16 ವರ್ಷದ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯೊಂದರ ಶಿಕ್ಷಕಿಯನ್ನು ಬಂಧಿಸಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಭಾಷೆ ಬೋಧಿಸುವ 40 ವರ್ಷದ ಆರೋಪಿ ಶಿಕ್ಷಕಿಯನ್ನು ಬಂಧಿಸಲಾಗಿದೆ. ಆಕೆ ತನ್ನ ವಿದ್ಯಾರ್ಥಿಯನ್ನು ಐಷಾರಾಮಿ ಹೋಟೆಲ್‌ಗೆ ಕರೆದೊಯ್ದು, ಅಲ್ಲಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಶಿಕ್ಷಕಿಯು ಸಂತ್ರಸ್ತ ಬಾಲಕನ ಮೇಲೆ ಎಷ್ಟು ಮೋಹ ಹೊಂದಿದ್ದರು ಎಂದರೆ, ಆತ ಶಾಲೆಯಿಂದ ಹೊರಗುಳಿದ ಬಳಿಕವೂ ಆತನನ್ನು ಸಂಪರ್ಕಿಸಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
“2023ರ ಡಿಸೆಂಬರ್‌ನಲ್ಲಿ ನಡೆದ ಶಾಲೆಯ ವಾರ್ಷಿಕ ಸಮಾರಂಭದ ಭಾಗವಾಗಿ ನಡೆಯುತ್ತಿರುವ ಸಭೆಗಳು-ಕಾರ್ಯಕ್ರಮಗಳ ಸಮಯದಲ್ಲಿ ಶಿಕ್ಷಕಿಯು ವಿದ್ಯಾರ್ಥಿಯತ್ತ ಆಕರ್ಷಿತರಾಗಿದ್ದರು. ಅವರು 2024ರ ಜನವರಿಯಲ್ಲಿ ಮೊದಲ ಬಾರಿಗೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ, ವಿದ್ಯಾರ್ಥಿಯು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣನಾದ ಬಳಿಕ, ಶಾಲೆಯನ್ನು ತೊರೆದಿದ್ದರು. ಆದರೆ, ಆತ ತನ್ನ ಮೇಲಾದ ದೌರ್ಜನ್ಯದಿಂದ ಖಿನ್ನತೆಗೆ ಒಳಗಾಗಿದ್ದರು. ಬಳಿಕ, ಬಾಲಕನು ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾನೆ. ಬಳಿಕ, ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಶಿಕ್ಷಕಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಶಿಕ್ಷಕಿಯನ್ನು ಬಂಧಿಸಿದ್ದಾರೆ.