ಪ್ಯಾಲೆಸ್ತೀನ್‌ ಪರ ಪೋಸ್ಟ್‌ಗೆ ಲೈಕ್, ಕಾಮೆಂಟ್ ಮಾಡಿದ ಪ್ರಾಂಶುಪಾಲರಿಗೆ ರಾಜೀನಾಮೆ ನೀಡಲು ಸೂಚನೆ!

Date:

ಪ್ಯಾಲೆಸ್ತೀನ್‌ ಮತ್ತು ಹಮಾಸ್-ಇಸ್ರೇಲ್ ಸಂಘರ್ಷದ ಬಗ್ಗೆ ಎಕ್ಸ್‌ನಲ್ಲಿ (ಟ್ವಿಟ್ಟರ್) ಪೋಸ್ಟ್‌ಗಳಿಗೆ ಲೈಕ್ ಮತ್ತು ಕಾಮೆಂಟ್ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್‌ ಅವರಿಗೆ ರಾಜೀನಾಮೆ ನೀಡುವಂತೆ ಶಾಲಾ ಆಡಳಿತ ಮಂಡಳಿಯು ಸೂಚಿಸಿದೆ ಎಂದು ವರದಿಯಾಗಿದೆ.

- Advertisement -

ವಿದ್ಯಾವಿಹಾರ್‌ನ ಸೋಮಯ್ಯ ಶಾಲೆಯಲ್ಲಿ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಮತ್ತು 7 ವರ್ಷಗಳ ಹಿಂದೆ ಅದರ ಪ್ರಾಂಶುಪಾಲರಾದ ಪರ್ವೀನ್ ಶೇಖ್ “ನಾನು ಸಂಸ್ಥೆಯ ಏಳಿಗಾಗಿ ಶೇಕಡ 100ರಷ್ಟು ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದು, ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ?  ಕೇರಳ| ಪ್ಯಾಲೆಸ್ತೀನ್ ಪರ ಪೋಸ್ಟರ್‌ ಹರಿದ ಆರೋಪ; ಇಬ್ಬರು ಆಸ್ಟ್ರೇಲಿಯಾದ ಮಹಿಳೆಯರ ಮೇಲೆ ಪ್ರಕರಣ

ಪರ್ವೀನ್ ಶೇಖ್ ಅವರು ಪ್ಯಾಲೆಸ್ತೀನ್ ಪರ ಪೋಸ್ಟ್‌ಗಳಿಗೆ ಕಾಮೆಂಟ್ ಮತ್ತು ಲೈಕ್ ಮಾಡಿದ್ದನ್ನು ಹೈಲೈಟ್ ಮಾಡಿಕೊಂಡು ಹಿಂದುತ್ವಪರ ಪೋರ್ಟಲ್‌ OpIndia ಏಪ್ರಿಲ್ 24 ರಂದು ಒಂದು ವರದಿಯನ್ನು ಪ್ರಕಟಿಸಿತ್ತು. ಈ ವರದಿ ಪ್ರಕಟವಾದ ಬಳಿಕ ಶಾಲೆಯ ಆಡಳಿತ ಪರ್ವೀನ್ ಶೇಖ್ ಅವರಿಗೆ ರಾಜೀನಾಮೆ ನೀಡಲು ಸೂಚಿಸಿದೆ.

“ಏಪ್ರಿಲ್ 26 ರಂದು ನಡೆದ ಸಭೆಯಲ್ಲಿ ಶಾಲೆಯ ಆಡಳಿತ ನನ್ನನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದೆ, ಹಾಗೆಯೇ ಇದು ಶಾಲೆಯ ಆಡಳಿತಕ್ಕೆ ಒಂದು ಕಠಿಣ ನಿರ್ಧಾರ ಎಂದು ಹೇಳಿದೆ. ನಾನು ಕೆಲಸ ಮಾಡುವುದನ್ನು ಮುಂದುವರಿಸಿದೆ. ಆದರೆ ನ್ನ ಮೇಲೆ ರಾಜೀನಾಮೆ ನೀಡುವಂತೆ ಒತ್ತಡ ಹಾಕಲಾಗುತ್ತಿತ್ತು” ಎಂದು ಪರ್ವೀನ್ ಶೇಖ್ ಹೇಳಿದ್ದಾರೆ.

“ನಾನು ಪ್ರಜಾಸತ್ತಾತ್ಮಕ ಭಾರತದಲ್ಲಿ ವಾಸಿಸುತ್ತಿದ್ದೇನೆ. ನಾನು ವಾಕ್ ಸ್ವಾತಂತ್ರ್ಯದ ತತ್ವವನ್ನು ಹೆಚ್ಚು ಗೌರವಿಸುತ್ತೇನೆ. ಏಕೆಂದರೆ ಅದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ನನ್ನ ಅಭಿವ್ಯಕ್ತಿಯು ಇಂತಹ ದುರುದ್ದೇಶಪೂರಿತ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ. ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...