮುಂಬೈನ ಅಧಿಕಾರಿ ಎಂದು ಪರಿಚಯಿಸಿಕೊಳ್ಳುವುದನ್ನು ನಾವು ವಿಡಿಯೋದಲ್ಲಿ ನೋಡಬಹುದು. ಮೊದಲು ತ್ರಿಶೂರ್ ಪೊಲೀಸ್ ಅಧಿಕಾರಿ ವಂಚಕನಿಗೆ ತನ್ನ ಮುಖ ತೋರಿಸಿದೆಯೇ ಕ್ಯಾಮೆರಾ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿಕೊಂಡು ಕರೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ವೇಳೆಯೇ ವಂಚಕನ ಕಾಲರ್ ಐಡಿ, ವಿಳಾಸವನ್ನು ಟ್ರಾಕ್ ಮಾಡಲಾಗಿದೆ. ಅದಾದ ಬಳಿಕ “ನೀವು ಏನು ಮಾಡುತ್ತೀರಿ” ಎಂದು ಕ್ಯಾಮೆರಾದಲ್ಲಿ ಸಮವಸ್ತ್ರ ಧರಿಸಿದ್ದ ಪೊಲೀಸ್ ಅಧಿಕಾರಿ ಪ್ರಶ್ನಿಸಿದ್ದಾರೆ. ಇದನ್ನು ನೋಡಿ ವಂಚಕ ಆಘಾತಕ್ಕೊಳಗಾಗಿರುವುದು ಕಂಡುಬಂದಿದೆ.

“ಮೊದಲು ಈ ಕೆಲಸವನ್ನು ಮಾಡುವುದನ್ನು ನಿಲ್ಲಿಸಿ. ನನ್ನ ಬಳಿ ನಿಮ್ಮ ವಿಳಾಸ, ನಿಮ್ಮ ಸ್ಥಳ ಮತ್ತು ಎಲ್ಲವೂ ಇದೆ. ಇದು ಸೈಬರ್ ಸೆಲ್. ನೀವು ಈ ಕೆಲಸವನ್ನು ಮಾಡುವುದನ್ನು ನಿಲ್ಲಿಸುವುದು ಉತ್ತಮ” ಎಂದು ವಂಚಕನಿಗೆ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ತ್ರಿಶೂರ್ ನಗರ ಪೊಲೀಸರು ಮಂಗಳವಾರ ಈ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವೈರಲ್ ಆಗುತ್ತಿದೆ. ಈವರೆಗೆ 11,255 ಲೈಕ್‌ಗಳು ಮತ್ತು 2,53,000 ಜನರು ಈ ವಿಡಿಯೋವನ್ನು ನೋಡಿದ್ದಾರೆ. ಹಾಗೆಯೇ ನೆಟ್ಟಿಗರು ಪೊಲೀಸರ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...