ಕಳಪೆ ಆಹಾರ, ಶಿಕ್ಷಣ ವ್ಯವಸ್ಥೆಯಿಂದ ಬೇಸತ್ತ ವಿದ್ಯಾರ್ಥಿನಿಯರು: 8 ಕಿ.ಮೀ ನಡೆದು ಬ್ಲಾಕ್ ಕಚೇರಿಗೆ ಮುತ್ತಿಗೆ

Date:

ಶಾಲೆಯೊಂದರ ಕಳಪೆ ಮೂಲಸೌಕರ್ಯದಿಂದ ಬೇಸತ್ತ 300 ವಿದ್ಯಾರ್ಥಿನಿಯರು ಸುಮಾರು 8 ಕಿ.ಮೀ ಜಾಥಾ ನಡೆಸಿ ಬ್ಲಾಕ್ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಜಾರ್ಖಂಡ್‌ನ ಕೊಡೆರ್ಮಾದಲ್ಲಿ ನಡೆದಿದೆ.

- Advertisement -

ಕೊಡೆರ್ಮಾದ ಕಸ್ತೂರ್ಬಾ ಗಾಂಧಿ ವಸತಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರು ಶುಕ್ರವಾರ ಬೀದಿಗಿಳಿದಿದ್ದಾರೆ. ಸತ್ಗವಾನ್ ಬ್ಲಾಕ್ ಕಚೇರಿಗೆ ಸುಮಾರು ಎಂಟು ಕಿ.ಮೀ. ಕಾಲ್ನಡಿಗೆಯಲ್ಲಿ ಬಂದು ಮುತ್ತಿಗೆ ಹಾಕಿದ್ದಾರೆ. ಮೆರವಣಿಗೆಯ ಸಮಯದಲ್ಲಿ, ಹಲವಾರು ವಿದ್ಯಾರ್ಥಿಗಳು ಮೂರ್ಛೆ ಹೋಗಿದ್ದು ಅವರನ್ನು ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿ: ಉತ್ತರ ಪ್ರದೇಶ | ಶಾಲೆಗೆ ರಸ್ತೆ ನಿರ್ಮಿಸಿ: ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಜೆನ್-ಆಲ್ಫಾ

ಶಾಲೆಯಲ್ಲಿನ ವಿವಿಧ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರು ಆಗಾಗೇ ಶಾಲಾ ಮಂಡಳಿ ಗಮನಕ್ಕೆ ತಂದಿದ್ದಾರೆ, ಕಳವಳ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅದಾದ ಬಳಿಕ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಮನೋಜ್ ಕುಮಾರ್ ರವಿ, ಸ್ಥಳೀಯ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಇತರ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದರು.

ಅದಾದ ಬಳಿಕ ಒಂದು ವಾರ ಕಳೆದರೂ ಯಾವುದೇ ಕ್ರಮಕೈಗೊಂಡದಿರುವುದರಿಂದ ನಿರಾಶೆಗೊಂಡ ವಿದ್ಯಾರ್ಥಿಯರು, ಬ್ಲಾಕ್ ಕಚೇರಿಯನ್ನು ಸುತ್ತುವರೆದು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದ್ದಾರೆ. ಕಳಪೆ ಗುಣಮಟ್ಟದ ಆಹಾರ ಮತ್ತು ಶಿಕ್ಷಣ ವ್ಯವಸ್ಥೆಯ ಸ್ಥಿತಿಯಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು “ಶಿಕ್ಷಣ ನಮ್ಮ ಹಕ್ಕು” ಮತ್ತು “ನಾವು ಮಕ್ಕಳು ನಮ್ಮ ಹಕ್ಕುಗಳನ್ನು ಪಡೆಯಲು ದೃಢನಿಶ್ಚಯ ಮಾಡಿದ್ದೇವೆ” ಎಂಬ ಫಲಕಗಳನ್ನು ಹಿಡಿದು ಬ್ಲಾಕ್ ಪ್ರಧಾನ ಕಚೇರಿಗೆ ಮೆರವಣಿಗೆ ನಡೆಸಿದರು.

ನಾವು ಪ್ರತಿಭಟಿಸಲು ಬಯಸುವುದಿಲ್ಲ. ಆದರೆ ಆದರೆ ಉತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಬಯಸುತ್ತೇವೆ. ಪದೇ ಪದೇ ಮನವಿ ಮಾಡಿದರೂ ತಮ್ಮ ದೂರುಗಳು ಬಗೆಹರಿಯದೇ ಇರುವಾಗ ನಾವು ಯಾರನ್ನು ಸಂಪರ್ಕಿಸುವುದು ಎಂದು ವಿದ್ಯಾರ್ಥಿನಿಯರು ಪ್ರಶ್ನಿಸಿದ್ದಾರೆ.

ಇನ್ನು ಜಿಲ್ಲಾ ಶಿಕ್ಷಣ ಅಧಿಕಾರಿ ಮುಕುಲ್ ರಾಜ್ ಬ್ಲಾಕ್ ಕಚೇರಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ್ದಾರೆ. ಶಾಲೆಯಲ್ಲಿನ ನ್ಯೂನತೆಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಭರವಸೆಯ ನಂತರ, ವಿದ್ಯಾರ್ಥಿಗಳು ತಮ್ಮ ಶಾಲೆಗೆ ಮರಳಿದ್ದಾರೆ.

ಈ ಹಿಂದೆ ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯಲ್ಲಿನ ಹಲವು ಅಧ್ವಾನಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜೆನ್‌ ಝೀಗಳು ದೆಹಲಿಯ ಜಂತರ್‌ಮಂತರ್‌ನಲ್ಲಿ ಹಲವು ದಿನಗಳ ಕಾಲ ಧರಣಿ ನಡೆಸಿದ್ದಾರೆ. ಧರ್ಮೇಂದ್ರ ಪ್ರಧಾನ್ ತನ್ನ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೇ ಧರಣಿ ಅಂತ್ಯಗೊಳಿಸಿದ್ದಾರೆ. ಅದಾದ ಬಳಿಕ ಇದೀಗ ದೇಶಾದ್ಯಂತ ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಕರೆಯಂತೆ ಜೆನ್‌ ಆಲ್ಫಾಗಳು ತಮ್ಮ ಶಾಲೆಯ ಕಳಪೆ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಲು ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...