ಸರ್ಕಾರದ ನೀತಿ ವಿರುದ್ಧ ಪೋಸ್ಟ್ ಹಾಕಿದರೆ ಸೇವೆಯಿಂದ ವಜಾ: ಜಮ್ಮು ಕಾಶ್ಮೀರದ ಶಾಲಾ ಸಿಬ್ಬಂದಿಗೆ ಎಚ್ಚರಿಕೆಯ ಸುತ್ತೋಲೆ

Date:

ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ (ಸಿಇಒ) ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೀತಿಗಳನ್ನು ಟೀಕಿಸದಂತೆ ಸೂಚನೆ ನೀಡಿದ್ದಾರೆ. ಈ ನಿಯಮವನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ, ಸೇವೆಯಿಂದ ವಜಾಗೊಳಿಸುವಿಕೆ ಸೇರಿದಂತೆ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

- Advertisement -

ಶನಿವಾರ ಬಿಡುಗಡೆಯಾದ ಸುತ್ತೋಲೆಯಲ್ಲಿ, ಶಿಕ್ಷಣ ಇಲಾಖೆಯ ಎಲ್ಲಾ ಉದ್ಯೋಗಿಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ “ಅನಗತ್ಯ ಚರ್ಚೆ, ವಿವಾದಗಳಲ್ಲಿ ಭಾಗವಹಿಸುವುದು, ಅನುಚಿತ ವಿಷಯವನ್ನು ಹಂಚಿಕೊಳ್ಳುವುದು, ಕಾಮೆಂಟ್‌ ಮಾಡುವುದು ಅಥವಾ ಪೋಸ್ಟ್‌ ಮಾಡುವುದನ್ನು” ತಪ್ಪಿಸಬೇಕು ಎಂದು ಸಿಇಒ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಪುಲ್ವಾಮಾದ ಶಾಸಕ ಮತ್ತು ಪಿಡಿಪಿ ನಾಯಕ ವಾಹೀದ್‌ ಪಾರಾ ಈ ಆದೇಶವನ್ನು ತೀವ್ರವಾಗಿ ಖಂಡಿಸಿದ್ದಾರೆ. “ಈ ಆದೇಶವು ಜನರ ಧ್ವನಿಯನ್ನು ಎತ್ತುವುದನ್ನು ತಡೆಯುತ್ತದೆ” ಎಂದು ಆಕ್ಷೇಪಿಸಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಮೌನವಾಗಿರುವ ವಾತಾವರಣದಲ್ಲಿ, ಶಿಕ್ಷಕರು ಮತ್ತು ಸರ್ಕಾರಿ ಸಿಬ್ಬಂದಿಯ ಧ್ವನಿಯನ್ನು ದಮನ ಮಾಡುವ ಈ ಕ್ರಮ ಆತಂಕಕಾರಿ ಎಂದಿದ್ದಾರೆ. “ಜನರಿಗೆ ಧ್ವನಿ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರವು ಈಗ ಉಳಿದಿರುವ ಕೆಲವು ಧ್ವನಿಗಳನ್ನು ಸಹ ಮೌನಗೊಳಿಸುತ್ತಿದೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ, ಜೊತೆಗೆ ಸುತ್ತೋಲೆಯ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಸಿಇಒ ಅವರ ಪ್ರಕಾರ, ಶಿಕ್ಷಣ ಇಲಾಖೆಯ ಆಡಳಿತ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ, ಸಾಮಾಜಿಕ ಮಾಧ್ಯಮಗಳ ದುರ್ಬಳಕೆಯ ಕುರಿತು ಚರ್ಚೆಯಾಗಿದೆ. ಇಂತಹ ಕೃತ್ಯಗಳು ಇಲಾಖೆಯ ನೀತಿಗಳಿಗೆ ಹಸ್ತಕ್ಷೇಪ ಮಾಡುವಂತಿದ್ದು, 2023ರಲ್ಲಿ ಸರ್ಕಾರವು ಜಾರಿಗೊಳಿಸಿದ ಸುತ್ತೋಲೆಯ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಆಡಳಿತ ಕಾರ್ಯದರ್ಶಿಯು ಎಲ್ಲ ಮುಖ್ಯ ಶಿಕ್ಷಣಾಧಿಕಾರಿಗಳಿಗೆ ಇಂತಹ ಉಲ್ಲಂಘನೆಗಳನ್ನು ಆಡಳಿತದ ಗಮನಕ್ಕೆ ತರಲು ಸೂಚಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳಿಗೆ ಸಂಬಂಧಿಸಿದ ಸುತ್ತೋಲೆಯು ಉಲ್ಲಂಘನೆಗೆ ಶಿಕ್ಷೆಯನ್ನು ಒಳಗೊಂಡಿದ್ದು, ಇದರಲ್ಲಿ ಛೀಮಾರಿ, ಒಂದು ತಿಂಗಳ ವೇತನಕ್ಕಿಂತ ಹೆಚ್ಚಿಲ್ಲದ ದಂಡ, ವೇತನ ವೃದ್ಧಿ ಅಥವಾ ಬಡ್ತಿ ತಡೆಹಿಡಿಯುವಿಕೆ, ದರ್ಜೆ ಕಡಿಮೆಗೊಳಿಸುವಿಕೆ, ಸರ್ಕಾರಕ್ಕೆ ಆರ್ಥಿಕ ನಷ್ಟವಾದಲ್ಲಿ ವೇತನದಿಂದ ವಸೂಲಿ, ಅಕಾಲಿಕ ನಿವೃತ್ತಿ ಮತ್ತು ಸೇವೆಯಿಂದ ತೆಗೆದುಹಾಕುವಿಕೆ ಸೇರಿವೆ.

ಆದಾಗ್ಯೂ, ಈ ಸುತ್ತೋಲೆಯು ಉದ್ಯೋಗಿಗಳು ಸಾಮಾಜಿಕ ಮಾಧ್ಯಮವನ್ನು ಬಳಸದಂತೆ ನಿಷೇಧಿಸಿಲ್ಲ ಮತ್ತು ಇದನ್ನು “ಸಕಾರಾತ್ಮಕ ಮತ್ತು ರಚನಾತ್ಮಕ ಉದ್ದೇಶಗಳಿಗಾಗಿ” ಬಳಸಬಹುದು ಎಂದು ಸ್ಪಷ್ಟಪಡಿಸಿದೆ.

ಪಿಡಿಪಿ ನಾಯಕ ವಾಹೀದ್‌ ಪಾರಾ ಈ ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಹಿಂದೆ ವಿಧಾನಸಭೆಗೆ ತಿಳಿಸಿದಂತೆ, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್‌ ಸುದ್ದಿ ವೇದಿಕೆಗಳನ್ನು ನಿಯಂತ್ರಿಸಲು ಹೊಸ ಮಾಧ್ಯಮ ನೀತಿಯನ್ನು ರೂಪಿಸುತ್ತಿದೆ. ಇದು 2020ರಲ್ಲಿ ಬಿಜೆಪಿಯ ಲೆಫ್ಟಿನೆಂಟ್‌ ಗವರ್ನರ್‌ ಆಡಳಿತದಿಂದ ಅನುಮೋದನೆಗೊಂಡ “ನ್ಯೂ ಮೀಡಿಯಾ ಪಾಲಿಸಿ”ಯನ್ನು ಅನುಸರಿಸಿದೆ, ಇದನ್ನು ಅದರ ಸರ್ವಾಧಿಕಾರಿ ಸ್ವರೂಪಕ್ಕಾಗಿ ಪತ್ರಕರ್ತರು, ನಾಗರಿಕ ಸಮಾಜದ ಗುಂಪುಗಳು ಮತ್ತು ರಾಜಕೀಯ ನಾಯಕರು ಖಂಡಿಸಿದ್ದರು ಎಂದು ಪಾರಾ ತಿಳಿಸಿದ್ದಾರೆ. “ಈ ಆದೇಶವನ್ನು ತಕ್ಷಣ ರದ್ದುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ವಿಷಾಹಾರ ಸೇವಿಸಿದ ಶಂಕೆ

ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ...

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...