ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯಲ್ಲಿ ಗುಜರಾತ್‌ಗೆ ಅಗ್ರ ಸ್ಥಾನ; 12ನೇ ಸ್ಥಾನದಲ್ಲಿ ಕರ್ನಾಟಕ

Date:

ದೇಶಾದ್ಯಂತ ಅರ್ಧದಲ್ಲಿಯೇ ಶಾಲೆ ತೊರೆದ ಮಕ್ಕಳ ಸಂಖ್ಯೆ‌ ಗಣನೀಯವಾಗಿದೆ. ಅತೀ ಹೆಚ್ಚು ಮಕ್ಕಳು ಶಾಲೆ ತೊರೆದ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅವರ ತವರು ರಾಜ್ಯ ಅಗ್ರಸ್ಥಾನದಲ್ಲಿದೆ. ಕರ್ನಾಟಕವು 12ನೇ ಸ್ಥಾನದಲ್ಲಿದೆ ಎಂಬುದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನೀಡಿದ ಮಾಹಿತಿಯಿಂದ ತಿಳಿದುಬಂದಿದೆ. ದಕ್ಷಿಣ ಭಾರತದಲ್ಲಿ 6 ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

- Advertisement -

ಇತ್ತೀಚೆಗೆ ಮುಗಿದ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ವಿವಿಧ ರಾಜ್ಯಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ವಿವರವನ್ನು ಕೇಳಿದ್ದರು. ಅವರ ಪ್ರಶ್ನೆಗೆ ಸಚಿವಾಲಯ ಲಿಖಿತವಾಗಿ ಉತ್ತರಿಸಿತ್ತು. ಇದೀಗ, ಸಚಿವಾಲಯ ನೀಡಿದ್ದ ಮಾಹಿತಿ ದೊರೆತಿದದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಚಿವಾಲಯದ ಮಾಹಿತಿ ಪ್ರಕಾರ, 2025-26ರ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದಲ್ಲಿ 14,087 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಅವರಲ್ಲಿ 6,462 ಬಾಲಕಿಯರಿದ್ದಾರೆ. ಕಳೆದ ಶೈಕ್ಷಣಿಕ ವರ್ಷಕ್ಕೆ‌(2024-25) ಹೋಲಿಸಿದರೆ, ಈ ವರ್ಷ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಅಧಿಕವಾಗಿದೆ. ಕಳೆದ ವರ್ಷ 9,422 ಮಕ್ಕಳು ಹೊರಗುಳಿದಿದ್ದರು. ಅವರಲ್ಲಿ ಬಾಲಕಿಯರ ಸಂಖ್ಯೆ 115 ಮಾತ್ರವೇ ಇತ್ತು.

ಇಡೀ ಭಾರತದ ಎಲ್ಲ ರಾಜ್ಯಗಳನ್ನು ಪರಿಗಣಿಸಿದರೆ
ಗುಜರಾತ್‌ನಲ್ಲಿ ಅತೀ ಹೆಚ್ಚು ಮಕ್ಕಳು ಶಾಲೆ ತೊರೆದಿದ್ದಾರೆ. ನಂತರದ ಎರಡು ಮತ್ತು ಮೂರನೇ ಸ್ಥಾನದಲ್ಲಿ ಕ್ರಮವಾಗಿ ಅಸ್ಸಾಂ ಮತ್ತು ಉತ್ತರ ಪ್ರದೇಶ ಇದೆ ಎಂದು ಸಚಿವಾಲಯದ ಮಾಹಿತಿ ವಿವರಿಸಿದೆ.

ದಕ್ಷಿಣ ಭಾರತದಲ್ಲಿ ಆಂಧ್ರಪ್ರದೇಶವು ಅಗ್ರ ಸ್ಥಾನದಲ್ಲಿದೆ. ಆ ರಾಜ್ಯದಲ್ಲಿ 46,463 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅವರಲ್ಲಿ 17,584 ಬಾಲಕಿಯರು. ತಮಿಳುನಾಡಿನಲ್ಲಿ 19,897 ಮಕ್ಕಳು ಹೊರಗುಳಿದಿದ್ದು ಅವರಲ್ಲಿ 9,054 ಹುಡುಗಿಯರು. ತೆಲಂಗಾಣವು ನಾಲ್ಕನೇ ಸ್ಥಾನದಲ್ಲಿದ್ದು, ಅಲ್ಲಿ 4,753 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಅವರಲ್ಲಿ 2006 ಹೆಣ್ಣು ಮಕ್ಕಳಿದ್ದಾರೆ.

ಇಡೀ ದೇಶದಲ್ಲಿ ಅತೀ ಕಡಿಮೆ ಮಕ್ಕಳು ಶಾಲೆಯಿಂದ ಹೊರಗುಳಿದಿರುವ ರಾಜ್ಯ ಕೇರಳವಾಗಿದೆ. ಅಲ್ಲಿ, 1,773 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಈ ಪೈಕಿ 539 ಬಾಲಕಿಯರಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಹೊರತಾಗಿಯೂ, ಹಲವು ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಶಿಕ್ಷಕರ ಕೊರತೆ ಇದೆ. ಈ ಕಾರಣಗಳ ಜೊತೆಗೆ ಬಾಲ್ಯವಿವಾಹವು ಹೆಣ್ಣುಮಕ್ಕಳು ಶಾಲೆಯಿಂದ ಹೊರಗುಳಿಯಲು ಪ್ರಮುಖ ಕಾರಣವಾಗಿದೆ‌ ಎಂದು ಸಚಿವಾಲಯ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...