ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಶಿಕ್ಷಕಿ ಬಂಧನ

Date:

16 ವರ್ಷದ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯೊಂದರ ಶಿಕ್ಷಕಿಯನ್ನು ಬಂಧಿಸಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

- Advertisement -

ಖಾಸಗಿ ಶಾಲೆಯಲ್ಲಿ ಇಂಗ್ಲಿಷ್‌ ಭಾಷೆ ಬೋಧಿಸುವ 40 ವರ್ಷದ ಆರೋಪಿ ಶಿಕ್ಷಕಿಯನ್ನು ಬಂಧಿಸಲಾಗಿದೆ. ಆಕೆ ತನ್ನ ವಿದ್ಯಾರ್ಥಿಯನ್ನು ಐಷಾರಾಮಿ ಹೋಟೆಲ್‌ಗೆ ಕರೆದೊಯ್ದು, ಅಲ್ಲಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಬಂಧಿತ ಶಿಕ್ಷಕಿಯು ಸಂತ್ರಸ್ತ ಬಾಲಕನ ಮೇಲೆ ಎಷ್ಟು ಮೋಹ ಹೊಂದಿದ್ದರು ಎಂದರೆ, ಆತ ಶಾಲೆಯಿಂದ ಹೊರಗುಳಿದ ಬಳಿಕವೂ ಆತನನ್ನು ಸಂಪರ್ಕಿಸಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

“2023ರ ಡಿಸೆಂಬರ್‌ನಲ್ಲಿ ನಡೆದ ಶಾಲೆಯ ವಾರ್ಷಿಕ ಸಮಾರಂಭದ ಭಾಗವಾಗಿ ನಡೆಯುತ್ತಿರುವ ಸಭೆಗಳು-ಕಾರ್ಯಕ್ರಮಗಳ ಸಮಯದಲ್ಲಿ ಶಿಕ್ಷಕಿಯು ವಿದ್ಯಾರ್ಥಿಯತ್ತ ಆಕರ್ಷಿತರಾಗಿದ್ದರು. ಅವರು 2024ರ ಜನವರಿಯಲ್ಲಿ ಮೊದಲ ಬಾರಿಗೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ, ವಿದ್ಯಾರ್ಥಿಯು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣನಾದ ಬಳಿಕ, ಶಾಲೆಯನ್ನು ತೊರೆದಿದ್ದರು. ಆದರೆ, ಆತ ತನ್ನ ಮೇಲಾದ ದೌರ್ಜನ್ಯದಿಂದ ಖಿನ್ನತೆಗೆ ಒಳಗಾಗಿದ್ದರು. ಬಳಿಕ, ಬಾಲಕನು ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾನೆ. ಬಳಿಕ, ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಶಿಕ್ಷಕಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಶಿಕ್ಷಕಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...